ಬ್ರೇಕಿಂಗ್ ನ್ಯೂಸ್
29-08-23 09:44 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 29: ಹಿರಿಯ ಚಿತ್ರನಟ, ಕಳೆದ ಐದು ದಶಕಗಳ ಕಾಲ ವಿವಿಧ ಭಾಷೆಗಳ ಸಿನಿಮಾಗಳಲ್ಲಿ ನಟಿಸಿ ಲಕ್ಷಾಂತರ ಅಭಿಮಾನಿಗಳನ್ನು ಹೊಂದಿರುವ ಅನಂತನಾಗ್ ಅವರ 75ನೇ ವರ್ಷದ ಜನ್ಮದಿನದ ಸಂಭ್ರಮ ಸಲುವಾಗಿ ಸೆಪ್ಟೆಂಬರ್ 3ರಂದು ನಗರದ ಟಿ.ವಿ. ರಮಣ ಪೈ ಸಭಾಂಗಣದಲ್ಲಿ ದಿನವಿಡೀ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಅನಂತನಾಗ್ ಅಭಿನಂದನಾ ಸಮಿತಿ ಸಂಚಾಲಕ ಗೋಪಿನಾಥ್ ಭಟ್ ತಿಳಿಸಿದ್ದಾರೆ.
ಅಂದು ಬೆಳಗ್ಗೆ 9:30ಕ್ಕೆ ಅನಂತ್ ನಾಗ್ ದಂಪತಿಯನ್ನು ಸಾರೋಟಿನಲ್ಲಿ ಡೊಂಗರಕೇರಿ ಕೆನರಾ ಹೈಸ್ಕೂಲ್ ನಿಂದ ಮೆರವಣಿಗೆ ಮೂಲಕ ಸಭಾಂಗಣಕ್ಕೆ ತರಲಾಗುವುದು. 10 ಗಂಟೆಗೆ ಕಾರ್ಯಕ್ರಮವನ್ನು ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ವೇದವ್ಯಾಸ ಕಾಮತ್ ಸಹಿತ ಗಣ್ಯರು ಉದ್ಘಾಟಿಸಲಿದ್ದಾರೆ. ಸಿನಿಮಾ ದಿಗ್ಗಜರು, ಪತ್ರಕರ್ತರು, ಯುವ ಸಮುದಾಯದೊಂದಿಗೆ ಸಂವಹನ ಕಾರ್ಯಕ್ರಮ, ಮಧ್ಯಾಹ್ನ 2 ಗಂಟೆಯಿಂದ ಮಣಿಕಾಂತ್ ಕದ್ರಿ, ರವೀಂದ್ರ ಪ್ರಭು ಹಾಗೂ ತಂಡದಿಂದ ಅನಂತ್ ನಾಗ್ ಅವರ ಆಯ್ದ ಜನಪ್ರಿಯ ಹಾಡುಗಳು, ನೃತ್ಯ ವೈವಿಧ್ಯ, ಸಾಯಂಕಾಲ ಸನ್ಮಾನ ಸಹಿತ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದರು.
ಪತ್ರಕರ್ತ ಮನೋಹರ್ ಪ್ರಸಾದ್ ಮಾತನಾಡಿ, ಅನಂತನಾಗ್ 75 ಸಂವತ್ಸರದ ಸಡಗರ ಮತ್ತು ಅವರ ಚಿತ್ರ ಬದುಕಿನ ಐದು ದಶಕಗಳ ಸಾರ್ಥಕ ಪಯಣದ ಸಂಭ್ರಮವನ್ನು ಅಭಿಮಾನಿಗಳನ್ನು ಸೇರಿಸಿ ಕಾರ್ಯಕ್ರಮ ಹಮ್ಮಿಕೊಳ್ಳಬೇಕೆಂದು ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನ ನಿರ್ಧರಿಸಿದೆ. ಸಾಮಾಜಿಕ ಕಾರ್ಯಗಳಲ್ಲಿಯೂ ಕಳಕಳಿ ಹೊಂದಿರುವ ಅನಂತನಾಗ್ ಯುವ ಪೀಳಿಗೆಗೂ ಮಾದರಿಯಾದವರು. ಸಾರ್ವಜನಿಕರಿಗೆ ಮುಕ್ತ ಪ್ರವೇಶವಿರುವ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಪಾಲ್ಗೊಂಡು ಯಶಸ್ಸುಗೊಳಿಸಬೇಕು ಎಂದರು. ಪತ್ರಿಕಾಗೋಷ್ಠಿಯಲ್ಲಿ ಗೋಪಾಲಕೃಷ್ಣ ಶೆಟ್ಟಿ, ಗಿರಿಧರ್ ಶೆಟ್ಟಿ, ಕುದ್ರೋಳಿ ಗಣೇಶ್ ಮತ್ತಿತರರು ಉಪಸ್ಥಿತರಿದ್ದರು.
Anant Nag 75th birthday in Mangalore, whole day celebration to be held at Canara High school.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
14-07-26 07:55 pm
HK News Staffer
ಹೊರ್ಮುಜ್ ಜಲಸಂಧಿಯಲ್ಲಿ ಕಾರ್ಗೋ ಹಡಗಿನ ಮೇಲೆ ಇರಾನ್...
14-07-26 01:37 pm
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
14-07-26 09:13 pm
HK News Staffer
ಕಣ್ಣಿಗೆ ಕರಿ ಮೆತ್ತಿಕೊಂಡು ಬುರ್ಖಾದಲ್ಲೇ ಓಡಾಡ್ತಿದ್...
14-07-26 09:10 pm
ಮಂಗಳೂರಿನಲ್ಲಿ ಅಕ್ರಮ ಬಾಂಗ್ಲಾನ್ನರ ಪತ್ತೆ ; ಮಂಗಳೂರ...
14-07-26 02:43 pm
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm