ಬ್ರೇಕಿಂಗ್ ನ್ಯೂಸ್
07-11-20 03:57 pm Mangalore Correspondent ಕರಾವಳಿ
ಸುಳ್ಯ, ನವೆಂಬರ್ 07: ಅಮೆರಿಕದ ಅಧ್ಯಕ್ಷರ ಹುದ್ದೆಯ ಆಯ್ಕೆಗೆ ಭಾರೀ ಸೆಣಸಾಟ ನಡೆಯುತ್ತಿದೆ. ಈ ಮಧ್ಯೆ ಅಮೆರಿಕದ ಸಂಸತ್ತಿಗೆ ಸೆನೆಟ್ ಸದಸ್ಯರಾಗಿ ಆಯ್ಕೆಯಾದ ಭಾರತೀಯ ಮೂಲದ ವ್ಯಕ್ತಿಯೊಬ್ಬರು ಹೆಸರಾಂತ ನಾಗಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯಕ್ಕೆ ಆಗಮಿಸಿ ಹರಕೆ ಸಲ್ಲಿಸಿದ್ದಾರೆ.
ಅಮೆರಿಕದಲ್ಲಿ ವಕೀಲರಾಗಿರುವ, ನವದೆಹಲಿ ಮೂಲದ ರಾಜಾ ಕೃಷ್ಣಮೂರ್ತಿಯವರು 2016 ರಲ್ಲಿ ಮೊದಲ ಬಾರಿಗೆ ಅಮೆರಿಕ ಸಂಸತ್ತಿಗೆ ಆಯ್ಕೆಯಾಗಿದ್ದರು. ಬಳಿಕ ಕಳೆದ ವರ್ಷ ತನ್ನ ತಾಯಿ ವಿಜಯಾ ಕೃಷ್ಣಮೂರ್ತಿ ಜತೆ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪ್ರಾರ್ಥನೆ ಸಲ್ಲಿಸಿ ನಾಗಪ್ರತಿಷ್ಠೆ ಹಾಗೂ ಪಂಚಾಮಾಭಿಷೇಕ ಸೇವೆ ಪೂರೈಸಿದರು.

ಈ ಬಾರಿ ಸೆನೆಟ್ ಪ್ರತಿನಿಧಿಯ ಚುನಾವಣೆಗೆ ಸ್ಪರ್ಧಿಸಿದ್ದ ವೇಳೆ ಬೆಂಗಳೂರು ಮೂಲದ ಜ್ಯೋತಿಷಿ, ಅಮೆರಿಕದ ಚಿಕಾಗೋದಲ್ಲಿ ಹಿಂದೂ ದೇವಸ್ಥಾನ ಒಂದರಲ್ಲಿ ಅರ್ಚಕರಾಗಿರುವ ಪುರೋಹಿತ ನಾಗೇಂದ್ರ ರಾವ್ ಸಲಹೆಯಂತೆ ಸುಬ್ರಹ್ಮಣ್ಯ ದೇವರಿಗೆ ಹರಕೆ ಹೊತ್ತುಕೊಂಡಿದ್ದರು. ಇದೀಗ ಚುನಾವಣೆಯಲ್ಲಿ ಗೆದ್ದ ಬಳಿಕ ಹರಕೆ ಈಡೇರಿಸಲು ಕ್ಷೇತ್ರಕ್ಕೆ ಬಂದಿರುವುದಾಗಿ ರಾಜಾ ಕೃಷ್ಣಮೂರ್ತಿ ಹೇಳಿದ್ದಾರೆ.
ಭೇಟಿ ಸಂದರ್ಭ ದೇಗುಲದ ಶಿಷ್ಟಾಚಾರ ಅಧಿಕಾರಿ ಗೋಪಿನಾಥ ನಂಬೀಶರು ಮಾರ್ಗದರ್ಶನ ನೀಡಿದರು. ಈ ಗೆಲುವಿನಲ್ಲಿ ದೇವರ ದಯೆಯೂ ಇದೆ ಎಂದು ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವರ ಭಕ್ತನಾಗಿರುವ ಅವರು ಪ್ರತಿಕ್ರಿಯಿಸಿದ್ದಾರೆ.
America Democratic Party Senate Member Raja Krishnamoorthi visited Kukke Subramanya Temple, Mangalore to offer special pooja.
30-01-26 10:37 pm
Bangalore Correspondent
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
ಲಕ್ಕುಂಡಿಯಲ್ಲಿ ನಿಧಿ ಕಾಯ್ತಿದೆಯಾ ಮೂರು ಹೆಡೆಯ ನಾಗರ...
30-01-26 12:38 pm
ಕರಾವಳಿ ಜಿಲ್ಲೆಗಳ ರೈತರ ಬೆಳೆ ವಿಮೆಗೆ ರಾಜ್ಯ ಸರ್ಕಾರ...
30-01-26 12:20 pm
30-01-26 03:38 pm
HK News Desk
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
ಕೋಲ್ಕತ್ತಾ ಭೀಕರ ಅಗ್ನಿ ಅವಘಡ ; 21 ಮಂದಿ ಸಾವು, ಹೊತ...
30-01-26 01:23 pm
ಕೇರಳದಲ್ಲಿ ಹೈಸ್ಪೀಡ್ ರೈಲು ಯೋಜನೆ ; ತಿರುವನಂತಪುರ-...
29-01-26 11:07 pm
ಮಂಜು ಮುಸುಕಿದ್ದೇ ವಿಮಾನ ಅಪಘಾತಕ್ಕೆ ಕಾರಣ? ರನ್ ವೇ...
28-01-26 11:16 pm
30-01-26 09:01 pm
Giridhar Shetty, Mangaluru
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
Kadri Flower Show 2026: ಕದ್ರಿಯಲ್ಲಿ ಫ್ಲವರ್ ಶೋ...
29-01-26 08:37 pm
ಕೋಡಿಬೆಂಗ್ರೆ ದುರಂತದ ಬಳಿಕ ಎಚ್ಚೆತ್ತ ಜಿಲ್ಲಾಡಳಿತ ;...
29-01-26 03:54 pm
30-01-26 10:57 pm
HK News Desk
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm
ಬೆಂಗಳೂರಿನಲ್ಲಿ ಮತ್ತೊಂದು ದರೋಡೆ ; 1.37 ಕೋಟಿ ರೂ....
27-01-26 05:56 pm
ಕೆನರಾ ಲೈಟಿಂಗ್ ಇಂಡಸ್ಟ್ರೀಸ್ ಸಂಸ್ಥೆಯಿಂದ ಕೊಲ್ಕತ್ತ...
27-01-26 05:15 pm