ಬ್ರೇಕಿಂಗ್ ನ್ಯೂಸ್
02-08-23 05:57 pm Mangalore Correspondent ಕರಾವಳಿ
ಬೆಳ್ತಂಗಡಿ, ಆಗಸ್ಟ್ 2: ಸೌಜನ್ಯಾ ಕೊಲೆ ಪ್ರಕರಣದ ನೆಪದಲ್ಲಿ ಧರ್ಮಸ್ಥಳ ಕ್ಷೇತ್ರದ ಬಗ್ಗೆ ಅಪಚಾರ ನಡೆಸುವುದನ್ನು ಸಹಿಸುವುದಿಲ್ಲ ಎಂದು ವಿಶ್ವ ಹಿಂದು ಪರಿಷತ್ ನಾಯಕರು ಸುದ್ದಿಗೋಷ್ಟಿ ನಡೆಸಿದ್ದಾರೆ.
ಸೌಜನ್ಯ ಕೊಲೆ ಪ್ರಕರಣ ಹಾಗೂ ಧರ್ಮಸ್ಥಳ ಕ್ಷೇತ್ರದ ಅಪಪ್ರಚಾರದ ಬಗ್ಗೆ ಪತ್ರಿಕಾಗೋಷ್ಠಿ ನಡೆಸಿದ ಸಂಘಟನೆಯ ಮುಖಂಡರಾದ ಎಂ.ಬಿ.ಪುರಾಣಿಕ್ ಮತ್ತು ಶರಣ್ ಪಂಪ್ವೆಲ್, ಸೌಜನ್ಯಾ ಪ್ರಕರಣ ಇತ್ಯರ್ಥ ಆಗದೆ ಇರೋದು ವ್ಯವಸ್ಥೆಗೆ ಕಪ್ಪು ಚುಕ್ಕೆ. ಪ್ರಕರಣದ ಬಗ್ಗೆ ಹಾಲಿ ನ್ಯಾಯಾಧೀಶರ ಮೂಲಕ ನ್ಯಾಯಾಂಗ ತನಿಖೆ ನಡೆಸಬೇಕು. ಈ ಬಗ್ಗೆ ರಾಜ್ಯ ಹಾಗೂ ಕೇಂದ್ರ ಸರಕಾರಕ್ಕೆ ನಾವೂ ಆಗ್ರಹಿಸುತ್ತಿದ್ದೇವೆ. ಆದರೆ ಯಾವ ರೀತಿ ತನಿಖೆಯಾಗಬೇಕು ಎಂಬುದು ವ್ಯವಸ್ಥೆಗೆ ಬಿಟ್ಟದ್ದು. ನೈಜ ಆರೋಪಿ ಪತ್ತೆಗಾಗಿ ಮತ್ತೊಮ್ಮೆ ಮರು ತನಿಖೆ ಆಗಬೇಕೆಂದು ಆಗ್ರಹಿಸುತ್ತೇವೆ ಎಂದಿದ್ದಾರೆ.
ತನ್ಮೂಲಕ ಪ್ರಕರಣದ ನಿಜವಾದ ಆರೋಪಿ ಯಾರು ಎನ್ನೋದು ಗೊತ್ತಾಗಬೇಕು. ಆರೋಪಿಗಳಿಗೆ ಶಿಕ್ಷೆಯಾಗುವ ತನಕ ಈ ಪ್ರಕರಣ ಅಂತ್ಯವಾಗೋದಿಲ್ಲ. ಇದಕ್ಕಾಗಿ ಎಲ್ಲಾ ದೇವಸ್ಥಾನ, ದೈವಸ್ಥಾನಗಳಲ್ಲಿ ಸಾಮೂಹಿಕ ಪ್ರಾರ್ಥನೆ ಮಾಡಲಿದ್ದೇವೆ. ಸೌಜನ್ಯಳಿಗೆ ನ್ಯಾಯ ಸಿಗಲೆಂದು ಎಲ್ಲ ಊರಿನ ದೇವಸ್ಥಾನ, ದೈವಸ್ಥಾನಗಳಲ್ಲಿ ನಮ್ಮ ಕಾರ್ಯಕರ್ತರು ಪ್ರಾರ್ಥನೆ ಮಾಡಲಿದ್ದಾರೆ.
ಧರ್ಮಸ್ಥಳ ಕ್ಷೇತ್ರ ಇವತ್ತು ನಿನ್ನೆಯದಲ್ಲ, ಕ್ಷೇತ್ರಕ್ಕೆ ಅದರದ್ದೇ ಆದ ಹಿನ್ನೆಲೆ, ಇತಿಹಾಸವಿದೆ. ಅಂತರಾಷ್ಟ್ರೀಯ ಮಟ್ಟದಲ್ಲಿ ಜನರು ಈ ಕ್ಷೇತ್ರಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸುತ್ತಾರೆ. ಸಾಮಾಜಿಕ, ಶೈಕ್ಷಣಿಕವಾಗಿ ಬೇರೆ ಬೇರೆ ಕ್ಷೇತ್ರದಲ್ಲಿ ಅನನ್ಯ ಕೊಡುಗೆ ನೀಡಿದ ಕ್ಷೇತ್ರ. ಯಾವುದೇ ಕ್ಷೇತ್ರಕ್ಕೆ, ಧರ್ಮಕ್ಕೆ ಅಪಚಾರ ಆದಾಗ ವಿಶ್ವ ಹಿಂದೂ ಪರಿಷತ್ ವಿರೋಧಿಸುತ್ತದೆ. ಧರ್ಮಸ್ಥಳ ಕ್ಷೇತ್ರಕ್ಕೆ ಅಪಚಾರ, ಅವಮಾನವಾಗುವುದನ್ನ ನಾವು ಸಹಿಸೋದಿಲ್ಲ.
ಯಾರೇ ಆಗಲಿ ಕ್ಷೇತ್ರಕ್ಕೆ ಮುತ್ತಿಗೆ ಹಾಕುವುದು, ಮತ್ತೊಂದನ್ನ ನಾವು ಸಹಿಸೋದಿಲ್ಲ. ಸೌಜನ್ಯ ಅತ್ಯಾಚಾರ ಪ್ರಕರಣ ಹಾಗೂ ಕ್ಷೇತ್ರಕ್ಕೆ ತಾಳೆ ಹಾಕುವುದನ್ನ ನಾವು ಸಹಿಸೋದಿಲ್ಲ. ಕ್ಷೇತ್ರದ ಗೌರವ, ಪ್ರತಿಷ್ಠೆಯನ್ನ ಯಾವ ಬೆಲೆ ಕೊಟ್ಟಾದರೂ ವಿಶ್ವ ಹಿಂದು ಪರಿಷತ್ ಕಾಪಾಡುತ್ತದೆ. ಹಾಗಂತ, ನಾವು ಪೂರ್ವಾಗ್ರಹ ಪೀಡಿತರಾಗಿ ಯಾರ ಬಗ್ಗೆಯೂ ಆರೋಪಿಸುವುದಿಲ್ಲ ಎಂದು ಹೇಳಿದ್ದಾರೆ.
Dharmasthala temple name being misused in Sowjanya rape case is intolerable says Vishva Hindu Parishad in Mangalore
22-08-25 09:47 am
HK News Desk
Dharmasthala Case, Minister Eshwar Khandre: ಧ...
21-08-25 10:31 pm
Dharmasthala, Acharya Sri Gunadharanandi Maha...
21-08-25 10:21 pm
ಸೌಹಾರ್ದ ಸಹಕಾರಿ ವಿಧೇಯಕಕ್ಕೆ ಮೇಲ್ಮನೆಯಲ್ಲಿ ಸೋಲು ;...
21-08-25 06:24 pm
"ಧರ್ಮದ ಉಳಿವಿಗಾಗಿ ಧರ್ಮ ಯುದ್ಧ" ; ರಾಜ್ಯದ ಎಲ್ಲ ವ...
21-08-25 06:02 pm
21-08-25 06:09 pm
HK News Desk
ಹೈದರಾಬಾದ್ ನಲ್ಲಿ ಕಲಬುರಗಿ ಮೂಲದ 2 ವರ್ಷದ ಮಗು ಸೇರ...
21-08-25 12:54 pm
ಹೆದ್ದಾರಿಯಲ್ಲಿ ಗುಂಡಿಗಳು ಬಿದ್ದಿದ್ದರೆ, ಟ್ರಾಫಿಕ್...
20-08-25 10:56 pm
30 ದಿನ ಜೈಲು ಪಾಲಾದರೆ ಪ್ರಧಾನಿ, ಸಿಎಂ, ಸಚಿವರನ್ನು...
20-08-25 06:40 pm
ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಆಗಂತುಕನಿಂದ ಹಲ್ಲೆ...
20-08-25 11:01 am
21-08-25 09:35 pm
HK News Desk
Vhp, Mangalore, Sharan Pumpwell: ಗಣೇಶೋತ್ಸವ, ದ...
21-08-25 09:12 pm
FIR, YouTuber Sameer MD, Doota Arrest: ಸಾವಿರಾ...
21-08-25 03:44 pm
MRPL Accident, Mangalore: ಕಾಟಿಪಳ್ಳ ; ಟಿಪ್ಪರ್...
21-08-25 02:05 pm
Mahesh Shetty Timarodi, Udupi Police, BL Sant...
21-08-25 11:57 am
21-08-25 11:00 pm
Mangalore Correspondent
ಶೀಲ ಶಂಕೆ ; ಕ್ರಿಮಿನಾಶಕ ಕೊಡಿಸಿ ಕೊಲೆ, ಪ್ರಿಯಕರನೊ...
21-08-25 10:39 pm
Mangalore, Derlakatte, Robbery, Muthoot finan...
20-08-25 08:10 pm
Mangalore Lucky Scheme Scam Fraud, Wahab Kula...
19-08-25 10:52 pm
ಕಸ್ಟಮ್ಸ್ ಅಧಿಕಾರಿಗಳ ಸೋಗಿನಲ್ಲಿ ಚಿನ್ನದ ವ್ಯಾಪಾರಿಯ...
19-08-25 10:30 pm