ಬ್ರೇಕಿಂಗ್ ನ್ಯೂಸ್
02-09-23 01:00 pm Mangalore Correspondent ಕರಾವಳಿ
ಮಂಗಳೂರು, ಸೆ. 2: ಕೊಣಾಜೆಯ ಮಂಗಳೂರು ವಿಶ್ವವಿದ್ಯಾನಿಲಯದ ಮಂಗಳಾ ಆಡಿಟೋರಿಯಂನಲ್ಲಿ ಪ್ರತಿ ವರ್ಷದಂತೆ ವಿದ್ಯಾರ್ಥಿ ಕ್ಷೇಮಪಾಲನಾ ವಿಭಾಗದಿಂದ ಆಚರಿಸಿಕೊಂಡು ಬರುತ್ತಿದ್ದ ಗಣೇಶೋತ್ಸವವನ್ನು ಯಾವುದೇ ಕಾರಣಕ್ಕು ರದ್ದು ಮಾಡಬಾರದೆಂದು ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ಡಿ. ವೇದವ್ಯಾಸ ಕಾಮತ್ ಆಗ್ರಹಿಸಿದ್ದಾರೆ.
ಶಾಸಕರ ನೇತೃತ್ವದಲ್ಲಿ ಮಾಜಿ ಸಿಂಡಿಕೇಟ್ ಸದಸ್ಯ ರಮೇಶ್ ಕೆ, ಭಾರತೀಯ ಜನತಾ ಪಾರ್ಟಿ ಮುಖಂಡರಾದ ಸಂತೋಷ್ ಬೋಳ್ಯಾರು, ಎಬಿವಿಪಿ ಜಿಲ್ಲಾ ಸಂಚಾಲಕ ಶ್ರೇಯಸ್ ಶೆಟ್ಟಿ, ವಿವಿ ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ಇಶಿಕ ಮತ್ತು ಉಪಾಧ್ಯಕ್ಷೆ ತ್ರಿವೇಣಿ ಇವರ ನಿಯೋಗವು ಕುಲಪತಿ ಪ್ರೊ. ಜಯರಾಜ್ ಅಮೀನ್ ಮತ್ತು ಕುಲಸಚಿವ ಪ್ರೊ. ಕೃಷ್ಣರಾಜು ಚಲನ್ನವರ್ ಅವರನ್ನು ಭೇಟಿ ಮಾಡಿ ಚರ್ಚಿಸಿ ಮನವಿ ಸಲ್ಲಿಸಿದೆ.
ಈ ಹಿಂದೆ ದಿನಾಂಕ 20-12-2022ರಂದು ಸಿಂಡಿಕೇಟ್ ಸಭೆಯಲ್ಲಿ ವಿದ್ಯಾರ್ಥಿ ಸಂಘದ ಮನವಿಯಂತೆ ಪ್ರತಿ ವರ್ಷವೂ ವಿದ್ಯಾರ್ಥಿ ಕ್ಷೇಮಪಾಲನ ನಿರ್ದೇಶನಾಲಯದ ಮೇಲುಸ್ತುವಾರಿಯಲ್ಲಿ ಈ ಕಾರ್ಯಕ್ರಮವನ್ನು ನಡೆಸಲು ತೀರ್ಮಾನಿಸಲಾಗಿತ್ತು. ಆದರೆ ಕುಲಪತಿಯವರು ಮುಖ್ಯಮಂತ್ರಿಯವರ ಮೌಖಿಕ ಆದೇಶದ ಮೇರೆಗೆ ಯಾವುದೇ ಧಾರ್ಮಿಕ ಕಾರ್ಯಕ್ರಮ ಆಚರಿಸಬಾರದೆಂದು ಸೂಚಿಸಿರುತ್ತಾರೆ. ಆದ್ದರಿಂದ ಈ ವರ್ಷ ಮಂಗಳ ಆಡಿಟೋರಿಯಂನಲ್ಲಿ ಗಣೇಶ ಪೂಜೆಗೆ ಅವಕಾಶ ನೀಡುವುದಿಲ್ಲ ಎಂದು ತಿಳಿಸಿರುತ್ತಾರೆ.
ಆದರೆ ಸಿಂಡಿಕೇಟ್ ನಿರ್ಣಯಕ್ಕೆ ವಿರುದ್ಧವಾಗಿ ಕುಲಪತಿಯವರು ಏಕಪಕ್ಷೀಯ ನಿರ್ಣಯ ಕೈಗೊಂಡಿರುವುದು ಚರ್ಚೆಗೆ ಕಾರಣವಾಗಿದೆ. ಯಾವುದೇ ಸಿಂಡಿಕೇಟ್ ನಿರ್ಣಯವು ಕುಲಾಧಿಪತಿಗಳಾದ ರಾಜ್ಯಪಾಲರ ದೃಢೀಕರಣದೊಂದಿಗೆ ಅಂಗೀಕಾರವಾದ ತೀರ್ಮಾನವಾಗಿರುತ್ತದೆ. ಆದರೆ ಕುಲಪತಿಯವರು ಸಿಂಡಿಕೇಟ್ ಸಭೆಯಲ್ಲಿ ಈ ನಿರ್ಣಯವನ್ನು ತಡೆಯದೆ ಹಾಗೂ ರಾಜ್ಯಪಾಲರ ಗಮನಕ್ಕೆ ತಾರದೆ, ಈಗ ವಿದ್ಯಾರ್ಥಿ ನಿಲಯದಲ್ಲಿ ಗಣೇಶೋತ್ಸವ ನಡೆಸಿ ಎನ್ನುತ್ತಿರುವುದು ಸಮರ್ಥನೀಯವಲ್ಲ.
ವಿದ್ಯಾರ್ಥಿ ಕ್ಷೇಮಪಾಲನ ವಿಭಾಗದ ಹಣದಲ್ಲಿ ಗಣೇಶೋತ್ಸವ ಆಚರಿಸಿ ಬರುತ್ತಿರುವುದು ರೂಢಿಯಾಗಿದೆ. ಆದರೆ ಈ ವರ್ಷ ವಿವಿ ಆರ್ಥಿಕವಾಗಿ ಸಂಕಷ್ಟದಲ್ಲಿರುವುದರಿಂದ ಈ ಹಣವನ್ನು ಬಳಕೆ ಮಾಡದೆ, ಸಣ್ಣ ಮಟ್ಟದಲ್ಲಿ ವಿದ್ಯಾರ್ಥಿ ನಿಲಯದಲ್ಲಿ ಗಣೇಶೋತ್ಸವ ಆಚರಿಸೋಣ ಎಂದು ಕುಲಪತಿಗಳು ಶಾಸಕರ ನೇತೃತ್ವದ ನಿಯೋಗಕ್ಕೆ ಮನವರಿಕೆ ಮಾಡಲು ಪ್ರಯತ್ನಿಸಿದ್ದಾರೆ.
ಆದರೆ ವಿವಿಯ ವಿದ್ಯಾರ್ಥಿ ಮುಖಂಡರು ಪ್ರತಿ ವರ್ಷದಂತೆ ಈ ವರ್ಷವೂ ಸಿಂಡಿಕೇಟ್ ನಿರ್ಣಯವನ್ನು ಪಾಲನೆ ಮಾಡಬೇಕೆಂದು ಆಗ್ರಹಿಸಿದರು. ಪ್ರತಿ ವರ್ಷದಂತೆ ಈ ಬಾರಿಯೂ ಮಂಗಳಾ ಆಡಿಟೋರಿಯಂನಲ್ಲೇ ಗಣೇಶನ ಮೂರ್ತಿಯನ್ನು ಪ್ರತಿಷ್ಠಾಪನೆ ಮಾಡಿ ಪೂಜೆ ನೆರವೇರಿಸಬೇಕು. ಈ ಕುರಿತು ಸೆ.2ರ ಶನಿವಾರ ಸಂಜೆಯೊಳಗೆ ನಿರ್ಣಯ ಕೈಗೊಳ್ಳಬೇಕು. ಇಲ್ಲವಾದಲ್ಲಿ ವಿದ್ಯಾರ್ಥಿಗಳು ಹೋರಾಟ ಸಂಘಟಿಸಲಿದ್ದಾರೆ ಎಂದು ಮನವಿ ಪತ್ರದಲ್ಲಿ ಎಚ್ಚರಿಕೆಯನ್ನು ನೀಡಲಾಗಿದೆ.
MLA Vedavyas kamat requests Ganeshotsav 2023 to be held at Mangalore Univercity in Mangala Auditorium.
13-12-25 10:47 pm
HK News Desk
ಕುರ್ಚಿ ಗುದ್ದಾಟ ; ಪರಮೇಶ್ವರ್ ಸಿಎಂ ಆಗಲೆಂದು ಹಾರೈಸ...
13-12-25 08:38 pm
BJP MLA Subhash Guttedar: ಅಳಂದ ಮತಗಳವು ಪ್ರಕರಣ...
13-12-25 04:00 pm
Pet Parrot, Bangalore Youth Death: 2 ಲಕ್ಷ ರೂ....
12-12-25 08:47 pm
Yatnal, Dk Shivakumar, Vijayendra: ಡಿಕೆ ಸಿಎಂ,...
12-12-25 07:47 pm
13-12-25 08:34 pm
HK News Desk
ಕಾರ್ತಿಗೈ ದೀಪೋತ್ಸವ ವಿವಾದ ; ಮಸೀದಿಯವರೇ ಆಕ್ಷೇಪಿಸಿ...
12-12-25 11:00 pm
ಮೋದಿ ಉತ್ತರಾಧಿಕಾರಿ ಯಾರು ? ಆರೆಸ್ಸೆಸ್ ನಿರ್ಧರಿಸುತ...
11-12-25 04:24 pm
ಮಂಗಳೂರು ಏರ್ಪೋರ್ಟ್ಗೆ ವಿದೇಶಿ ನೇರ ವಿಮಾನ ವ್ಯವಸ್...
11-12-25 02:09 pm
ತಮಿಳುನಾಡಿನಲ್ಲಿ ಕಾರ್ತಿಗೈ ದೀಪಕ್ಕೆ ಹೈಕೋರ್ಟ್ ಅನುಮ...
10-12-25 11:13 pm
13-12-25 11:02 pm
Mangalore Correspondent
ಕೆಂಜಾರು ಬಳಿ ಗೋವುಗಳನ್ನು ಕಡಿದು ಹತ್ಯೆ ; ಪೊದೆಯಲ್ಲ...
13-12-25 04:36 pm
ಸತತ ನಾಲ್ಕು ಗಂಟೆ ಸ್ಕೇಟಿಂಗ್ ನಲ್ಲಿ ಶಾಸ್ತ್ರೀಯ ನೃತ...
12-12-25 10:28 pm
ದೈವ ನರ್ತನದ ಬಗ್ಗೆ ನಮಗೆ ಸಂಶಯಗಳಿಲ್ಲ, ಗ್ರಾಮ ದೈವಕ್...
12-12-25 07:32 pm
ಆಯುಷ್ ಇಲಾಖೆಯಲ್ಲಿ ಅವಧಿ ಮೀರಿದ ಔಷಧ ಪೂರೈಕೆ ; ಅಧಿಕ...
12-12-25 02:02 pm
13-12-25 12:51 pm
HK News Desk
ಹಣ್ಣಿನ ವ್ಯಾಪಾರಿಯನ್ನು ಅಡ್ಡಗಟ್ಟಿ 19 ಸಾವಿರ ನಗದು...
12-12-25 01:58 pm
Hassan Crime, Murder: ಸ್ನೇಹಿತನನ್ನು ಪಾರ್ಟಿಗೆ ಕ...
11-12-25 09:53 pm
Bangalore Crime, Blackmail, Suicide: ಬೆತ್ತಲೆ...
11-12-25 07:49 pm
Imprisonment in Malpe Case: ಮಲ್ಪೆಯಲ್ಲಿ ನೆಲೆಸಿ...
10-12-25 10:14 pm