ಬ್ರೇಕಿಂಗ್ ನ್ಯೂಸ್
09-08-23 06:01 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 9: ಕರ್ಣಾಟಕ ಬ್ಯಾಂಕ್ ಮಾಜಿ ಅಧ್ಯಕ್ಷ ಪಿ.ಜಯರಾಮ ಭಟ್ ಹಠಾತ್ ಹೃದಯಾಘಾತಕ್ಕೀಡಾಗಿ ನಿಧನರಾಗಿದ್ದಾರೆ.
ಬುಧವಾರ ಮಧ್ಯಾಹ್ನ ಮುಂಬೈನಿಂದ ವಿಮಾನದಲ್ಲಿ ಬಂದಿದ್ದ ಅವರಿಗೆ ಮಂಗಳೂರು ವಿಮಾನ ನಿಲ್ದಾಣದಲ್ಲಿದ್ದಾಗಲೇ ಹೃದಯಾಘಾತ ಆಗಿತ್ತು. ತಕ್ಷಣ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದು ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದರು.
ಮಂಗಳೂರು ಹೊರವಲಯದ ಪೊಳಲಿ ಮೂಲದ ಜಯರಾಮ ಭಟ್ ಅವರು ಖಾಸಗಿ ವಲಯದ ಪ್ರಮುಖ ಬ್ಯಾಂಕ್ ಆಗಿರುವ ಕರ್ಣಾಟಕ ಬ್ಯಾಂಕ್‌ನಲ್ಲಿ ಕೆಳಹಂತದಿಂದ ಮೇಲಕ್ಕೇರುತ್ತಾ ವ್ಯವಸ್ಥಾಪಕ ನಿರ್ದೇಶಕ ಮತ್ತು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹುದ್ದೆಗೆ ಭಡ್ತಿ ಪಡೆದಿದ್ದರು. ಬಳಿಕ ಬ್ಯಾಂಕ್ ಚೇರ್ಮನ್ ಆಗಿ ನಿವೃತ್ತಿ ಹೊಂದಿದ್ದರು. ಮಂಗಳೂರಿನ ಸೇಂಟ್ ಅಲೋಶಿಯಸ್ ಕಾಲೇಜಿನ ಹಳೆ ವಿದ್ಯಾರ್ಥಿಯಾಗಿದ್ದ ಅವರು 1972 ರಲ್ಲಿ ಮೈಸೂರು ವಿವಿಯಿಂದ ಎಂಎಸ್ಸಿ ಪದವಿ ಗಳಿಸಿದ್ದರು.
ಮರು ವರ್ಷವೇ ಪ್ರೊಬೇಷನರಿ ಅಧಿಕಾರಿಯಾಗಿ ಕರ್ನಾಟಕ ಬ್ಯಾಂಕ್ ಸೇರಿದ್ದರು. 14 ವರ್ಷಗಳ ಕಾಲ ವಿವಿಧ ಶಾಖೆಗಳಲ್ಲಿ ಸೇವೆ ಸಲ್ಲಿಸಿ 1993 ರಲ್ಲಿ ಬ್ಯಾಂಕಿನ ಪ್ರಧಾನ ಕಚೇರಿಗೆ ಮಹಾ ಪ್ರಬಂಧಕರಾಗಿ ಬಡ್ತಿ ಪಡೆದಿದ್ದರು. 2009ರಲ್ಲಿ ಬ್ಯಾಂಕಿನ ಸಿಇಓ ಹುದ್ದೆಗೆ ಬಡ್ತಿ ಪಡೆದು ಸಂಸ್ಥೆಯ ಔನ್ನತ್ಯಕ್ಕೆ ಕೊಡುಗೆ ನೀಡಿದ್ದರು.
Mangalore Jayaram Bhat former Managing director of Karnataka Bank no more after Heart attack.
15-10-26 02:30 pm
HK News Staffer
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 01:47 pm
HK News Staffer
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
Sudheer Reddy, Agnes College, ABVP: ಭಾರತ ಮಾತೆ...
15-10-26 12:19 pm
16-10-26 03:37 pm
HK News Staffer
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm