ಬ್ರೇಕಿಂಗ್ ನ್ಯೂಸ್
04-08-23 09:12 pm Mangalore Correspondent ಕರಾವಳಿ
ಬೆಳ್ತಂಗಡಿ, ಆಗಸ್ಟ್ 4: ಉಜಿರೆಯಲ್ಲಿ ನಡೆದ ಧರ್ಮಸ್ಥಳ ಕ್ಷೇತ್ರದ ಭಕ್ತರ ಪ್ರತಿಭಟನೆಯಲ್ಲಿ ಸೌಜನ್ಯಾ ಪೋಷಕರಿಗೆ ಹಲ್ಲೆಗೆ ಯತ್ನಿಸಿದ ಬಗ್ಗೆ ದೂರು ದಾಖಲಾಗಿದ್ದು, ಧರ್ಮಸ್ಥಳ ಠಾಣೆ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.
ಸೌಜನ್ಯಾ ತಾಯಿ ಕುಸುಮಾವತಿ ಮತ್ತು ಸಹೋದರ ಜಯರಾಂ ದೂರಿನ ಹಿನ್ನೆಲೆ ಎಫ್ಐಆರ್ ದಾಖಲಾಗಿದೆ. ಭಕ್ತರ ಪ್ರತಿಭಟನೆ ಸಂದರ್ಭದಲ್ಲಿ ವ್ಯಕ್ತಿಯೊಬ್ಬ ತಡೆದು ನಿಲ್ಲಿಸಿ ಮೈಗೆ ಕೈ ಹಾಕಿ ಚೂಡಿದಾರದ ಶಾಲು ಎಳೆದು ಮಾನಕ್ಕೆ ಕುಂದುಂಟು ಮಾಡಿದ್ದಾಗಿ ಮತ್ತು ಮಗ ಜಯರಾಮನಿಗೂ ಹಲ್ಲೆ ಮಾಡಿದ ಬಗ್ಗೆ ದೂರು ನೀಡಲಾಗಿದೆ. ಇದರಂತೆ, ಐಪಿಸಿ 1860ರ ಕಾಯ್ದೆ ಮತ್ತು 341, 354, 323, 34 ಸೆಕ್ಷನ್ ಗಳಡಿ ಪ್ರಕರಣ ದಾಖಲು ಮಾಡಲಾಗಿದೆ.
ಶುಕ್ರವಾರ ಉಜಿರೆಯಲ್ಲಿ ಧರ್ಮಸ್ಥಳ ಕ್ಷೇತ್ರದ ಪರವಾಗಿ ಬೃಹತ್ ಸಮಾವೇಶ ನಡೆದಿದ್ದು ಧರ್ಮಸ್ಥಳ ಅವಹೇಳನ ಖಂಡಿಸಿ ಧಿಕ್ಕಾರ ಕೂಗಿದ್ದರು. ಸಮಾವೇಶ ಸ್ಥಳಕ್ಕೆ ಆಗಮಿಸಿದ್ದ ಸೌಜನ್ಯ ತಾಯಿ ಹಾಗೂ ಕುಟುಂಬಸ್ಥರಿಗೆ ವೇದಿಕೆ ಹತ್ತದಂತೆ ತಡೆದಿದ್ದಲ್ಲದೆ, ಘೆರಾವ್ ಹಾಕಿದ್ದರು. ಈ ವೇಳೆ ತಳ್ಳಾಟ ನಡೆದಿದ್ದು ಪೊಲೀಸರ ಮುಂದೆಯೇ ಧರ್ಮಸ್ಥಳ ಸಂಸ್ಥೆಗೆ ಸೇರಿದ ವ್ಯಕ್ತಿಯೊಬ್ಬ ಜಯರಾಮ್ ಕೊರಳು ಪಟ್ಟಿ ಹಿಡಿದು ಆವಾಜ್ ಹಾಕಿದ್ದಾನೆ. ಇದರ ವಿಡಿಯೋ ವೈರಲ್ ಆಗಿದ್ದು ಕುಟುಂಬದ ದೂರಿನಂತೆ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Dharmasthala protest, protesters try to attack sowjanya's mother and brother FIR filed. During the massive protest held at Dharmasthala for allegely misusing the name of the temple the protesters tried to attack soujanya's mother who suddnely came to the protest demanding justice for her daughter
22-08-25 09:47 am
HK News Desk
Dharmasthala Case, Minister Eshwar Khandre: ಧ...
21-08-25 10:31 pm
Dharmasthala, Acharya Sri Gunadharanandi Maha...
21-08-25 10:21 pm
ಸೌಹಾರ್ದ ಸಹಕಾರಿ ವಿಧೇಯಕಕ್ಕೆ ಮೇಲ್ಮನೆಯಲ್ಲಿ ಸೋಲು ;...
21-08-25 06:24 pm
"ಧರ್ಮದ ಉಳಿವಿಗಾಗಿ ಧರ್ಮ ಯುದ್ಧ" ; ರಾಜ್ಯದ ಎಲ್ಲ ವ...
21-08-25 06:02 pm
21-08-25 06:09 pm
HK News Desk
ಹೈದರಾಬಾದ್ ನಲ್ಲಿ ಕಲಬುರಗಿ ಮೂಲದ 2 ವರ್ಷದ ಮಗು ಸೇರ...
21-08-25 12:54 pm
ಹೆದ್ದಾರಿಯಲ್ಲಿ ಗುಂಡಿಗಳು ಬಿದ್ದಿದ್ದರೆ, ಟ್ರಾಫಿಕ್...
20-08-25 10:56 pm
30 ದಿನ ಜೈಲು ಪಾಲಾದರೆ ಪ್ರಧಾನಿ, ಸಿಎಂ, ಸಚಿವರನ್ನು...
20-08-25 06:40 pm
ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಆಗಂತುಕನಿಂದ ಹಲ್ಲೆ...
20-08-25 11:01 am
21-08-25 09:35 pm
HK News Desk
Vhp, Mangalore, Sharan Pumpwell: ಗಣೇಶೋತ್ಸವ, ದ...
21-08-25 09:12 pm
FIR, YouTuber Sameer MD, Doota Arrest: ಸಾವಿರಾ...
21-08-25 03:44 pm
MRPL Accident, Mangalore: ಕಾಟಿಪಳ್ಳ ; ಟಿಪ್ಪರ್...
21-08-25 02:05 pm
Mahesh Shetty Timarodi, Udupi Police, BL Sant...
21-08-25 11:57 am
21-08-25 11:00 pm
Mangalore Correspondent
ಶೀಲ ಶಂಕೆ ; ಕ್ರಿಮಿನಾಶಕ ಕೊಡಿಸಿ ಕೊಲೆ, ಪ್ರಿಯಕರನೊ...
21-08-25 10:39 pm
Mangalore, Derlakatte, Robbery, Muthoot finan...
20-08-25 08:10 pm
Mangalore Lucky Scheme Scam Fraud, Wahab Kula...
19-08-25 10:52 pm
ಕಸ್ಟಮ್ಸ್ ಅಧಿಕಾರಿಗಳ ಸೋಗಿನಲ್ಲಿ ಚಿನ್ನದ ವ್ಯಾಪಾರಿಯ...
19-08-25 10:30 pm