ಬ್ರೇಕಿಂಗ್ ನ್ಯೂಸ್
09-08-23 03:12 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 9: ಮನೆಯ ಕಪಾಟಿನಲ್ಲಿರಿಸಿದ್ದ ಚಿನ್ನಾಭರಣವನ್ನು ಪತಿಯೇ ಕಳವುಗೈದು ಮಾರಾಟ ಮಾಡಿದ್ದಾರೆಂದು ಪತ್ನಿಯೇ ನಗರದ ಕದ್ರಿ ಪೊಲೀಸ್ ಠಾಣೆಗೆ ದೂರು ನೀಡಿರುವ ಘಟನೆ ನಡೆದಿದೆ. ಪ್ರಕರಣದಲ್ಲಿ ಪತಿ ಇಲ್ಯಾಸ್ ಮತ್ತು ಪ್ರಭಾಕರ್ ಎಂಬವರ ವಿರುದ್ಧ ಪ್ರಕರಣ ದಾಖಲಾಗಿದೆ.
ಪತಿ ಮತ್ತು ಪತ್ನಿ ನಡುವೆ ಕೆಲವು ತಿಂಗಳಿನಿಂದ ವಿರಸ ಉಂಟಾಗಿದ್ದು ಇತ್ತೀಚೆಗೆ ಎಪ್ರಿಲ್ ತಿಂಗಳಲ್ಲಿ ಜಗಳ ನಡೆದು ಪತ್ನಿ ತಾಯಿ ಮನೆಯಲ್ಲಿ ಉಳಿದುಕೊಂಡಿದ್ದರು. ಗಂಡನ ಮನೆ ಕದ್ರಿ ಕೆಪಿಟಿ ಬಳಿಯ ಆಶಿಯಾನ ಅಪಾರ್ಟ್ಮೆಂಟ್ ನಲ್ಲಿತ್ತು. ಆದರೆ, ಮದುವೆಯ ಸಂದರ್ಭದಲ್ಲಿ ತಾಯಿ ಮನೆಯಿಂದ ವರದಕ್ಷಿಣೆ ರೂಪದಲ್ಲಿ ಕೊಟ್ಟಿದ್ದ ಚಿನ್ನಾಭರಣವನ್ನು ಫ್ಲಾಟಿನ ಕಪಾಟಿನಲ್ಲೇ ಇರಿಸಿದ್ದರು. ಒಟ್ಟು 75 ಪವನ್ ಚಿನ್ನವಿದ್ದು, ಈ ವಿಷಯ ಮಹಿಳೆ ಮತ್ತು ಅವರ ಗಂಡನಾದ ಇಲಿಯಾಸ್‌ಗೆ ಮಾತ್ರ ತಿಳಿದಿತ್ತು.
ಇತ್ತೀಚೆಗೆ ಫ್ಲ್ಯಾಟ್‌ಗೆ ಹೋಗಿ ವಾಚ್‌ಮ್ಯಾನ್ ಬಳಿ ವಿಚಾರಿಸಿದಾಗ ಅವರ ಗಂಡ ಒಂದು ವಾರದಿಂದ ಫ್ಲ್ಯಾಟ್‌ಗೆ ಬಂದಿಲ್ಲ ಎಂದು ತಿಳಿಸಿದ್ದರು. ಮಹಿಳೆ ಅನುಮಾನಗೊಂಡು ಮನೆಯೊಳಗೆ ಹೋಗಿ ಬಂಗಾರವಿಟ್ಟ ಕಪಾಟಿನಲ್ಲಿ ನೋಡಿದಾಗ ಲಾಕರ್ ಸಮೇತ ಚಿನ್ನ ಮಾಯವಾಗಿತ್ತು. ಗಂಡನಿಗೆ ಕರೆ ಮಾಡಿದಾಗ 'ನಾನು ಲಾಕರ್ ಸಮೇತ ಚಿನ್ನವನ್ನು ಕದ್ದುಕೊಂಡು ಹೋಗಿರುತ್ತೇನೆ. ನೀನು ಏನ್ಮಾಡ್ತೀಯಾ ಎಂದು ದಮ್ಕಿ ಹಾಕಿದ್ದ. ಅಲ್ಲದೆ ಚಿನ್ನವನ್ನು ಬ್ಯಾಂಕಿನಲ್ಲಿ ಸುಮಾರು 28.5 ಲಕ್ಷಕ್ಕೆ ಅಡವಿಟ್ಟು ಹಣ ಪಡೆದಿದ್ದಾಗಿ ಹೇಳಿದ್ದ. ಅದಕ್ಕೆ ಬಡ್ಡಿ ಕಟ್ಟಲಾಗದೇ ಪ್ರಭಾಕರ್ ಎಂಬವರಿಗೆ 3 ತಿಂಗಳ ಮಟ್ಟಿಗೆ ಬಡ್ಡಿಯನ್ನು ಕಟ್ಟಲು ಹೇಳಿರುವುದಾಗಿ ತಿಳಿಸಿದ್ದ.
ಅಡವಿಟ್ಟ ಚಿನ್ನದ ಬಗ್ಗೆ ಬ್ಯಾಂಕಿನಲ್ಲಿ ಪರಿಶೀಲನೆ ನಡೆಸಿದಾಗ, ಪ್ರಭಾಕರ್ ಸುಮಾರು 12 ಲಕ್ಷದಷ್ಟು ಚಿನ್ನವನ್ನು ಬಿಡಿಸಿ ಕರಗಿಸಿ ಮಾರಾಟ ಮಾಡಿರುವುದು ತಿಳಿದುಬಂದಿದೆ. ಈ ಬಗ್ಗೆ ಚಿನ್ನ ಕಳಕೊಂಡ ಮಹಿಳೆ ಕದ್ರಿ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ.
A wife has filed a complaint with the police against her husband for stealing 75 grams of gold that was kept in a locker. Renisha Noronha is the complainant and her husband Mohammed Ilyas is the accused.
15-10-26 02:30 pm
HK News Staffer
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 01:47 pm
HK News Staffer
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
Sudheer Reddy, Agnes College, ABVP: ಭಾರತ ಮಾತೆ...
15-10-26 12:19 pm
16-10-26 03:37 pm
HK News Staffer
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm