ಬ್ರೇಕಿಂಗ್ ನ್ಯೂಸ್
16-08-23 10:54 am Mangalore Correspondent ಕರಾವಳಿ
ಮಂಗಳೂರು, ಆ.16: ಕಾಸರಗೋಡು ಜಿಲ್ಲೆಯ ಕುಂಬಳೆ ಬಳಿಯ ಬಂಬ್ರಾಣ ಕಲ್ಕುಲ ನಿವಾಸಿ ಕಲ್ಲಿನ ಮೇಸ್ತ್ರಿ ಕೆಲಸ ಮಾಡುತ್ತಿದ್ದ ಲೋಕೇಶ್ (52) ಎಂಬವರ ಮೃತದೇಹ ಸೋಮವಾರ ಬೆಳಗ್ಗೆ ಉಳ್ಳಾಲ ಕಡಲ ಕಿನಾರೆಯಲ್ಲಿ ಪತ್ತೆಯಾಗಿದೆ. ತಿಂಗಳ ಹಿಂದೆ ಲೋಕೇಶ್ ಅವರ ಪುತ್ರ ರಾಜೇಶ್ ಆತ್ಮಹತ್ಯೆ ಮಾಡಿದ್ದು ಪುತ್ರ ಶೋಕದಲ್ಲಿದ್ದ ತಂದೆಯೂ ಆತ್ಮಹತ್ಯೆಗೈದಿದ್ದಾರೆ.
ಮೃತ ಲೋಕೇಶ್ ಅವರ ಪುತ್ರ ರಾಜೇಶ್ (26) ಕಳೆದ ಜು.10 ರಂದು ನಾಪತ್ತೆಯಾಗಿದ್ದು,ಆತನ ಮೃತದೇಹ ಜು.12 ರಂದು ಬೆಳಗ್ಗೆ ಮಂಗಳೂರು ಬೆಂಗರೆ ನೇತ್ರಾವತಿ ನದಿ ತೀರದಲ್ಲಿ ಪತ್ತೆಯಾಗಿತ್ತು. ಮಗನ ಅಗಲಿಕೆ ಬಳಿಕ ತಂದೆ ಲೋಕೇಶ್ ಶೋಕತಪ್ತರಾಗಿ ಮಾನಸಿಕವಾಗಿ ಕುಗ್ಗಿದ್ದರು. ಆ.13 ರಂದು ಬೆಳಗ್ಗೆ 9 ಗಂಟೆಯ ವೇಳೆ ಪರಿಸರದ ಕೆಲವು ಮಂದಿಗೆ ಲೋಕೇಶ್ ರವರು ಮೊಬೈಲ್ ಮೂಲಕ ವಾಟ್ಸಪ್ ಆಡಿಯೋ ಸಂದೇಶ ಕಳುಹಿಸಿ "ನಾನು ಈಗ ಸೋಮೇಶ್ವರಕ್ಕೆ ಹೋಗಿ ಸಮುದ್ರಕ್ಕೆ ಹಾರುತ್ತೇನೆ. ನನ್ನ ಹೆಣ ಉಳ್ಳಾಲದಲ್ಲಿ ಸಿಗಬಹುದು" ನಾನು ಮೊಬೈಲ್ ಕೊಂಡು ಹೋಗುವುದಿಲ್ಲ. ಮನೆಯಲ್ಲಿ ಇಟ್ಟು ಹೋಗ್ತೇನೆ ಎಂದು ಹೇಳಿ ಮನೆಯಿಂದ ತೆರಳಿದ್ದರು.
ವಾಟ್ಸಪ್ ಸಂದೇಶ ಕೇಳಿದ ಕೂಡಲೇ ಪರಿಸರದವರು ಕರೆ ಮಾಡಿದಾಗ ಮನೆ ಮಂದಿ ಕಾಲ್ ರಿಸೀವ್ ಮಾಡಿದ್ದರು. ಆಗ ಮನೆ ಮಂದಿ ಲೋಕೇಶ್ ರವರು ಮೊಬೈಲ್ ಮನೆಯಲ್ಲಿ ಇಟ್ಟು ಹೊರ ಹೋದ ಬಗ್ಗೆ ಮಾಹಿತಿ ನೀಡಿದ್ದರು. ಕೂಡಲೇ ಈ ವಿಷಯವನ್ನು ಉಳ್ಳಾಲ ಠಾಣೆಗೆ ಮನೆಯವರು ಹಾಗೂ ಪರಿಸರ ನಿವಾಸಿಗಳು ತಿಳಿಸಿದ್ದರು. ಮಂಗಳವಾರ 11 ಗಂಟೆ ವೇಳೆ ಲೋಕೇಶ್ ಅವರ ಮೃತದೇಹ ಉಳ್ಳಾಲದಲ್ಲಿ ಮೀನುಗಾರರಿಗೆ ಸಿಕ್ಕಿದೆ.
ಮಗ ರಾಜೇಶ್ ಆತ್ಮಹತ್ಯೆಯ ತಿಂಗಳ ಅಂತರದಲ್ಲಿ ಆತನ ತಂದೆ ಲೋಕೇಶ್ ಕೂಡ ಆತ್ಮಹತ್ಯೆಗೈದಿರುವುದು ಮನೆಮಂದಿ ಮತ್ತು ನರೆಹೊರೆಯವರನ್ನ ಆತಂಕಕ್ಕೀಡು ಮಾಡಿದೆ.
Mangalore Body of Lokesh (57) year old man from kasargod, Kumble found at Ullal beach after suicide. It is said that Lokesh son committed suicide just a month ago and was depressed.
29-08-26 10:49 pm
HK News Staffer
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
ನಾಗೇಂದ್ರ ರಾಜಿನಾಮೆ ನೀಡಿದ್ರೂ ಬಿಜೆಪಿ ಪಾದಯಾತ್ರೆ ಮ...
29-08-26 10:38 pm
ಸಿನಿಮಾಗಳಲ್ಲಿ ಮಹಿಳೆಯನ್ನು ಭೋಗದ ವಸ್ತುವನ್ನಾಗಿ ತೋರ...
28-08-26 09:35 pm
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
29-08-26 10:25 pm
HK News Staffer
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm