ಬ್ರೇಕಿಂಗ್ ನ್ಯೂಸ್
11-08-23 10:57 pm Mangalore Correspondent ಕರಾವಳಿ
ಉಳ್ಳಾಲ, ಆ.11: ಮಂಗಳೂರು ವಿವಿಯ ಇತಿಹಾಸ ವಿಭಾಗದ ಹಿರಿಯ ಪ್ರಾಧ್ಯಾಪಕ ಪ್ರೊ.ಉದಯ ಬಾರ್ಕೂರು(59) ಅವರು ಶುಕ್ರವಾರ ಸಂಜೆ ಹೃದಯಾಘಾತಕ್ಕೆ ಬಲಿಯಾಗಿದ್ದಾರೆ.
ಮೃತರಿಗೆ ಪತ್ನಿ ಹಾಗೂ ಇಬ್ಬರು ಪುತ್ರಿಯರು ಇದ್ದಾರೆ. ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಕಳೆದ 34 ವರ್ಷಗಳಿಂದ(1989 ರಿಂದ) ಇತಿಹಾಸ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸುತ್ತಿದ್ದ ಅವರು ವಿಭಾಗದ ಅಧ್ಯಕ್ಷರಾಗಿ, ವಿವಿಯ ಸಿಂಡಿಕೇಟ್ ಸದಸ್ಯರಾಗಿ, ಕಲಾ ವಿಭಾಗದ ಡೀನ್ ಆಗಿ ವಿವಿಧ ಜವಾಬ್ದಾರಿಗಳನ್ನು ನಿರ್ವಹಿಸಿದ್ದರು. ಅಲ್ಲದೆ ಮಂಗಳೂರು ವಿಶ್ವವಿದ್ಯಾನಿಲಯದ ವಿದ್ಯಾರ್ಥಿ ಕ್ಷೇಮಪಾಲನಾ ವಿಭಾಗದ ನಿರ್ದೇಶಕರಾಗಿ ಕಾರ್ಯನಿರ್ವಹಿಸಿದ್ದರು.
2017 ರಲ್ಲಿ ಮಂಗಳೂರು ವಿವಿಯಿಂದ ಉತ್ತಮ ಪ್ರಾದ್ಯಾಪಕ ಪ್ರಶಸ್ತಿಯನ್ನು ಪಡೆದುಕೊಂಡಿದ್ದರು. ಇಂಡಿಯನ್ ಹಿಸ್ಟರಿ ಕಾಂಗ್ರೆಸ್, ಸೌತ್ ಇಂಡಿಯನ್ ಕಾಂಗ್ರೆಸ್, ಕರ್ನಾಟಕ ಹಿಸ್ಟರಿ ಕಾಂಗ್ರೆಸ್ ನ ಸದಸ್ಯರಾಗಿದ್ದ ಡಾ.ಉದಯ ಕುಮಾರ್ ಅವರು ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಸಮ್ಮೇಳನ ಮತ್ತು ವಿಚಾರ ಸಂಕಿರಣಗಳಲ್ಲಿ ಭಾಗವಹಿಸಿ ಪ್ರಬಂಧಗಳನ್ನು ಮಂಡಿಸಿದ್ದರು. ಇತಿಹಾಸ ತಜ್ಞನಾಗಿ ಗುರುತಿಸಿದ್ದ ಇವರ ಮಾರ್ಗದರ್ಶನದಲ್ಲಿ ಅನೇಕ ವಿದ್ಯಾರ್ಥಿಗಳು ಪಿಎಚ್‌ಡಿ ಪದವಿ ಪಡೆದುಕೊಂಡಿದ್ದಾರೆ.
ವಸಾಹತುಶಾಹಿ ಇತಿಹಾಸ ಚರಿತ್ರೆಯ ವಾಸ್ತವ, ಟಿಪ್ಪು- ಹೈದರಾಲಿ ಇತಿಹಾಸ ಕಥನ, ಹಿಸ್ಟರಿಯಾಗ್ರಫಿ ಆಫ್ ತುಳು ಕಲ್ಚರ್ ಆಂಡ್ ಹಿಸ್ಟರಿ, ಕೊಲೊನಿಯಲಿಸಂ ಆಂಡ್ ನ್ಯಾಷನಲಿಸಂ ಇನ್ ಮಾಡರ್ನ್ ಏಷಿಯಾ ಕೃತಿ ಸೇರಿದಂತೆ ಅನೇಕ ಅಮೂಲ್ಯ ಇತಿಹಾಸ ಗ್ರಂಥಗಳನ್ನು ಉದಯ್ ಬಾರ್ಕೂರು ಪ್ರಕಟಿಸಿದ್ದಾರೆ.
ಮೃತರು ಇತ್ತೀಚೆಗಷ್ಟೇ ಮಂಗಳೂರು ವಿಶ್ವವಿದ್ಯಾನಿಲಯದ ನೆಹರೂ ಅಧ್ಯಯನ ಕೇಂದ್ರದ ನಿರ್ದೇಶಕರಾಗಿ ನೇಮಕಗೊಂಡಿದ್ದರು. ಉದಯ್ ಬಾರ್ಕೂರು ನಿಧನಕ್ಕೆ ಮಂಗಳೂರು ವಿವಿ ಕುಲಪತಿ, ಕುಲಸಚಿವರು ಸೇರಿದಂತೆ ಅನೇಕ ಗಣ್ಯರು ಸಂತಾಪ ಸೂಚಿಸಿದ್ದಾರೆ.
Mangalore Univercity professor Uday Barkur (59) dies of heart attack.
13-12-25 10:47 pm
HK News Desk
ಕುರ್ಚಿ ಗುದ್ದಾಟ ; ಪರಮೇಶ್ವರ್ ಸಿಎಂ ಆಗಲೆಂದು ಹಾರೈಸ...
13-12-25 08:38 pm
BJP MLA Subhash Guttedar: ಅಳಂದ ಮತಗಳವು ಪ್ರಕರಣ...
13-12-25 04:00 pm
Pet Parrot, Bangalore Youth Death: 2 ಲಕ್ಷ ರೂ....
12-12-25 08:47 pm
Yatnal, Dk Shivakumar, Vijayendra: ಡಿಕೆ ಸಿಎಂ,...
12-12-25 07:47 pm
13-12-25 08:34 pm
HK News Desk
ಕಾರ್ತಿಗೈ ದೀಪೋತ್ಸವ ವಿವಾದ ; ಮಸೀದಿಯವರೇ ಆಕ್ಷೇಪಿಸಿ...
12-12-25 11:00 pm
ಮೋದಿ ಉತ್ತರಾಧಿಕಾರಿ ಯಾರು ? ಆರೆಸ್ಸೆಸ್ ನಿರ್ಧರಿಸುತ...
11-12-25 04:24 pm
ಮಂಗಳೂರು ಏರ್ಪೋರ್ಟ್ಗೆ ವಿದೇಶಿ ನೇರ ವಿಮಾನ ವ್ಯವಸ್...
11-12-25 02:09 pm
ತಮಿಳುನಾಡಿನಲ್ಲಿ ಕಾರ್ತಿಗೈ ದೀಪಕ್ಕೆ ಹೈಕೋರ್ಟ್ ಅನುಮ...
10-12-25 11:13 pm
13-12-25 11:02 pm
Mangalore Correspondent
ಕೆಂಜಾರು ಬಳಿ ಗೋವುಗಳನ್ನು ಕಡಿದು ಹತ್ಯೆ ; ಪೊದೆಯಲ್ಲ...
13-12-25 04:36 pm
ಸತತ ನಾಲ್ಕು ಗಂಟೆ ಸ್ಕೇಟಿಂಗ್ ನಲ್ಲಿ ಶಾಸ್ತ್ರೀಯ ನೃತ...
12-12-25 10:28 pm
ದೈವ ನರ್ತನದ ಬಗ್ಗೆ ನಮಗೆ ಸಂಶಯಗಳಿಲ್ಲ, ಗ್ರಾಮ ದೈವಕ್...
12-12-25 07:32 pm
ಆಯುಷ್ ಇಲಾಖೆಯಲ್ಲಿ ಅವಧಿ ಮೀರಿದ ಔಷಧ ಪೂರೈಕೆ ; ಅಧಿಕ...
12-12-25 02:02 pm
13-12-25 12:51 pm
HK News Desk
ಹಣ್ಣಿನ ವ್ಯಾಪಾರಿಯನ್ನು ಅಡ್ಡಗಟ್ಟಿ 19 ಸಾವಿರ ನಗದು...
12-12-25 01:58 pm
Hassan Crime, Murder: ಸ್ನೇಹಿತನನ್ನು ಪಾರ್ಟಿಗೆ ಕ...
11-12-25 09:53 pm
Bangalore Crime, Blackmail, Suicide: ಬೆತ್ತಲೆ...
11-12-25 07:49 pm
Imprisonment in Malpe Case: ಮಲ್ಪೆಯಲ್ಲಿ ನೆಲೆಸಿ...
10-12-25 10:14 pm