ಬ್ರೇಕಿಂಗ್ ನ್ಯೂಸ್
06-09-23 04:11 pm Mangalore Correspondent ಕರಾವಳಿ
ಪುತ್ತೂರು, ಸೆ.6: ಹಿಂದೂ ಧರ್ಮದ ಹುಟ್ಟು ಗೊತ್ತಿಲ್ಲದ ಪರಮೇಶ್ವರ್ ಅವರ ಹೆಸರನ್ನು ಇಸ್ಮಾಯಿಲ್ ಅಂತ ಯಾಕೆ ಇಟ್ಟಿಲ್ಲ. ಸ್ಟಾಲಿನ್ ಎಂದು ಹೆಸರು ಇಡಬಹುದಿತ್ತಲ್ಲ. ಯಾಕೆ ಇವರ ಹೆತ್ತವರು ಪರಮೇಶ್ವರ್ ಅಂತ ಇಟ್ಟುಕೊಂಡಿದ್ದರು... ಹಿಂದು ಧರ್ಮದ ಹುಟ್ಟು ತಿಳಿದಿಲ್ಲ ಎಂದು ಕಟಕಿಯಾಡಿದ್ದ ಗೃಹ ಸಚಿವ ಪರಮೇಶ್ವರ್ ಹೇಳಿಕೆಗೆ, ಆರೆಸ್ಸೆಸ್ ಹಿರಿಯ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ಖಾರವಾಗಿ ಪ್ರತಿಕ್ರಿಯಿಸಿದ್ದಾರೆ.
ಇತ್ತೀಚಿನ ದಿನಗಳಲ್ಲಿ ಇದೊಂದು ಹುಚ್ಚು ಶುರುವಾಗಿದೆ. ಸನಾತನ ಧರ್ಮದ ಬಗ್ಗೆ ದೂಷಣೆ ಮಾಡಿದರೆ ಅಲ್ಪಸಂಖ್ಯಾತರ ಮತ ಸಿಗುತ್ತೆ. ಅಧಿಕಾರ ಸಿಗುತ್ತೆ ಅನ್ನುವ ಕಾರಣಕ್ಕೆ ಈ ರೀತಿ ಹಗುರ ಹೇಳಿಕೆ ನೀಡುತ್ತಾರೆ. ಹಿಂದು ಧರ್ಮದ ಹುಟ್ಟು ಗೊತ್ತಿಲ್ಲದ ಪರಮೇಶ್ವರ್ ಅವರ ಹೆಸರನ್ನು ಇಸ್ಮಾಯಿಲ್ ಅಂತ ಯಾಕೆ ಇಟ್ಟಿಲ್ಲ. ಸ್ಟಾಲಿನ್ ಎಂದು ಹೆಸರು ಇಟ್ಕೊಳ್ಳಬಹುದಿತ್ತಲ್ಲ. ಊರಲ್ಲಿ ಇರುವ ದೇವಸ್ಥಾನಕ್ಕೆಲ್ಲ ಭೇಟಿ ನೀಡುವ ಪರಮೇಶ್ವರ್, ದೇವಸ್ಥಾನದ ಹೊರಗೆ ಬಂದ ಬಳಿಕ ಈ ರೀತಿ ಹೇಳಿಕೆ ನೀಡುತ್ತಾರೆ.

ಸನಾತನ ಧರ್ಮದ ಹುಟ್ಟು ಯಾರಿಗೂ ತಿಳಿದಿಲ್ಲ, ಸನಾತನ ಧರ್ಮಕ್ಕೆ ಹುಟ್ಟೂ ಇಲ್ಲ, ನಾಶವೂ ಇಲ್ಲ, ಕ್ರಿಶ್ಚಿಯನ್, ಇಸ್ಲಾಂ ಮತ ಇತ್ತೀಚೆಗೆ ಹುಟ್ಟಿರುವ ಮತಗಳು. ಸನಾತನ ಧರ್ಮ ನಿತ್ಯ ನೂತನವಾದ ಧರ್ಮ. ಎಲ್ಲಾ ಕಾಲಕ್ಕೂ ಎಲ್ಲವನ್ನೂ ಒಪ್ಪಿಕೊಳ್ಳುವ ಧರ್ಮ. ಕಾಲಕ್ಕೆ ತಕ್ಕಂತೆ ತನ್ನಲ್ಲಿ ಬದಲಾವಣೆ ಮಾಡಿಕೊಳ್ಳಲು ಅವಕಾಶವಿರುವ ಧರ್ಮ. ಹಿಂದೆ ಇದ್ದ ಬಾಲ್ಯವಿವಾಹ, ವರದಕ್ಷಿಣೆ ಮೊದಲಾದ ಪಿಡುಗನ್ನು ನಿವಾರಣೆ ಮಾಡಿಕೊಂಡಿದ್ದೇ ಇದಕ್ಕೆ ಉದಾಹರಣೆ.
ಮೂಢನಂಬಿಕೆಯನ್ನು ತೊಡೆದು ಹಾಕುವ ಕೆಲಸವನ್ನು ಮಹಾಪುರುಷರು ಮಾಡಿದ್ದಾರೆ. ಈಗಿರುವ ಕೆಲವು ಆಚರಣೆಗಳನ್ನೂ ಬದಲಾಯಿಸಲಾಗುತ್ತದೆ. ಆ ಬದಲಾವಣೆಯನ್ನು ನಾವು ಮಾಡುತ್ತೇವೆ. ಆದರೆ ಇಸ್ಲಾಂ ಮತ್ತು ಕ್ರಿಶ್ಚಿಯನ್ ಮತದಲ್ಲಿ ಈ ಅವಕಾಶವಿಲ್ಲ. ಆ ಕಾರಣಕ್ಕಾಗಿಯೇ ಆ ಮತದ ಜನರೇ ತಮ್ಮ ಮತವನ್ನು ಒಪ್ಪಿಕೊಳ್ಳುತ್ತಿಲ್ಲ. ಅಮೆರಿಕಾ ಮತ್ತು ಬ್ರಿಟನ್ ನಲ್ಲಿ ಚರ್ಚುಗಳಿಗೆ ಜನ ಬರುತ್ತಿಲ್ಲ. ಆ ಕಾರಣಕ್ಕಾಗಿ ಅಲ್ಲಿ ಚರ್ಚುಗಳನ್ನು ಹರಾಜಿಗೆ ಇಡುತ್ತಿದ್ದಾರೆ.
ಚಂದ್ರನ ಬಗ್ಗೆ ಸನಾತನ ಧರ್ಮದಲ್ಲಿ ಉಲ್ಲೇಖವಿದೆ. ಕೃಷ್ಣ ಪರ್ವ, ಶ್ವೇತ ಪರ್ವದಲ್ಲಿ ಉಲ್ಲೇಖ ಇರುವುದನ್ನು ನೋಡಿದ್ದೇವೆ. ಆ ಸತ್ಯ ಈಗ ಚಂದ್ರಯಾನ-3 ಉಡಾವಣೆ ಯಶಸ್ವಿಯಾದಾಗ ಬೆಳಕಿಗೆ ಬಂದಿದೆ. ಸನಾತನ ಧರ್ಮ ಮತ್ತು ವಿಜ್ಞಾನ ಪರಸ್ಪರ ಒಪ್ಪಿಕೊಂಡಿದೆ. ಹಿಂದೂ ಧರ್ಮ ಮತ್ತು ವಿಜ್ಞಾನ ಒಟ್ಟೊಟ್ಟಿಗೆ ಹೋಗುತ್ತದೆ. ಸನಾತನ ಧರ್ಮದ ಬಗ್ಗೆ ಮಾತನಾಡುವ ಉದಯನಿಧಿ ಸ್ಟಾಲಿನ್ ತಂದೆ ಹಿಂದೂ ಧರ್ಮದ ಸತ್ವ ಒಪ್ಪಿಕೊಂಡಿದ್ದರು. ಅವರ ಕಾರನ್ನು ಅವರ ಮನೆ ಮುಂದೆ ದೇವಸ್ಥಾನಕ್ಕೆ ಮುಖ ಮಾಡಿ ನಿಲ್ಲಿಸುತ್ತಿದ್ದರು. ಈಗ ಢೋಂಗಿ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಸನಾತನ ಧರ್ಮದ ಬಗ್ಗೆ ಮಾತನಾಡುವವರು ಎಚ್ಚರಿಕೆಯಿಂದ ಮಾತನಾಡಬೇಕು ಎಂದರು.
Mangalore Kalladka Prabhakar Bhat slams Home Minister G Parameshwara over his remarks on Hinduism. Karnataka minister G Parameshwara’s comments about the origins of Hinduism have stirred a fresh row even as a case has been registered against his ministerial colleague Priyank Kharge and Tamil Nadu minister Udhayanidhi Stalin for allegedly outraging religious feelings over their remarks about the sanatana dharma.
12-11-25 09:03 pm
Bangalore Correspondent
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
12-11-25 02:54 pm
HK News Desk
ದೆಹಲಿ ಘಟನೆ, ಆತ್ಮಹತ್ಯಾ ಬಾಂಬರ್ ಆಗಿರಲಿಲ್ಲ, ಆಕಸ್ಮ...
11-11-25 10:56 pm
Mangaluru Kasaragod Highway: ಮಂಗಳೂರು- ಕಾಸರಗೋಡ...
11-11-25 10:20 pm
ಕೆಂಪುಕೋಟೆ ಕಾರು ಬ್ಲಾಸ್ಟ್ ಪ್ರಕರಣ ; ಜೈಶ್ ಉಗ್ರರ ಲ...
11-11-25 03:28 pm
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
12-11-25 06:56 pm
Mangalore Correspondent
Ullal Dargah Committee: ಉಳ್ಳಾಲ ದರ್ಗಾ ಕಮಿಟಿಯಲ್...
11-11-25 10:42 pm
Bomb blast in New Delhi, High Alert in Dakshi...
11-11-25 10:15 pm
Bhagvati Prem Ship, Mangalore: ಸುರತ್ಕಲ್ ; ಮರಳ...
08-11-25 08:31 pm
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
12-11-25 12:32 pm
Mangalore Correspondent
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm