ಬ್ರೇಕಿಂಗ್ ನ್ಯೂಸ್
13-08-23 07:58 pm Mangalore Correspondent ಕರಾವಳಿ
ಪುತ್ತೂರು, ಆಗಸ್ಟ್ 13: ಕಾರಿನಲ್ಲಿ ತೆರಳುತ್ತಿದ್ದ ಮುಸ್ಲಿಂ ವ್ಯಕ್ತಿಯೊಬ್ಬರನ್ನು ಅಡ್ಡಗಟ್ಟಿದ ಐವರಿದ್ದ ತಂಡ ಅವರಿಗೆ ಅವಾಚ್ಯವಾಗಿ ನಿಂದಿಸಿ ಹಲ್ಲೆಗೈದು ನೈತಿಕ ಗೂಂಡಾಗಿರಿ ನಡೆಸಿದ ಘಟನೆ ಸುಳ್ಯದಲ್ಲಿ ನಡೆದಿದ್ದು, ಘಟನೆ ಬಗ್ಗೆ ಸುಳ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕೇರಳದ ಮಲಪ್ಪುರಂ ನಿವಾಸಿ ಮೊಹಮ್ಮದ್ ಜಲೀಲ್ (39) ಹಲ್ಲೆಗೀಡಾದ ವ್ಯಕ್ತಿ. ಇವರು ಕಳೆದ ಮೂರು ತಿಂಗಳ ಹಿಂದೆ ಸುಳ್ಯದ ಅರಂತೋಡಿನಲ್ಲಿ ರಬ್ಬರ್ ತೋಟವನ್ನು ಗುತ್ತಿಗೆ ಪಡೆದು ವಾಸವಾಗಿದ್ದಾರೆ. ನಿನ್ನೆ ಸಂಜೆ ತನ್ನ ಪರಿಚಯದ ಯುವತಿಯೊಬ್ಬಳು ಮಡಿಕೇರಿಯಿಂದ ಸುಳ್ಯಕ್ಕೆ ಬರುತ್ತಿದ್ದು, ವಿಶ್ರಾಂತಿ ಪಡೆಯಲು ರೂಮ್ ಬೇಕೆಂದು ಕೇಳಿಕೊಂಡ ಮೇರೆಗೆ ಮೊಹಮ್ಮದ್ ಜಲೀಲ್ ಆಕೆಗೆ ಲಾಡ್ಜ್ ನಲ್ಲಿ ರೂಮ್ ಮಾಡಿಕೊಟ್ಟಿದ್ದರು.
ಆನಂತರ ವೈಯಕ್ತಿಕ ಕೆಲಸಕ್ಕಾಗಿ ಅರಂತೋಡು ಬಳಿಯ ತೊಡಿಕಾನಕ್ಕೆ ತೆರಳಿದ್ದಾಗ ಐದು ಜನ ಆರೋಪಿಗಳು ಕಾರು ಮತ್ತು ಸ್ಕೂಟರ್ ಮೂಲಕ ಬಂದು ಮೊಹಮ್ಮದ್ ಜಲೀಲ್ ಪ್ರಯಾಣಿಸುತ್ತಿದ್ದ ಕಾರನ್ನು ಅಡ್ಡಗಟ್ಟಿದ್ದಾರೆ. ಅಲ್ಲದೆ, ಜಲೀಲ್ ಮೇಲೆ ಅವಾಚ್ಯ ನಿಂದಿಸಿ ಕೈಯಿಂದ ಹಲ್ಲೆಗೈದು ಜೀವ ಬೆದರಿಕೆ ಹಾಕಿದ್ದಾರೆ. ಆರೋಪಿಗಳ ಪೈಕಿ ಲತೀಶ್ ಗುಂಡ್ಯ, ವರ್ಷಿತ್ ಹಾಗೂ ಪುನೀತ್ ಎಂಬುದಾಗಿ ತಿಳಿದಿದ್ದು ಇನ್ನಿಬ್ಬರ ಮಾಹಿತಿ ಇಲ್ಲವೆಂದು ಜಲೀಲ್ ಸುಳ್ಯ ಪೊಲೀಸರಿಗೆ ದೂರು ನೀಡಿದ್ದರು. ಇದರಂತೆ ಸುಳ್ಯ ಠಾಣೆಯಲ್ಲಿ ಕಲಂ 143, 147, 341, 323, 504, 506, 153(ಎ) ಅನ್ವಯ ಪ್ರಕರಣ ದಾಖಲಾಗಿದ್ದು, ಪೊಲೀಸರು ಸುಳ್ಯ ಸೋಣಂಗೇರಿ ನಿವಾಸಿ ಪುನೀತ್ ಎಂಬಾತನನ್ನು ಬಂಧಿಸಿದ್ದಾರೆ. ಇತರ ನಾಲ್ವರ ಬಂಧನಕ್ಕೆ ಬಲೆ ಬೀಸಿದ್ದಾರೆ.
ಘಟನೆ ಸಂಬಂಧಿಸಿ ಪುತ್ತಿಲ ಪರಿವಾರದ ಅರುಣ್ ಪುತ್ತಿಲ ಮತ್ತು ಇತರರು ಸುಳ್ಯ ಠಾಣೆಗೆ ತೆರಳಿ, ಪ್ರಕರಣದಲ್ಲಿ ಅಮಾಯಕರನ್ನು ವಶಕ್ಕೆ ಪಡೆದಿರುವುದಾಗಿ ತಿಳಿದ ಪ್ರಕಾರ ಪೊಲೀಸರ ಜೊತೆ ಚರ್ಚಿಸಿದ್ದಾರೆ. ಆದರೆ ಈ ಬಗ್ಗೆ ಕಹಳೆ ನ್ಯೂಸ್ ಎಂಬ ವೆಬ್ ನಲ್ಲಿ ತಪ್ಪಾಗಿ ಮತ್ತು ಪ್ರಚೋದನಕಾರಿ ಸುದ್ದಿ ಪ್ರಕಟಿಸಿದ್ದನ್ನು ಎಸ್ಪಿ ಋಷ್ಯಂತ್ ಆಕ್ಷೇಪಿಸಿದ್ದು, ಸುದ್ದಿ ವೆಬ್ ಸೈಟ್ ವಿರುದ್ಧ ಪ್ರಕರಣ ದಾಖಲಿಸುವುದಾಗಿ ತಿಳಿಸಿದ್ದಾರೆ.
Mangalore Sullia Moral Policing, Kerala native man attacked, one arrested. Man who was booking room with girl nearby Sullia was attacked by Mob.
21-08-25 10:31 pm
Bangalore Correspondent
Dharmasthala, Acharya Sri Gunadharanandi Maha...
21-08-25 10:21 pm
ಸೌಹಾರ್ದ ಸಹಕಾರಿ ವಿಧೇಯಕಕ್ಕೆ ಮೇಲ್ಮನೆಯಲ್ಲಿ ಸೋಲು ;...
21-08-25 06:24 pm
"ಧರ್ಮದ ಉಳಿವಿಗಾಗಿ ಧರ್ಮ ಯುದ್ಧ" ; ರಾಜ್ಯದ ಎಲ್ಲ ವ...
21-08-25 06:02 pm
Mandya Police Torture, Suicide: ಪೊಲೀಸ್ ಠಾಣೆಯ...
21-08-25 02:03 pm
21-08-25 06:09 pm
HK News Desk
ಹೈದರಾಬಾದ್ ನಲ್ಲಿ ಕಲಬುರಗಿ ಮೂಲದ 2 ವರ್ಷದ ಮಗು ಸೇರ...
21-08-25 12:54 pm
ಹೆದ್ದಾರಿಯಲ್ಲಿ ಗುಂಡಿಗಳು ಬಿದ್ದಿದ್ದರೆ, ಟ್ರಾಫಿಕ್...
20-08-25 10:56 pm
30 ದಿನ ಜೈಲು ಪಾಲಾದರೆ ಪ್ರಧಾನಿ, ಸಿಎಂ, ಸಚಿವರನ್ನು...
20-08-25 06:40 pm
ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಆಗಂತುಕನಿಂದ ಹಲ್ಲೆ...
20-08-25 11:01 am
21-08-25 09:35 pm
HK News Desk
Vhp, Mangalore, Sharan Pumpwell: ಗಣೇಶೋತ್ಸವ, ದ...
21-08-25 09:12 pm
FIR, YouTuber Sameer MD, Doota Arrest: ಸಾವಿರಾ...
21-08-25 03:44 pm
MRPL Accident, Mangalore: ಕಾಟಿಪಳ್ಳ ; ಟಿಪ್ಪರ್...
21-08-25 02:05 pm
Mahesh Shetty Timarodi, Udupi Police, BL Sant...
21-08-25 11:57 am
21-08-25 11:00 pm
Mangalore Correspondent
ಶೀಲ ಶಂಕೆ ; ಕ್ರಿಮಿನಾಶಕ ಕೊಡಿಸಿ ಕೊಲೆ, ಪ್ರಿಯಕರನೊ...
21-08-25 10:39 pm
Mangalore, Derlakatte, Robbery, Muthoot finan...
20-08-25 08:10 pm
Mangalore Lucky Scheme Scam Fraud, Wahab Kula...
19-08-25 10:52 pm
ಕಸ್ಟಮ್ಸ್ ಅಧಿಕಾರಿಗಳ ಸೋಗಿನಲ್ಲಿ ಚಿನ್ನದ ವ್ಯಾಪಾರಿಯ...
19-08-25 10:30 pm