ಬ್ರೇಕಿಂಗ್ ನ್ಯೂಸ್
27-07-23 07:57 pm Udupi Correspondent ಕರಾವಳಿ
ಉಡುಪಿ, ಜುಲೈ 27: ಪ್ಯಾರಾ ಮೆಡಿಕಲ್ ಕಾಲೇಜಿನ ಶೌಚಾಲಯದಲ್ಲಿ ವಿದ್ಯಾರ್ಥಿನಿಯರ ವಿಡಿಯೋ ಚಿತ್ರೀಕರಣ ಘಟನೆ ಖಂಡಿಸಿ ಎಬಿವಿಪಿ ವಿದ್ಯಾರ್ಥಿಗಳು ಅಜ್ಜರಕಾಡಿನ ಹುತಾತ್ಮರ ಸ್ಮಾರಕ ಬಳಿ ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ, ಪೊಲೀಸರು ಮತ್ತು ವಿದ್ಯಾರ್ಥಿಗಳ ನಡುವೆ ತೀವ್ರ ಜಟಾಪಟಿ ನಡೆದಿದೆ.
ಪೊಲೀಸರು ಒತ್ತಡಕ್ಕೊಳಗಾಗಿ ಪ್ರಕರಣ ಮುಚ್ಚಿ ಹಾಕಲು ಯತ್ನಿಸುತ್ತಿದ್ದಾರೆ. ವಿಡಿಯೋ ಮಾಡಿದ್ದ ಆರೋಪಿಗಳನ್ನು ಪ್ರಶ್ನೆ ಮಾಡುವ ಬದಲು ಈ ಬಗ್ಗೆ ಟ್ವೀಟ್ ಮಾಡಿದ್ದ ರಶ್ಮಿ ಸಾಮಂತ್ ಅವರ ಮನೆಗೆ ಪೊಲೀಸರನ್ನು ಕಳಿಸಿ ಬೆದರಿಸುವ ಕೆಲಸ ಮಾಡಿದ್ದಾರೆ. ಇದನ್ನು ನಾವು ಖಂಡಿಸುತ್ತೇವೆ. ಈ ಬಗ್ಗೆ ಎಸ್ಪಿ ಅವರೇ ಸ್ಥಳಕ್ಕೆ ಬಂದು ಸ್ಪಷ್ಟನೆ ನೀಡಬೇಕು ಎಂದು ವಿದ್ಯಾರ್ಥಿಗಳು ಒತ್ತಾಯ ಮಾಡಿದ್ದಾರೆ. ಪೊಲೀಸರು ಮತ್ತು ಶಾಸಕ ಯಶಪಾಲ್ ಸುವರ್ಣ ಎಷ್ಟು ಮನವಿ ಮಾಡಿದರೂ, ವಿದ್ಯಾರ್ಥಿಗಳು ಕೇಳದೆ ಧರಣಿ ಮುಂದುವರಿಸಿದ್ದಾರೆ. ಈ ವೇಳೆ, ವಿದ್ಯಾರ್ಥಿಗಳು ಮತ್ತು ಪೊಲೀಸರ ನಡುವೆ ವಾಗ್ವಾದ ಏರ್ಪಟ್ಟಿದ್ದು, ಸ್ವತಃ ಶಾಸಕ ಯಶಪಾಲ್ ಸುವರ್ಣ ಅವರು ವಿದ್ಯಾರ್ಥಿಗಳನ್ನು ಪೊಲೀಸರಿಂದ ಬಿಡಿಸಲು ಹರಸಾಹಸಪಟ್ಟ ಪ್ರಸಂಗ ನಡೆಯಿತು.
