ಬ್ರೇಕಿಂಗ್ ನ್ಯೂಸ್
16-08-23 10:30 pm Mangalore Correspondent ಕರಾವಳಿ
ಬಂಟ್ವಾಳ, ಆಗಸ್ಟ್ 16: ಗೂಡ್ಸ್ ವಾಹನದಲ್ಲಿ ಮುಂಜಾನೆ 3 ಗಂಟೆ ವೇಳೆಗೆ ಜಾನುವಾರುಗಳನ್ನು ಸಾಗಿಸುತ್ತಿದ್ದಾಗ ಹಿಂದು ಸಂಘಟನೆ ಕಾರ್ಯಕರ್ತರು ಅಡ್ಡಗಟ್ಟಿದ್ದು ವಾಹನದಲ್ಲಿದ್ದ ನಾಲ್ವರ ಮೇಲೆ ಹಲ್ಲೆಗೈದ ಘಟನೆ ವಿಟ್ಲ ಠಾಣೆ ವ್ಯಾಪ್ತಿಯ ಅಳಿಕೆ ಗ್ರಾಮದ ಮುಳಿಯ ಎಂಬಲ್ಲಿ ನಡೆದಿದೆ.
ಗೂಡ್ಸ್ ವಾಹನದಲ್ಲಿ ಜಾನುವಾರು ಒಯ್ಯುತ್ತಿದ್ದಾಗ ಜಯಪ್ರಶಾಂತ, ಲಕ್ಷ್ಮೀಶ ಮತ್ತು ಇತರರು ಸೇರಿಕೊಂಡು ಮೂರು ಬೈಕ್ ಮತ್ತು ಒಂದು ಕಾರನ್ನು ರಸ್ತೆಗೆ ಅಡ್ಡವಾಗಿಟ್ಟು ಗೋವುಗಳನ್ನು ಒಯ್ಯುತ್ತಿದ್ದವರನ್ನು ಎಳೆದು ಹಾಕಿ ಬೇಸ್ ಬಾಲ್ ಬ್ಯಾಟ್ ಮತ್ತು ಕತ್ತಿಯಿಂದ ಹಲ್ಲೆ ನಡೆಸಿದ್ದಾರೆಂದು ಹಲ್ಲೆಗೀಡಾದ ಮೂಸಾ ಎಂಬವರು ವಿಟ್ಲ ಠಾಣೆಗೆ ದೂರು ನೀಡಿದ್ದಾರೆ.
ನಿನ್ನೆ ಸಂಜೆ ವೇಳೆಗೆ ಮುಳಿಯ ಹಿಂದು ವ್ಯಕ್ತಿಯಿಂದಲೇ ನಾಲ್ಕು ಜಾನುವಾರುಗಳನ್ನು ಖರೀದಿಸಿದ್ದರು. ಈ ಬಗ್ಗೆ ಮಾಹಿತಿ ಪಡೆದಿದ್ದ ಸಂಘಟನೆ ಸದಸ್ಯರು ಮುಂಜಾನೆ ಹೊತ್ತಿಗೆ ಕೇರಳ ಗಡಿಭಾಗ ಬಾಕ್ರಬೈಲಿನ ಕಜೆ ಎಂಬಲ್ಲಿಗೆ ತರುತ್ತಿದ್ದಾಗ ಅಡ್ಡಗಟ್ಟಿ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ಆನಂತರ, ವಿಟ್ಲ ಠಾಣೆಗೆ ಮಾಹಿತಿ ನೀಡಿದ್ದು, ಪೊಲೀಸರು ಬಂದು ಕಾರ್ಯಾಚರಣೆ ನಡೆಸಿದ್ದಾರೆ. ಈ ವೇಳೆ, ಬಾಕ್ರಬೈಲು ನಿವಾಸಿಗಳಾದ ಇಬ್ರಾಹಿಂ ಯಾನೆ ಮೋನು, ಮೂಸಾ, ಕನ್ಯಾನ ನಿವಾಸಿ ಹಮೀದ್ ಯಾನೆ ಜಲಾಲ್ ಎಂಬವರನ್ನು ಬಂಧಿಸಿದ್ದಾರೆ. ನಾಲ್ಕು ಜಾನುವಾರು, ಗೂಡ್ಸ್ ವಾಹನಗಳನ್ನು ವಶಕ್ಕೆ ಪಡೆದು ಅಕ್ರಮ ಗೋಸಾಗಣೆ, ಗೋಹತ್ಯೆ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ.
ಇದೇ ವೇಳೆ, ಮೂಸಾ ಎಂಬವರು ನೀಡಿದ ದೂರಿನಂತೆ ವಿಟ್ಲ ಠಾಣೆಯಲ್ಲಿ ಹಲ್ಲೆ, ಕೊಲೆಯತ್ನ ಪ್ರಕರಣ ದಾಖಲಾಗಿದ್ದು, ಇಬ್ಬರು ಹಿಂದು ಸಂಘಟನೆ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
Moral Policing at Vitla in Mangalore on cow vigilantes, Four arrested.
15-10-26 02:30 pm
HK News Staffer
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 01:47 pm
HK News Staffer
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
Sudheer Reddy, Agnes College, ABVP: ಭಾರತ ಮಾತೆ...
15-10-26 12:19 pm
16-10-26 03:37 pm
HK News Staffer
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm