ಬ್ರೇಕಿಂಗ್ ನ್ಯೂಸ್
15-09-23 05:39 pm Udupi Correspondent ಕರಾವಳಿ
ಉಡುಪಿ, ಸೆ.15: ಚೈತ್ರಾ ಬಂಧನ ಆಗಿರುವುದನ್ನು ಮಾಧ್ಯಮದಲ್ಲಿ ತಿಳಿದುಕೊಂಡಿದ್ದೇನೆ. ಆಕೆಯ ಜೊತೆಗೆ ತನಗೇನೂ ಸಂಬಂಧ ಇಲ್ಲ. ನಾವು ಯಾರೂ ಆಕೆಯ ಬೆಂಬಲಕ್ಕೆ ನಿಂತಿಲ್ಲ. ತಪ್ಪು ಮಾಡಿದ್ದರೆ ಶಿಕ್ಷೆ ಆಗಲಿ, ತಪ್ಪು ಮಾಡದೆ ಇದ್ದರೆ ಅನಾವಶ್ಯಕ ತೊಂದರೆ ಕೊಡುವುದು ಬೇಡ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ.
ರಾಜಕೀಯ, ಸಾಮಾಜಿಕ ಜೀವನದಲ್ಲಿ ಯಾರೇ ತಪ್ಪು ಮಾಡಿದ್ರೂ ಶಿಕ್ಷೆ ಆಗಬೇಕು. ಪ್ರಕರಣದ ಕುರಿತು ನಿಷ್ಪಕ್ಷವಾಗಿ ತನಿಖೆಯಾಗಲಿ. ನೈಜ ಆರೋಪಿಗಳ ಬಂಧನ ಆಗಬೇಕು. ಉಪ್ಪು ತಿಂದವರು ನೀರು ಕುಡಿಯುತ್ತಾರೆ, ತಪ್ಪು ಮಾಡಿದವರು ಶಿಕ್ಷೆ ಅನುಭವಿಸುತ್ತಾರೆ. ನನ್ನ ಜೊತೆ ನೂರಾರು ಮಂದಿ ಫೋಟೋ ತೆಗೆದುಕೊಳ್ಳುತ್ತಾರೆ. ಹಾಗೆಯೇ ಚೈತ್ರಾಳು ಫೋಟೋ ತೆಗೆದುಕೊಂಡಿರಬಹುದು. ಹಾಗಂತ, ಸಂಬಂಧ ಇದೆಯೆಂದು ಅರ್ಥವಲ್ಲ.
ಉಡುಪಿ ಲೋಕಸಭೆ ಕ್ಷೇತ್ರದಲ್ಲಿ ಚೈತ್ರಾಗೆ ಟಿಕೆಟ್ ಎಂದು ಹೇಳಿಕೊಂಡಿದ್ದ ಬಗ್ಗೆ ಕೇಳಿದ ಪ್ರಶ್ನೆಗೆ, ಇಲ್ಲಿ ಟಿಕೆಟ್ ಸಿಗುತ್ತದೆ ಅಂತ ಯಾರು ಹೇಳಿಕೊಂಡರೂ ಅದಕ್ಕೆ ಬೆಲೆ ಇರಲ್ಲ. ರಾಷ್ಟ್ರೀಯ ನಾಯಕರು ತೀರ್ಮಾನ ಮಾಡುತ್ತಾರೆ, ಎಲ್ಲಿ ಯಾರು ಸ್ಪರ್ಧೆ ಮಾಡಬೇಕು ಅಂತ. ನಮ್ಮ ಪಕ್ಷಕ್ಕೆ ಬಲಿಷ್ಠ ನಾಯಕರಿದ್ದಾರೆ. ಮೋದಿ, ಅಮಿತ್ ಷಾ ಯಾರು ಸ್ಪರ್ಧೆ ಮಾಡಬೇಕೆಂದು ನಿರ್ಧರಿಸುತ್ತಾರೆ ಎಂದರು. ಬಿಜೆಪಿಯ ರಾಜ್ಯ ಹಾಗೂ ಕೇಂದ್ರ ನಾಯಕರ ಹೆಸರನ್ನು ಚೈತ್ರಾ ದುರುಪಯೋಗ ಮಾಡಿಕೊಂಡ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ ಅವರು, ಯಾರೆಲ್ಲ ಕೇಂದ್ರ ನಾಯಕರು ಮತ್ತು ರಾಜ್ಯ ನಾಯಕರ ಹೆಸರನ್ನು ದುರುಪಯೋಗ ಮಾಡಿಕೊಂಡಿದ್ದಾರೋ ಅದೆಲ್ಲ ತನಿಖೆ ಆಗಬೇಕು. ಇದಕ್ಕೆ ಕುಮ್ಮಕ್ಕು ನೀಡಿದವರ ಬಗ್ಗೆಯೂ ತನಿಖೆ ನಡೆಯಲಿ, ಭಾರತೀಯ ಜನತಾ ಪಾರ್ಟಿಯಲ್ಲಿ ದುಡ್ಡು ತೆಗೆದುಕೊಂಡು ಟಿಕೆಟ್ ನೀಡುವ ಸ್ಥಿತಿ ಇಲ್ಲ. ಮುಂದೆ ಬರುವುದೂ ಇಲ್ಲ, ಅಂತಹ ಪಾರ್ಟಿ ಕೂಡ ಭಾರತೀಯ ಜನತಾ ಪಾರ್ಟಿಯಲ್ಲ ಎಂದು ಶೋಭಾ ಕರಂದ್ಲಾಜೆ ಹೇಳಿದ್ದಾರೆ.
Udupi Shobha Karandlaje slams Chaitra Kundapura over fraud of Crores.
17-10-26 07:30 pm
HK News Staffer
Davanagere Accident: ದಾವಣಗೆರೆ ; ಸಿಎನ್ಜಿ ಲಾರಿ...
16-10-26 09:49 pm
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
17-10-26 07:34 pm
HK News Desk
ಸೆ.30ರ ಸ್ಫೋಟ ಘಟನೆಯಲ್ಲಿ 118.76 ಕೋಟಿ ನಷ್ಟ ; ಎಂಆ...
17-10-26 12:25 pm
ಪದ್ಮಶ್ರೀ ಹಾಜಬ್ಬರಿಗೆ ಚುನಾವಣಾ ಆಯೋಗವು ನೋಟೀಸು ನೀಡ...
16-10-26 10:28 pm
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
17-10-26 11:09 am
HK News Staffer
LanchuLal, Astra Fraud, Mangalore: ‘ಅಕ್ಷಯ ಪಾತ...
16-10-26 03:37 pm
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am