ಬಳಿಕ ಸ್ಥಳಕ್ಕೆ ಆಗಮಿಸಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಕ್ಷಯ್ ಮಚ್ಚೀಂದ್ರ ಅವರಿಗೆ ವಿದ್ಯಾರ್ಥಿಗಳ ಪ್ರಶ್ನೆಗಳ ಸುರಿಮಳೆಯನ್ನೇ ಮುಂದಿಟ್ಟಿದ್ದಾರೆ. ನೀವು ಎಫ್ಐಆರ್ ದಾಖಲಿಸದೆ, ತನಿಖೆಯನ್ನೇ ಮಾಡದೆ ಯಾವುದೇ ಸಾಕ್ಷಿ ಇಲ್ಲ. ಮೊಬೈಲ್ ತಪಾಸಣೆ ಮಾಡಿದ್ದೇವೆ ಎಂದು ಹೇಳಿದ್ದು ಹೇಗೆ ಎಂದು ಪ್ರಶ್ನೆ ಮಾಡಿದ್ದಾರೆ. ವಿದ್ಯಾರ್ಥಿಗಳ ಪ್ರಶ್ನೆಗಳಿಗೆ ಅಷ್ಟೇ ಕೂಲಾಗಿ ಉತ್ತರಿಸಿದ ಅಕ್ಷಯ್ ಮಚ್ಚೀಂದ್ರ, ಈಗಾಗಲೇ ಘಟನೆ ಬಗ್ಗೆ ಎಫ್ಐಆರ್ ದಾಖಲು ಮಾಡಿದ್ದು ತನಿಖೆ ಮಾಡುತ್ತಿದ್ದೇವೆ. ಎಲ್ಲಾ ಆಯಾಮಗಳಲ್ಲೂ ತನಿಖೆ ನಡೆಸಲಾಗುವುದು. ಯಾವುದೇ ಕಾರಣಕ್ಕೂ ಆರೋಪಿಗಳ ರಕ್ಷಣೆ ಮಾಡುವುದಿಲ್ಲ. ಮೊಬೈಲ್ ತಪಾಸಣೆ ನಡೆಸಿದ್ದು ಅದರಲ್ಲಿ ಆಕ್ಷೇಪಾರ್ಹ ವಿಡಿಯೋ ಇದೆಯೇ ಎಂದು ಎಫ್ಎಸ್ಎಲ್ ಪರೀಕ್ಷೆ ನಡೆಸಲಾಗುವುದು. ವರದಿಯ ಪ್ರಕಾರ ಮುಂದಿನ ಕ್ರಮ ಕೈಗೊಳ್ಳುತ್ತೇವೆ ಎಂದರು. ವಿದ್ಯಾರ್ಥಿಗಳು ಐಪಿಎಸ್ ಅಧಿಕಾರಿ ಎಂಬುದನ್ನೂ ಲೆಕ್ಕಿಸದೆ ಕೆಣಕುವ ರೀತಿ ಪ್ರಶ್ನೆ ಮಾಡಿದ್ದಾರೆ. ಆದರೆ ವಿದ್ಯಾರ್ಥಿಗಳು ಆಕ್ರೋಶಗೊಳ್ಳಲು ಅವಕಾಶ ನೀಡದೆ ಸಲೀಸಾಗಿ ವ್ಯವಹರಿಸಿ ಪ್ರತಿಭಟನೆ ನಿಲ್ಲಿಸುವಂತೆ ಮನವೊಲಿಸಿದ್ದಾರೆ.
ABVP holds protest over camera in college toilet in Udupi, MLA Yashpal Suvarna gets into the filed to fight for justice.
22-08-25 12:29 pm
HK News Desk
Mahesh Thimarodi, Kalladka Prabhakar Bhat: ಮಹ...
22-08-25 09:47 am
Dharmasthala Case, Minister Eshwar Khandre: ಧ...
21-08-25 10:31 pm
Dharmasthala, Acharya Sri Gunadharanandi Maha...
21-08-25 10:21 pm
ಸೌಹಾರ್ದ ಸಹಕಾರಿ ವಿಧೇಯಕಕ್ಕೆ ಮೇಲ್ಮನೆಯಲ್ಲಿ ಸೋಲು ;...
21-08-25 06:24 pm
22-08-25 02:00 pm
HK News Desk
ಚಿತ್ರನಟಿ ಆರೋಪ ಬೆನ್ನಲ್ಲೇ ಮಂಗಳಮುಖಿಯಿಂದಲೂ ದೂರು,...
22-08-25 01:11 pm
ಮಹಾ ಸಿಎಂ ದೇವೇಂದ್ರ ಫಡ್ನವೀಸ್ - ಎಂಎನ್ಎಸ್ ಮುಖ್ಯಸ್...
21-08-25 06:09 pm
ಹೈದರಾಬಾದ್ ನಲ್ಲಿ ಕಲಬುರಗಿ ಮೂಲದ 2 ವರ್ಷದ ಮಗು ಸೇರ...
21-08-25 12:54 pm
ಹೆದ್ದಾರಿಯಲ್ಲಿ ಗುಂಡಿಗಳು ಬಿದ್ದಿದ್ದರೆ, ಟ್ರಾಫಿಕ್...
20-08-25 10:56 pm
21-08-25 09:35 pm
HK News Desk
Vhp, Mangalore, Sharan Pumpwell: ಗಣೇಶೋತ್ಸವ, ದ...
21-08-25 09:12 pm
FIR, YouTuber Sameer MD, Doota Arrest: ಸಾವಿರಾ...
21-08-25 03:44 pm
MRPL Accident, Mangalore: ಕಾಟಿಪಳ್ಳ ; ಟಿಪ್ಪರ್...
21-08-25 02:05 pm
Mahesh Shetty Timarodi, Udupi Police, BL Sant...
21-08-25 11:57 am
21-08-25 11:00 pm
Mangalore Correspondent
ಶೀಲ ಶಂಕೆ ; ಕ್ರಿಮಿನಾಶಕ ಕೊಡಿಸಿ ಕೊಲೆ, ಪ್ರಿಯಕರನೊ...
21-08-25 10:39 pm
Mangalore, Derlakatte, Robbery, Muthoot finan...
20-08-25 08:10 pm
Mangalore Lucky Scheme Scam Fraud, Wahab Kula...
19-08-25 10:52 pm
ಕಸ್ಟಮ್ಸ್ ಅಧಿಕಾರಿಗಳ ಸೋಗಿನಲ್ಲಿ ಚಿನ್ನದ ವ್ಯಾಪಾರಿಯ...
19-08-25 10:30 pm