ಬ್ರೇಕಿಂಗ್ ನ್ಯೂಸ್
27-07-23 07:49 pm Udupi Correspondent ಕರಾವಳಿ
ಉಡುಪಿ, ಜುಲೈ 27: ನಾನು ಬ್ರೇಕಿಂಗ್ ನ್ಯೂಸ್ ಕೊಡಲು ಇಲ್ಲಿ ಬಂದಿಲ್ಲ. ಇದು ವಿದ್ಯಾರ್ಥಿನಿಯರು, ಮಹಿಳೆಯರಿಗೆ ಸಂಬಂಧಪಟ್ಟ ವಿಚಾರ. ಏನು ಹೇಳೋದಕ್ಕೂ ಸ್ವಲ್ಪ ಟೈಮ್ ಬೇಕಾಗತ್ತೆ. ಟು ಮಿನಿಟ್ಸ್ ನೂಡಲ್ಸ್ ಥರ ಅಲ್ಲ ಎಂದು ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆ ಖುಷ್ಬು ಸುಂದರ್, ತನ್ನನ್ನು ಪದೇ ಪದೇ ಪ್ರಶ್ನೆ ಮಾಡಿದ ಟಿವಿ ಪತ್ರಕರ್ತರ ಬಗ್ಗೆ ಗರಂ ಆಗಿದ್ದಾರೆ.
ವಿಡಿಯೋ ಪ್ರಕರಣ ಸಂಬಂಧಿಸಿ ಉಡುಪಿಯ ನೇತ್ರಜ್ಯೋತಿ ಪ್ಯಾರಾ ಮೆಡಿಕಲ್ ಕಾಲೇಜಿಗೆ ಭೇಟಿ ನೀಡಿ ಆಡಳಿತ ಮಂಡಳಿ ಸದಸ್ಯರ ಜೊತೆಗೆ ಚರ್ಚಿಸಿದ ಬಳಿಕ ಮಾಧ್ಯಮಕ್ಕೆ ಮಾಹಿತಿ ನೀಡಿದರು. ಈಗಷ್ಟೇ ನಾನು ತನಿಖೆಯನ್ನು ಆರಂಭಿಸಿದ್ದೇನೆ. ಯಾವುದೇ ಮಾಹಿತಿಗಳನ್ನು ಹೊರಗೆ ಹೇಳಲು ಸಾಧ್ಯವಿಲ್ಲ. ಒಳಗಡೆ ಏನು ಚರ್ಚೆ ಆಯ್ತು ಎಂದು ಬಹಿರಂಗಪಡಿಸಲು ಸಾಧ್ಯವಿಲ್ಲ ಎಂದರು.
ಆರೋಪಗಳು ಅನೇಕ ಇರಬಹುದು, ಅದರ ಆಧಾರದಲ್ಲಿ ತೀರ್ಮಾನಕ್ಕೆ ಬರಲು ಸಾಧ್ಯವಿಲ್ಲ. ನಾನು ನಿಮಗೆ ಯಾವುದೇ ಬ್ರೇಕಿಂಗ್ ನ್ಯೂಸ್ ಕೊಡಲು ಇಲ್ಲಿ ಬಂದಿಲ್ಲ. ಇದು ವಿದ್ಯಾರ್ಥಿನಿಯರಿಗೆ ಸಂಬಂಧಿಸಿದ ವಿಚಾರವಾಗಿದ್ದು ಸಾಕ್ಷ್ಯಗಳಿಗಾಗಿ ಕಾಯಬೇಕು. ಟಾಯ್ಲೆಟ್ ನಲ್ಲಿ ಹಿಡನ್ ಕ್ಯಾಮೆರಾ ಇರಿಸಲಾಗಿದೆ ಎನ್ನುವ ರೂಮರ್ ನಂಬಬೇಡಿ. ಹರಿದಾಡುತ್ತಿರುವ ಸುಳ್ಳು ವಿಡಿಯೋಗಳನ್ನು ನಂಬಬೇಡಿ. ಇದೊಂದು ಶೈಕ್ಷಣಿಕ ಕೇಂದ್ರ. ನಾವೆಲ್ಲ ಇಂತಹದ್ದೇ ಶಿಕ್ಷಣ ಕೇಂದ್ರದಲ್ಲಿದ್ದು ಬಂದವರು. ಟಾಯ್ಲೆಟಲ್ಲಿ ಹಿಡನ್ ಕ್ಯಾಮೆರಾ ಇರಲು ಸಾಧ್ಯವಿಲ್ಲ ಎಂದರು.
ನೀವು ಮಹಿಳಾ ಆಯೋಗದಿಂದ ದೂರು ದಾಖಲು ಮಾಡಿಕೊಳ್ತೀರಾ ಎಂಬ ಪ್ರಶ್ನೆಗೆ, ನಾನು ಈಗಷ್ಟೇ ಮಾಹಿತಿ ಸಂಗ್ರಹಿಸುತ್ತಿದ್ದೇನೆ. ಮೊಬೈಲಿನಲ್ಲಿ ವಿಡಿಯೋ ರಿಕವರಿ ಆಗಬೇಕು. ಎಫ್ಎಸ್ಎಲ್ ರಿಪೋರ್ಟ್ ಬಂದ ಬಳಿಕವಷ್ಟೆ ಈ ಬಗ್ಗೆ ನಿರ್ಣಯ ಮಾಡಬೇಕಾಗತ್ತೆ. ಈಗ ಯಾವುದೇ ಮಾಹಿತಿ ಹಂಚಿಕೊಳ್ಳಲು ಆಗೋದಿಲ್ಲ. ಜನರು ಜಾಲತಾಣದಲ್ಲಿ ಬರುವ ಸುದ್ದಿಗಳನ್ನು ನಂಬಬೇಡಿ. ಅಂತಹ ಯಾವುದೇ ಅಸಲಿ ವಿಡಿಯೋ ಸಿಕ್ಕಿಲ್ಲ. ಜನರು ಯಾವುದೇ ಊಹಾಪೋಹಗಳಿಗೆ ಕಿವಿ ಕೊಡಬೇಡಿ ಎಂದು ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆ ಖುಷ್ಬೂ ಸುಂದರ್ ಸಲಹೆ ಮಾಡಿದ್ದಾರೆ.
Kushboo slams media over Camera in college Toilet, says its not two minutes noodles to keep updating speaking to media persons in Udupi.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
14-07-26 07:55 pm
HK News Staffer
ಹೊರ್ಮುಜ್ ಜಲಸಂಧಿಯಲ್ಲಿ ಕಾರ್ಗೋ ಹಡಗಿನ ಮೇಲೆ ಇರಾನ್...
14-07-26 01:37 pm
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
14-07-26 09:13 pm
HK News Staffer
ಕಣ್ಣಿಗೆ ಕರಿ ಮೆತ್ತಿಕೊಂಡು ಬುರ್ಖಾದಲ್ಲೇ ಓಡಾಡ್ತಿದ್...
14-07-26 09:10 pm
ಮಂಗಳೂರಿನಲ್ಲಿ ಅಕ್ರಮ ಬಾಂಗ್ಲಾನ್ನರ ಪತ್ತೆ ; ಮಂಗಳೂರ...
14-07-26 02:43 pm
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm