ಬ್ರೇಕಿಂಗ್ ನ್ಯೂಸ್
21-08-23 10:05 pm Mangalore Correspondent ಕರಾವಳಿ
ಉಳ್ಳಾಲ, ಆ.21: ಎರಡು ಬೇಕರಿ ಮಾಲೀಕ ಪತ್ನಿ , ಮಗಳು ಇದ್ದ ಸಂದರ್ಭದಲ್ಲೇ ಬಾಡಿಗೆ ಮನೆಯಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಕುತ್ತಾರು ಸಮೀಪದ ಶಾಂತಿಬಾಗ್ ಎಂಬಲ್ಲಿ ಇಂದು ಸಂಜೆ ವೇಳೆ ನಡೆದಿದೆ.
ಹಾಸನ ಜಿಲ್ಲೆ ಹಳೇಬೀಡು ರಸ್ತೆಯ ಬಲ್ಲೇನಹಳ್ಳಿ ನಿವಾಸಿ ರುದ್ರೇಶ್ (36) ಆತ್ಮಹತ್ಯೆ ಮಾಡಿಕೊಂಡವರು. ಮೃತರು ಪುತ್ರಿಯರಾದ 8ನೇ ತರಗತಿಯ ಪೂರ್ವಿಕಾ, 4ನೇ ತರಗತಿಯ ನಿಶ್ಚಿತಾ ಹಾಗೂ ಪತ್ನಿ ಹೇಮಲತಾ ಜೊತೆ ಶಾಂತಿಬಾಗ್ ಬಳಿಯ ಬಾಡಿಗೆ ಮನೆಯಲ್ಲಿ ನೆಲೆಸಿದ್ದರು. ಹಾಸನ ಜಿಲ್ಲೆಯಿಂದ 12 ವರ್ಷಗಳ ಹಿಂದೆ ವಲಸೆ ಬಂದಿದ್ದ ರುದ್ರೇಶ್ ಅವರು ಕುತ್ತಾರು ಹಾಗೂ ದೇರಳಕಟ್ಟೆಯ ಯೆನಪೋಯ ಆಸ್ಪತ್ರೆ ಬಳಿ ಬೆಂಗಳೂರ್ ಅಯ್ಯಂಗಾರ್ ಹೆಸರಿನಲ್ಲಿ ಬೇಕರಿ ವ್ಯಾಪಾರ ನಡೆಸುತ್ತಿದ್ದರು. ಇಂದು ಬೆಳಗ್ಗೆ ಬೇಕರಿಯಿಂದ ಮನೆಗೆ ಬಂದವರು ವಾಪಸ್ ಹೋಗಿರಲಿಲ್ಲ. ಮನೆಯ ಕೋಣೆಯೊಂದರಲ್ಲಿ ರುದ್ರೇಶ್ ಉಳಿದಿದ್ದರೆ, ಪತ್ನಿ ಹೇಮಲತಾ ಇನ್ನೊಂದು ಕೋಣೆಯಲ್ಲಿ ಮಲಗಿದ್ದರು. ಸಂಜೆ ಹೇಮಲತಾ ಪತಿ ಏಳದೇ ಇರುವುದನ್ನು ಗಮನಿಸಿ ಬಾಗಿಲು ಮುರಿದಾಗ ರುದ್ರೇಶ್ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.
ರುದ್ರೇಶ್ ಹೃದಯ ಸಂಬಂಧಿ ಕಾಯಿಲೆಯಲ್ಲಿ ಬಳಲುತ್ತಿದ್ದರಂತೆ. ಪತ್ನಿ ಹೇಮಲತಾ ಕೆಲ ದಿನಗಳ ಹಿಂದೆಯಷ್ಟೇ ಕಿವಿಯ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ರುದ್ರೇಶ್ ಸಹೋದರಿಯೂ ದೇರಳಕಟ್ಟೆಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆಂದು ಬಂದವರು ಸಹೋದರನ ಮನೆಯಲ್ಲೇ ಪುತ್ರನ ಜತೆಗೆ ಎರಡು ದಿನಗಳಿಂದ ಉಳಿದುಕೊಂಡಿದ್ದರು. ಘಟನೆ ವೇಳೆ ಸಹೋದರಿ ಮತ್ತು ಕಿರಿಯ ಮಗಳು ನಿಶ್ಚಿತಾ ಯೆನೆಪೋಯ ಆಸ್ಪತ್ರೆ ಬಳಿಯ ಬೇಕರಿಯಲ್ಲಿದ್ದರೆ, ಸಹೋದರಿಯ ಪುತ್ರ ಕುತ್ತಾರು ಬೇಕರಿಯಲ್ಲಿ ಇದ್ದರು. ದೊಡ್ಡ ಮಗಳು ಪೂರ್ವಿಕ ಹಾಗೂ ಪತ್ನಿ ಹೇಮಲತಾ ಮನೆಯಲ್ಲೇ ಇದ್ದರು.
ಮೃತದೇಹವನ್ನ ಉಳ್ಳಾಲ ಪೊಲೀಸರು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದು ಪ್ರಕರಣ ದಾಖಲಿಸಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.
Iyengar Bakery owner commits suicide at Kuthar, Ullal in Mangalore. The deceased has been identifed as Rudresh (36) native of Halebidu.
17-10-26 07:30 pm
HK News Staffer
Davanagere Accident: ದಾವಣಗೆರೆ ; ಸಿಎನ್ಜಿ ಲಾರಿ...
16-10-26 09:49 pm
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
17-10-26 07:34 pm
HK News Desk
ಸೆ.30ರ ಸ್ಫೋಟ ಘಟನೆಯಲ್ಲಿ 118.76 ಕೋಟಿ ನಷ್ಟ ; ಎಂಆ...
17-10-26 12:25 pm
ಪದ್ಮಶ್ರೀ ಹಾಜಬ್ಬರಿಗೆ ಚುನಾವಣಾ ಆಯೋಗವು ನೋಟೀಸು ನೀಡ...
16-10-26 10:28 pm
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
17-10-26 11:09 am
HK News Staffer
LanchuLal, Astra Fraud, Mangalore: ‘ಅಕ್ಷಯ ಪಾತ...
16-10-26 03:37 pm
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am