ಬ್ರೇಕಿಂಗ್ ನ್ಯೂಸ್
20-07-23 08:55 pm Mangalore Correspondent ಕರಾವಳಿ
ಮಂಗಳೂರು, ಜುಲೈ 20: ಬೆಂಗಳೂರು ವಿಶ್ವವಿದ್ಯಾಲಯದ ನೂತನ ಕುಲಸಚಿವರಾಗಿ (ಆಡಳಿತ) ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಉಜಿರೆ ನಿವಾಸಿ ಪ್ರಸ್ತುತ ಬೆಂಗಳೂರಿನಲ್ಲಿ ವಾಸ್ತವ್ಯವಿರುವ ಶೇಕ್ ಲತೀಫ್ ನೇಮಕಗೊಂಡಿದ್ದು ಅಧಿಕಾರ ಸ್ವೀಕರಿಸಿದ್ದಾರೆ.
ಕೆಎಎಸ್ ಅಧಿಕಾರಿಯಾಗಿರುವ ಶೇಕ್ ಲತೀಫ್ ಈ ಹಿಂದೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಹಣಕಾಸು ಸದಸ್ಯರಾಗಿದ್ದರು. ಮೊದಲಿಗೆ ರಾಜ್ಯ ಲೆಕ್ಕ ಪರಿಶೋಧನೆ ಮತ್ತು ಲೆಕ್ಕಪತ್ರ ವಿಭಾಗದ ಸಹಾಯಕ ನಿಯಂತ್ರಣ ಅಧಿಕಾರಿಯಾಗಿದ್ದ ಶೇಕ್ ಲತೀಫ್ ಬಳಿಕ ಪದವಿಪೂರ್ವ ಶಿಕ್ಷಣ ಇಲಾಖಾ ಲೆಕ್ಕಾಧಿಕಾರಿಯಾಗಿ, ದ.ಕ. ಜಿಲ್ಲಾ ಪಂಚಾಯತ್ ಮುಖ್ಯ ಲೆಕ್ಕಾಧಿಕಾರಿಯಾಗಿ, ಕರ್ನಾಟಕ ರಾಜ್ಯ ಹಜ್ ಸಮಿತಿಯ ಕಾರ್ಯ ನಿರ್ವಹಣಾಧಿಕಾರಿಯಾಗಿ, ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಮುಖ್ಯ ಹಣಕಾಸು ಅಧಿಕಾರಿಯಾಗಿ, ಬೆಂಗಳೂರು ಮಹಾನಗರ ಸಾರಿಗೆ ನಿಗಮದ ಆರ್ಥಿಕ ಸಲಹೆಗಾರರಾಗಿ, ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ ಪ್ರಧಾನ ವ್ಯವಸ್ಥಾಪಕರಾಗಿ (ಆರ್ಥಿಕ) ವಿವಿಧ ಇಲಾಖೆಗಳಲ್ಲಿ ಕರ್ತವ್ಯ ನಿರ್ವಹಿಸಿದ್ದರು.
ದೆಹಲಿಯ ಇನ್ಸ್ಟಿಟ್ಯೂಟ್ ಆಫ್ ಕಂಪನಿ ಸೆಕ್ರೆಟರಿ ಆಫ್ ಇಂಡಿಯಾ ಇವರು ನಡೆಸುವ ಪರೀಕ್ಷೆಯಲ್ಲಿ ತೇರ್ಗಡೆಯಾಗಿದ್ದು ಪ್ರಸ್ತುತ ಅದರ ಫೆಲೋ ಮೆಂಬರ್ (ಎಫ್.ಸಿ.ಎಸ್.) ಆಗಿರುತ್ತಾರೆ. ಬಹುಶಃ ರಾಜ್ಯದಲ್ಲೇ ಬೆರಳೆಣಿಕೆಯ ಅಧಿಕಾರಿಗಳಿಗೆ ಮಾತ್ರ ಈ ಸ್ಥಾನ ಲಭಿಸಿದ್ದು, ಆ ಸಾಲಿನಲ್ಲಿ ಶೇಕ್ ಲತೀಫ್ ಕೂಡ ಓರ್ವರು. 1995-96ರಲ್ಲಿ ಮಂಗಳೂರು ವಿ.ವಿ. ವ್ಯಾಪ್ತಿಯಲ್ಲಿ ಬಿ.ಕಾಂನಲ್ಲಿ ಎರಡನೇ ರ್ಯಾಂಕ್ ಪಡೆದಿದ್ದ ಶೇಕ್ ಲತೀಫ್ ಬಿ.ಕಾಂ. (ಕಾನೂನು ಮತ್ತು ಬ್ಯಾಂಕಿಂಗ್ ಅಭ್ಯಾಸ) ಪದವಿಯಲ್ಲಿ ಅತ್ಯಧಿಕ ಅಂಕ ಪಡೆದು ಎ.ಬಿ.ಶೆಟ್ಟಿ ಸ್ಮಾರಕ ಚಿನ್ನದ ಪದಕ ಪಡೆದಿದ್ದರು. 97-98ರಲ್ಲಿ ಎಂ.ಬಿ.ಎ. ಯಲ್ಲಿ ಮಂಗಳೂರು ವಿ.ವಿ. ವ್ಯಾಪ್ತಿಯಲ್ಲಿ ಪ್ರಥಮ ರ್ಯಾಂಕ್ ನೊಂದಿಗೆ ಗೋಲ್ಡ್ ಮೆಡಲ್ ಗೆ ಭಾಜನರಾಗಿದ್ದರು. ವೈಶ್ಯ ಬ್ಯಾಂಕ್ ಕೂಡ ಈ ಸಂದರ್ಭ ಚಿನ್ನದ ಪದಕ ನೀಡಿ ಗೌರವಿಸಿತ್ತು. 1995ರಲ್ಲಿ 800 ಮೀಟರ್ ಓಟದಲ್ಲಿ ಮಂಗಳೂರು ವಿವಿಗೆ ಪ್ರಥಮರಾಗಿ ಚಿನ್ನದ ಪದಕ ಪಡೆದಿದ್ದ ಶೇಕ್ ಲತೀಫ್ ರಾಷ್ಟ್ರ ಮಟ್ಟದ ಗುಡ್ಡಗಾಡು ಓಟದಲ್ಲಿ ಎರಡು ಬಾರಿ ಮಂಗಳೂರು ವಿ.ವಿ.ಯನ್ನು ಪ್ರತಿನಿಧಿಸಿದ್ದು, ಒಂದು ಬಾರಿ ವಿ.ವಿ. ತಂಡದ ನಾಯಕರಾಗಿದ್ದರು.
ಬೆಳ್ತಂಗಡಿ ತಾಲೂಕಿನ ಉಜಿರೆಯ ಓಡಲ ನಿವಾಸಿ ಶೇಕ್ ಪಕೀರ್ ಸಾಹೇಬ್ ಹಾಗೂ ರಶೀದಾಬಿ ದಂಪತಿ ಪುತ್ರನಾಗಿರುವ ಶೇಖ್ ಲತೀಫ್ ಉಜಿರೆಯ ದೊಂಪದಪಲ್ಕೆ ಓಡಲ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಪ್ರಾಥಮಿಕ ವಿದ್ಯಾಭ್ಯಾಸ ಪಡೆದಿದ್ದರು. ಹತ್ತನೇ ತರಗತಿ ತನಕ ಕನ್ನಡ ಮಾಧ್ಯಮದಲ್ಲೇ ಶಿಕ್ಷಣ ಪಡೆದಿದ್ದರು. ಪ್ರೌಢ, ಪದವಿಪೂರ್ವ ಮತ್ತು ಪದವಿ ಶಿಕ್ಷಣವನ್ನು ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ವಿದ್ಯಾಸಂಸ್ಥೆಯಲ್ಲಿ (ಎಸ್.ಡಿ.ಎಂ.) ಪಡೆದಿದ್ದಾರೆ. ಮಂಗಳೂರು ವಿಶ್ವವಿದ್ಯಾಲಯದಲ್ಲಿ ಎಂ.ಬಿ.ಎ. ಪದವಿಯನ್ನು ಪ್ರಥಮ ರ್ಯಾಂಕ್ ನೊಂದಿಗೆ ತೇರ್ಗಡೆಯಾಗಿದ್ದಾರೆ.
1998ನೇ ಸಾಲಿನ ಗಜೆಟೆಡ್ ಪ್ರೊಬೆಷನರಿ ಅಧಿಕಾರಿಯಾಗಿ ಸೇವೆ ಆರಂಭಿಸಿದ್ದು, ಹುದ್ದೆ ಬದಲಾವಣೆಯಿಂದ ರಾಜ್ಯ ಲೆಕ್ಕ ಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆಯಿಂದ ಕಂದಾಯ ಇಲಾಖೆಗೆ ತಹಶೀಲ್ದಾರ್ ಆಗಿ ಬದಲಾವಣೆ ಹೊಂದಿ ನಂತರ ಸಹಾಯಕ ಆಯುಕ್ತರಾಗಿ (ಕೆಎಎಸ್ ಕಿರಿಯ ಶ್ರೇಣಿ), ಬಳಿಕ ಹಿರಿಯ ಶ್ರೇಣಿ ಹಾಗೂ ಪ್ರಸ್ತುತ ಕೆಎಎಸ್ ಆಯ್ಕೆ ಶ್ರೇಣಿಗೆ ಪದೋನ್ನತಿ ಹೊಂದಿದ್ದಾರೆ.
Mangalore Belthangady native Shaikh Latif appointed as Registrar of Bangalore University.
12-11-25 11:10 pm
Bangalore Correspondent
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
12-11-25 02:54 pm
HK News Desk
ದೆಹಲಿ ಘಟನೆ, ಆತ್ಮಹತ್ಯಾ ಬಾಂಬರ್ ಆಗಿರಲಿಲ್ಲ, ಆಕಸ್ಮ...
11-11-25 10:56 pm
Mangaluru Kasaragod Highway: ಮಂಗಳೂರು- ಕಾಸರಗೋಡ...
11-11-25 10:20 pm
ಕೆಂಪುಕೋಟೆ ಕಾರು ಬ್ಲಾಸ್ಟ್ ಪ್ರಕರಣ ; ಜೈಶ್ ಉಗ್ರರ ಲ...
11-11-25 03:28 pm
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
12-11-25 06:56 pm
Mangalore Correspondent
Ullal Dargah Committee: ಉಳ್ಳಾಲ ದರ್ಗಾ ಕಮಿಟಿಯಲ್...
11-11-25 10:42 pm
Bomb blast in New Delhi, High Alert in Dakshi...
11-11-25 10:15 pm
Bhagvati Prem Ship, Mangalore: ಸುರತ್ಕಲ್ ; ಮರಳ...
08-11-25 08:31 pm
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
12-11-25 12:32 pm
Mangalore Correspondent
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm