ಬ್ರೇಕಿಂಗ್ ನ್ಯೂಸ್
04-08-23 02:04 pm Udupi Correspondent ಕರಾವಳಿ
ಉಡುಪಿ, ಆಗಸ್ಟ್ 4: ಪ್ಯಾರಾ ಮೆಡಿಕಲ್ ಕಾಲೇಜು ವಿದ್ಯಾರ್ಥಿನಿ ವಿಡಿಯೋ ಪ್ರಕರಣ ಖಂಡಿಸಿ ವಿಶ್ವ ಹಿಂದು ಪರಿಷತ್ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ್ದ ಶರಣ್ ಪಂಪ್ ವೆಲ್ ಸೇರಿದಂತೆ ಮೂವರ ವಿರುದ್ಧ ಉಡುಪಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ವಿಶ್ವ ಹಿಂದು ಪರಿಷತ್ ಮುಖಂಡ ಶರಣ್ ಪಂಪ್ವೆಲ್, ಬಜರಂಗದಳ ಉಡುಪಿ ಜಿಲ್ಲಾ ಸಂಚಾಲಕ ದಿನೇಶ್ ಮೆಂಡನ್ ಹಾಗೂ ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆ ವೀಣಾ ಶೆಟ್ಟಿ ವಿರುದ್ಧ ಎಫ್ಐಆರ್ ದಾಖಲಾಗಿದೆ. ಉಡುಪಿ ಕಾಲೇಜಿನಲ್ಲಿ ನಡೆದ ವೀಡಿಯೋ ವಿವಾದದ ವಿರುದ್ಧ ಕೃಷ್ಣಮಠ ಸಮೀಪದಲ್ಲಿ ಗುರುವಾರ ವಿಹೆಚ್‍ಪಿ ಪ್ರತಿಭಟನಾ ಸಭೆ ನಡೆಸಿತ್ತು. ಈ ವೇಳೆ ಮುಖಂಡರು ತಮ್ಮ ಭಾಷಣದಲ್ಲಿ ಪ್ರಚೋದನಕಾರಿ ಹೇಳಿಕೆ ನೀಡಿದ್ದರು.
ಸೌಟು ಪೊರಕೆ ಹಿಡಿಯುವ ಕೈಗಳು ನ್ಯಾಯಕ್ಕಾಗಿ, ಮನೆಯ ಮಕ್ಕಳ ರಕ್ಷಣೆಗಾಗಿ ತಲವಾರು, ಕತ್ತಿಗಳನ್ನ ಹಿಡಿಯಿರಿ ಎಂದು ಶರಣ್ ಪಂಪ್ವೆಲ್ ಮಹಿಳೆಯರಿಗೆ ಕರೆ ನೀಡಿದ್ದರು. ಅಲ್ಲದೆ, ವೀಣಾ ಶೆಟ್ಟಿ ಪ್ರತಿಭಟನಾ ಸಭೆಯಲ್ಲಿ ಮುಸ್ಲಿಂ ಹುಡುಗಿಯರನ್ನು ಶಾಲಾ ಕಾಲೇಜಿಗೆ ಸೇರಿಸಬೇಡಿ, ಮದರಸಾಗಳಿಗೆ ಮಾತ್ರ ಸೇರಿಸಿ ಎಂದು ಹೇಳಿ ಅವಹೇಳನ ಮಾಡಿದ್ದ ಬಗ್ಗೆ ಪೊಲೀಸರು ಸುಮೊಟೊ ಕೇಸು ದಾಖಲಿಸಿದ್ದಾರೆ. ವೀಣಾ ಶೆಟ್ಟಿ ಮತ್ತು ಶರಣ್ ಪಂಪ್ವೆಲ್ ಹೇಳಿಕೆ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು ಇದನ್ನು ಪರಿಗಣಿಸಿ ಎಫ್ಐಆರ್ ದಾಖಲಿಸಲಾಗಿದೆ.
Udupi FIR filed on VHP Sharan Pumpwell and Two others for controversial speech.
15-10-26 02:30 pm
HK News Staffer
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 01:47 pm
HK News Staffer
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
Sudheer Reddy, Agnes College, ABVP: ಭಾರತ ಮಾತೆ...
15-10-26 12:19 pm
16-10-26 03:37 pm
HK News Staffer
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm