ಬ್ರೇಕಿಂಗ್ ನ್ಯೂಸ್
10-09-23 01:04 pm Mangalore Correspondent ಕರಾವಳಿ
ಮಂಗಳೂರು, ಸೆ.10: ನಾವೆಲ್ಲರೂ ಗಣೇಶನ ಭಕ್ತರೇ ಅಲ್ವಾ? ಹೊರಗಿನವರು ಅಂದ್ರೆ ಯಾರು? ಹೊರಗಿನವರು ಅಂದರೆ ಯಾರು? ನಾವೆಲ್ಲರೂ ಈ ದೇಶದಲ್ಲಿ ಇರುವವರೇ.. ನಾವೆಲ್ಲ ವಿವಿಯ ಗಣೇಶೋತ್ಸವಕ್ಕೆ ಬಂದೇ ಬರ್ತೇವೆ, ಅಲ್ಲಿ ಇರ್ತೇವೆ, ಅದರಲ್ಲಿ ಎರಡು ಪ್ರಶ್ನೆಯೇ ಇಲ್ಲ. ನೀವು ಅರೆಸ್ಟ್ ಮಾಡೋದಾದ್ರೆ ಮಾಡಿ ಎಂದು ಆರೆಸ್ಸೆಸ್ ಹಿರಿಯ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ಸವಾಲು ಹಾಕಿದ್ದಾರೆ.
ಮಂಗಳೂರು ಯುನಿವರ್ಸಿಟಿಯಲ್ಲಿ ಗಣೇಶೋತ್ಸವ ನಡೆಸುವುದಕ್ಕೆ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಅಸೈಗೋಳಿ ಮೈದಾನದಲ್ಲಿ ಸಂಘ ಪರಿವಾರದ ಸಂಘಟನೆಗಳಿಂದ ಪ್ರತಿಭಟನಾ ಸಭೆ ನಡೆಯಿತು. ಸಭೆಯಲ್ಲಿ ದಿಕ್ಸೂಚಿ ಭಾಷಣ ಮಾಡಿದ ಪ್ರಭಾಕರ ಭಟ್, ಯುಟಿ ಖಾದರ್ ಹೆಸರೆತ್ತದೆ ಟಾಂಗ್ ನೀಡಿದ್ದಾರೆ. ಮಂಗಳೂರು ವಿವಿಯಲ್ಲಿ ಹೊರಗಿನವರು ಅಂದ್ರೆ ಯಾರು.. ನಾವೆಲ್ಲ ಇಲ್ಲಿನವರೇ.. ವಿವಿಯಲ್ಲಿ ಒಳಗಿರೋರು ಅಂದ್ರೆ ಅಲ್ಲಿನ ವಿದ್ಯಾರ್ಥಿಗಳು, ಅವರು ಬೇರೆ ಬೇರೆ ಜಾಗದಿಂದ ಬಂದವರಿದ್ದಾರೆ. ಇಡೀ ರಾಜ್ಯದಿಂದ ಅಲ್ಲಿಗೆ ಜನ ಬಂದಿರ್ತಾರೆ, ಇದರಲ್ಲಿ ಹೊರಗಿನವರು ಅಂತ ಇಲ್ಲ. ಅಲ್ಲಿ ಗಣೇಶೋತ್ಸವಕ್ಕೆ ಬಂದರೆ ಏನು ಮಾಡ್ತಾರೆ, ಇವರು ಅರೆಸ್ಟ್ ಮಾಡ್ತಾರೆಯೇ? ನಾನು ಗಣೇಶೋತ್ಸವಕ್ಕೆ ಬಂದೇ ಬರ್ತೇನೆ. ನನ್ನನ್ನ ಅರೆಸ್ಟ್ ಮಾಡಿದ್ರೆ ತುಂಬಾ ಸಂತೋಷ, ಅರೆಸ್ಟ್ ಆಗದೇ ತುಂಬಾ ಸಮಯ ಆಯ್ತು. ಅರೆಸ್ಟ್ ಮಾಡಿದರೆ ಮಾಡಲಿ, ಅದರಲ್ಲಿ ನನಗೆ ಗಡಿಬಿಡಿ ಇಲ್ಲ ಎಂದು ಹೇಳಿದರು.
ಗಣೇಶೋತ್ಸವಕ್ಕೆ ಯಾರೂ ಬರಬಾರದು ಅನ್ನೋದು ಒಳ್ಳೆಯ ಮಾತಲ್ಲ. ಸ್ಪೀಕರ್ ಆದವರು ಹಾಗೆಲ್ಲ ಮಾತನಾಡಬಾರದು, ಅವರು ಎಲ್ಲರನ್ನ ಒಂದೇ ಕಲ್ಪನೆಯಲ್ಲಿ ಕೊಂಡು ಹೋಗಬೇಕು. ನಮ್ಮದು ಧರ್ಮಾಧರಿತ ದೇಶ, ಜಗತ್ತಿನ ಮೋಸ್ಟ್ ಸೆಕ್ಯುಲರ್ ಎಂದರೆ ಹಿಂದು ಮಾತ್ರ. ಯಾವುದೇ ಹಿಂದು ಸಮಾಜದ ಮಧ್ಯೆ ಮುಸ್ಲಿಂ ಅಥವಾ ಕ್ರಿಸ್ಚಿಯನ್ನರು ಬದುಕುತ್ತಾರೆ. ಅವರಿಗೆ ಯಾವುದೇ ತೊಂದರೆ ಎದುರಾಗುವುದಿಲ್ಲ. ಇದೇ ಈ ದೇಶದ ಜಾತ್ಯತೀತ ಮನೋಭಾವ. ಇದರ ಬಗ್ಗೆ ಭಾರತದ ಹಿಂದುಗಳಿಗೆ ಇನ್ನೊಬ್ಬರಿಂದ ಕಲಿಯಬೇಕಾಗಿಲ್ಲ.
ಹಾಗಂತ, ಪೂಜೆಯ ಕಾರಣಕ್ಕೆ ವಿರೋಧ ವ್ಯಕ್ತಪಡಿಸುವುದು ಸರಿಯಲ್ಲ. ನಿಮ್ಮ ದೇವರನ್ನ ನೀವು ಪೂಜೆ ಮಾಡಿ, ನಮ್ಮದಕ್ಕೆ ವಿರೋಧ ಬೇಡ. ಮಂಗಳೂರು ವಿವಿ ಅನ್ನೋದು ಹಿಂದುಗಳು ಮೆಜಾರಿಟಿ ಇರೋ ಒಂದು ಸಂಸ್ಥೆ. ಅಲ್ಲಿ ದೇವರನ್ನು ಪೂಜೆ ಮಾಡಬಾರದು ಅಂದ್ರೆ ಏನರ್ಥ. ಈ ದೇಶದಲ್ಲಿ ಸೆಕ್ಯೂಲರ್ ಅಂತ ಹೇಳಿಕೊಂಡು ತಿರುಗಾಡುವ ಹೆಸರಿನಿಂದ ಹಿಂದೂಗಳ ಜೀವನಕ್ಕೆ ತೊಂದರೆ ಆಗಿದೆ. ಸೆಕ್ಯುಲರ್ ಹೆಸರಲ್ಲಿ ನಮ್ಮ ಆರಾಧನೆ, ಪದ್ಧತಿಗಳಿಗೆ ತೊಂದರೆ ಮಾಡಲು ಬರುವುದನ್ನು ನಾವು ಸಹಿಸಲ್ಲ. ಅವರ ಮಸೀದಿ, ಮನೆಯಲ್ಲಿ ಅಲ್ಲಾನನ್ನೇ ಪೂಜೆ ಮಾಡಲಿ. ನಾವು ಬೇಡ ಎನ್ನಲ್ಲ. ಇದು ರಾಷ್ಟ್ರಧರ್ಮ, ಹಾಗಾಗಿ ಮುಸಲ್ಮಾನರೂ ನಮ್ಮ ಪದ್ಧತಿ, ಸಂಸ್ಕೃತಿಗೆ ಗೌರವ ಕೊಡಲಿ. ಎಲ್ಲರೂ ಒಟ್ಟಿಗೆ ಬದುಕಬೇಕಾಗಿದೆ. ಅದಕ್ಕಾಗಿ ನಾವು ಪರಸ್ಪರ ಗೌರವಿಸಬೇಕು.
ಇವರು ನಿನ್ನೆ ಕಮ್ಯುನಿಸ್ಟರಿಗೆ ಕಾರ್ಯಕ್ರಮ ಮಾಡಲು ವಿವಿಯಲ್ಲಿ ಅವಕಾಶ ಕೊಡ್ತಾರೆ. ಹಿಂದೂ ವಿರೋಧಿ ಮಾತನಾಡುವ ಶಂಸುಲ್ ಇಸ್ಲಾಂಗೆ ಅವಕಾಶ ಕೊಡಲಿಲ್ವಾ? ಹಾಗಾದ್ರೆ ಹಿಂದುಗಳು ಗಣೇಶೋತ್ಸವ ಮಾಡಬಾರದು ಎನ್ನುವುದು ಧೂರ್ತತನ ಎಂದರು ಕಲ್ಲಡ್ಕ ಪ್ರಭಾಕರ ಭಟ್.
ಮಂಗಳೂರು ವಿವಿಯ ಕ್ಯಾಂಪಸ್ ನಲ್ಲಿ ಗಣೇಶೋತ್ಸವ ನಡೆಸುವುದಕ್ಕೆ ಉಪ ಕುಲಪತಿ ಜಯರಾಜ ಅಮೀನ್ ವಿರೋಧ ವ್ಯಕ್ತಪಡಿಸಿದ್ದನ್ನು ವಿರೋಧಿಸಿ ಪ್ರತಿಭಟನಾ ಸಮಾವೇಶ ನಡೆದಿದೆ.
We will celebrate Ganeshotsava in Mangalore University who can stop us challenges Kalladka Prabhakar Bhat.
21-08-25 02:03 pm
HK News Desk
Mangalore Electric Auto, High Court: ಮಂಗಳೂರಿನ...
21-08-25 12:58 pm
Dharmasthala Case: ಧರ್ಮಸ್ಥಳ ಪ್ರಕರಣ ; ಎಫ್ಎಸ್ಎಲ...
20-08-25 10:54 pm
Congress MP Sasikanth Senthil, Janardhana Red...
20-08-25 09:54 pm
Heart Attack, Mangalore, Bangalore: 3 ವರ್ಷದಲ್...
20-08-25 12:33 pm
21-08-25 12:54 pm
HK News Desk
ಹೆದ್ದಾರಿಯಲ್ಲಿ ಗುಂಡಿಗಳು ಬಿದ್ದಿದ್ದರೆ, ಟ್ರಾಫಿಕ್...
20-08-25 10:56 pm
30 ದಿನ ಜೈಲು ಪಾಲಾದರೆ ಪ್ರಧಾನಿ, ಸಿಎಂ, ಸಚಿವರನ್ನು...
20-08-25 06:40 pm
ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಆಗಂತುಕನಿಂದ ಹಲ್ಲೆ...
20-08-25 11:01 am
ಭಾರತ ಟಿ20 ತಂಡಕ್ಕೆ ಮರಳಿದ ಶುಭಮನ್ ಗಿಲ್ ; ಏಷ್ಯಾ...
19-08-25 06:59 pm
21-08-25 03:44 pm
Mangalore Correspondent
MRPL Accident, Mangalore: ಕಾಟಿಪಳ್ಳ ; ಟಿಪ್ಪರ್...
21-08-25 02:05 pm
Mahesh Shetty Timarodi, Udupi Police, BL Sant...
21-08-25 11:57 am
MLA Vedavyas Kamath: ಶ್ರೀಕೃಷ್ಣ ಜನ್ಮಾಷ್ಟಮಿಯ ಸಂ...
20-08-25 10:19 pm
Ananya–Sujatha Bhatt Case, Lawyer Manjunath:...
20-08-25 04:28 pm
20-08-25 08:10 pm
Mangalore Correspondent
Mangalore Lucky Scheme Scam Fraud, Wahab Kula...
19-08-25 10:52 pm
ಕಸ್ಟಮ್ಸ್ ಅಧಿಕಾರಿಗಳ ಸೋಗಿನಲ್ಲಿ ಚಿನ್ನದ ವ್ಯಾಪಾರಿಯ...
19-08-25 10:30 pm
ಡಾಕ್ಟರ್ ಮನೆ ದೋಚಿದ್ದ ಮನೆ ಕೆಲಸದವಳು ; ಚಿನ್ನ, ವಜ್...
19-08-25 09:27 pm
Gold Chain robbery, Puttur: ಮೈಸೂರಿನಲ್ಲಿ ಕದ್ದ...
19-08-25 12:54 pm