ಬ್ರೇಕಿಂಗ್ ನ್ಯೂಸ್
05-11-20 05:28 pm Mangalore Correspondent ಕರಾವಳಿ
ಉಳ್ಳಾಲ: ನವಂಬರ್ 05: ಪರಿಶಿಷ್ಟ ಪಂಗಡ ಮಹಿಳಾ ಮೀಸಲಾತಿಯಿಂದಾಗಿ ಬಾಕಿ ಉಳಿದಿದ್ದ ಕೋಟೆಕಾರು ಪಟ್ಟಣ ಪಂಚಾಯಿತಿಯ ಎರಡನೇ ಅವಧಿಯ ಅಧ್ಯಕ್ಷ ಗಾದಿಗೆ ಜಯಶ್ರೀ ಪ್ರಪುಲ್ಲದಾಸ್ ಅವಿರೋಧ ಆಯ್ಕೆಯಾಗಿದ್ದಾರೆ.
ಕಳೆದ ಬಾರಿ ನಡೆದ ಎರಡನೇ ಅವಧಿಯ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನದ ಆಯ್ಕೆ ಪ್ರಕ್ರಿಯೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಪರಿಶಿಷ್ಟ ಪಂಗಡ ಮಹಿಳಾ ಮೀಸಲಾತಿ ಆದೇಶ ಬಂದಿದ್ದು, ಪಂಚಾಯಿತಿಯಲ್ಲಿ ಯಾವುದೇ ಪರಿಶಿಷ್ಟ ಪಂಗಡದ ಮಹಿಳಾ ಸದಸ್ಯರು ಇಲ್ಲದ ಕಾರಣ ಅಧ್ಯಕ್ಷ ಸ್ಥಾನ ಹೊರತುಪಡಿಸಿ ಉಪಧ್ಯಕ್ಷ ಸ್ಥಾನಕ್ಕೆ ಭಾರತಿ ರಾಘವ ಆಯ್ಕೆಗೊಂಡಿದ್ದರು.
ಇದೀಗ ಮತ್ತೆ ಅಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಮಹಿಳೆ ಮೀಸಲಾತಿ ಆದೇಶ ಬಂದಿದೆ. ಇಂದು ತಹಶೀಲ್ದಾರ್ ಟಿ.ಜಿ ಗುರುಪ್ರಸಾದ್ ಸಮಕ್ಷಮದಲ್ಲಿ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆ ನಡೆಯಿತು. ಬಿಜೆಪಿ ಪ್ರಾಬಲ್ಯವುಳ್ಳ ಕೋಟೆಕಾರು ಪಟ್ಟಣ ಪಂಚಾಯಿತಿಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಬಿಜೆಪಿಯ ಜಯಶ್ರೀ ಮಾತ್ರ ನಾಮಪತ್ರ ಸಲ್ಲಿಸಿದ್ದು ಅಧ್ಯಕ್ಷರಾಗಿ ಅವಿರೋಧ ಆಯ್ಕೆಯಾದರು.


ಜಯಶ್ರೀ ಅವರು ಈ ಹಿಂದೆ ಪಟ್ಟಣ ಪಂಚಾಯಿತಿ ಸ್ಥಾಯಿ ಸಮಿತಿ ಅಧ್ಯಕ್ಷರಾಗಿದ್ದು, ಇದೀಗ ಪಂಚಾಯಿತಿ ಅಧ್ಯಕ್ಷ ಸ್ಥಾನ ತಮ್ಮದಾಗಿಸಿಕೊಂಡಿದ್ದಾರೆ.ಬಿಜೆಪಿ ಕ್ಷೇತ್ರ ಪ್ರಭಾರಿ ಜಿಲ್ಲಾ ಪಂಚಾಯತ್ ಉಪಾಧ್ಯಕ್ಷೆ ಕಸ್ತೂರಿ ಪಂಜ ಮಾತನಾಡಿ ಜಯಶ್ರೀ ಅವರಿಗೆ ಪಟ್ಟಣ ಪಂಚಾಯಿತಿಯ ಸ್ಥಾಯಿ ಸಮಿತಿ ಅಧ್ಯಕ್ಷೆಯಾಗಿ ದುಡಿದ ಅನುಭವ ಇದೆ. ಪಕ್ಷದ ಸೂಚನೆಯಂತೆ ಮುಂದೆಯೂ ಅವರು ಎಲ್ಲ ವರ್ಗದ ಜನರ ಸೇವೆಗೆ ಶ್ರಮಿಸಿ ಪಂಚಾಯಿತಿ ಅಭಿವೃದ್ಧಿಗೊಳಿಸುವಂತೆ ಆಶಿಸಿದರು.
ಬಿಜೆಪಿ ಕ್ಷೇತ್ರಾಧ್ಯಕ್ಷ ಚಂದ್ರಹಾಸ್ ಪಂಡಿತ್ ಹೌಸ್ , ಜಿಲ್ಲಾ ಉಪಾಧ್ಯಕ್ಷ ಸಂತೋಷ್ ಕುಮಾರ್ ರೈ ಬೋಳಿಯಾರ್ , ಕೆ. ರವೀಂದ್ರ ಶೆಟ್ಟಿ ಉಳಿದೊಟ್ಟು, ಚಂದ್ರಶೇಖರ್ ಉಚ್ಚಿಲ್, ಜಿಲ್ಲಾ ಕಾರ್ಯದರ್ಶಿ ಸತೀಶ್ ಕುಂಪಲ, ಜಿಲ್ಲಾ ಸಹ ಪ್ರಭಾರಿ ರಾಜೇಶ್ ಕಾವೇರಿ, ತಾಲೂಕು ಪಂಚಾಯಿತಿ ಸದಸ್ಯ ರವಿಶಂಕರ್ ಸೋಮೇಶ್ವರ, ಕೋಟೆಕಾರು ಪಟ್ಟಣ ಪಂಚಾಯಿತಿ ಉಪಾಧ್ಯಕ್ಷೆ ಭಾರತಿ ರಾಘವ ಗಟ್ಟಿ, ಮಾಜಿ ಅಧ್ಯಕ್ಷರಾದ ಉದಯ್ ಕುಮಾರ್ ಶೆಟ್ಟಿ ಸುಳ್ಳೇಂಜೀರ್ ಹಾಗೂ ಮಾಜಿ ಉಪಾಧ್ಯಕ್ಷ ಅನಿಲ್ ಬಗಂಬಿಲ ಉಪಸ್ಥಿತರಿದ್ದರು.
Mangalore Kotekar town panchayat, which did not have a president for the past two years, got a president elected on Thursday, November 5. Jayashree Prafulladas of BJP was elected unanimously as the president.
30-01-26 10:37 pm
Bangalore Correspondent
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
ಲಕ್ಕುಂಡಿಯಲ್ಲಿ ನಿಧಿ ಕಾಯ್ತಿದೆಯಾ ಮೂರು ಹೆಡೆಯ ನಾಗರ...
30-01-26 12:38 pm
ಕರಾವಳಿ ಜಿಲ್ಲೆಗಳ ರೈತರ ಬೆಳೆ ವಿಮೆಗೆ ರಾಜ್ಯ ಸರ್ಕಾರ...
30-01-26 12:20 pm
30-01-26 03:38 pm
HK News Desk
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
ಕೋಲ್ಕತ್ತಾ ಭೀಕರ ಅಗ್ನಿ ಅವಘಡ ; 21 ಮಂದಿ ಸಾವು, ಹೊತ...
30-01-26 01:23 pm
ಕೇರಳದಲ್ಲಿ ಹೈಸ್ಪೀಡ್ ರೈಲು ಯೋಜನೆ ; ತಿರುವನಂತಪುರ-...
29-01-26 11:07 pm
ಮಂಜು ಮುಸುಕಿದ್ದೇ ವಿಮಾನ ಅಪಘಾತಕ್ಕೆ ಕಾರಣ? ರನ್ ವೇ...
28-01-26 11:16 pm
30-01-26 09:01 pm
Giridhar Shetty, Mangaluru
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
Kadri Flower Show 2026: ಕದ್ರಿಯಲ್ಲಿ ಫ್ಲವರ್ ಶೋ...
29-01-26 08:37 pm
ಕೋಡಿಬೆಂಗ್ರೆ ದುರಂತದ ಬಳಿಕ ಎಚ್ಚೆತ್ತ ಜಿಲ್ಲಾಡಳಿತ ;...
29-01-26 03:54 pm
30-01-26 10:57 pm
HK News Desk
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm
ಬೆಂಗಳೂರಿನಲ್ಲಿ ಮತ್ತೊಂದು ದರೋಡೆ ; 1.37 ಕೋಟಿ ರೂ....
27-01-26 05:56 pm
ಕೆನರಾ ಲೈಟಿಂಗ್ ಇಂಡಸ್ಟ್ರೀಸ್ ಸಂಸ್ಥೆಯಿಂದ ಕೊಲ್ಕತ್ತ...
27-01-26 05:15 pm