ಬ್ರೇಕಿಂಗ್ ನ್ಯೂಸ್
16-09-23 09:18 pm Mangalore Correspondent ಕರಾವಳಿ
ಮಂಗಳೂರು, ಸೆ.17: ಹಣವೇ ಬಿಜೆಪಿಯಲ್ಲಿ ಪ್ರಧಾನ ಅಲ್ಲ. ಹಾಗಿರುತ್ತಿದ್ದರೆ ಬೈಂದೂರಿನ ಟಿಕೆಟ್ ಬಡ ಕಾರ್ಯಕರ್ತನಿಗೆ ಸಿಗ್ತಾ ಇರಲಿಲ್ಲ. ಸುಳ್ಯದ ಟಿಕೆಟ್ ಬಡ ಮಹಿಳೆ ಭಾಗೀರಥಿಗೆ ಸಿಗ್ತಾ ಇರಲಿಲ್ಲ. ಕೋಟಾ ಶ್ರೀನಿವಾಸ ಪೂಜಾರಿ, ಸುನಿಲ್ ಕುಮಾರ್, ನಳಿನ್, ಪ್ರತಾಪ್ ಸಿಂಹರಂತವರು ಎಂಪಿ, ಎಂಎಲ್ಎ ಆಗ್ತಾ ಇರಲಿಲ್ಲ ಎಂದು ಬಿಜೆಪಿ ಮಾಜಿ ಶಾಸಕ, ಮಾಜಿ ರಾಷ್ಟ್ರೀಯ ಕಾರ್ಯದರ್ಶಿ ಸಿಟಿ ರವಿ ಹೇಳಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಇಲ್ಲಿ ಗೋವಿಂದ ಬಾಬು ಪೂಜಾರಿಯನ್ನ ಮೋಸ ಮಾಡಿದ್ದಾರೆ. ದ.ಕ ಮತ್ತು ಉಡುಪಿಯಂಥ ಬುದ್ದಿವಂತರ ಜಿಲ್ಲೆಯವರೇ ಈ ರೀತಿ ಮೋಸ ಹೋಗಿದ್ದನ್ನು ನಂಬಲಾಗುತ್ತಿಲ್ಲ. ಅವರು ನೇರವಾಗಿ ಫೋನ್ ಮಾಡಿದ್ರೂ ಬಿಜೆಪಿ ನಾಯಕರು ಫೋನ್ ಗೆ ಸಿಗ್ತಾ ಇದ್ದರು. ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿಯೇ ಅವರ ಜೊತೆ ತುಳುವಲ್ಲೇ ಮಾತನಾಡ್ತಾ ಇದ್ರು. ನಳಿನ್ ಕಟೀಲ್, ಕೋಟ ಶ್ರೀನಿವಾಸ ಪೂಜಾರಿಯೂ ಮಾತನಾಡ್ತಿದ್ರು. ನೇರ ಫೋನ್ ಮಾಡಿ ಮಾತನಾಡುವಷ್ಟು ಅವಕಾಶ ಇರುವಾಗ ಗೋವಿಂದ ಬಾಬು ಪೂಜಾರಿ ಯಾಕೆ ಮೋಸ ಹೋದರು. ಮೋಸ ಹೋಗೋರು ಇರೋತನಕ ಮೋಸ ಮಾಡೋರು ಇರುತ್ತಾರೆ. ಪ್ರಕರಣದ ಬಗ್ಗೆ ಸತ್ಯ ಬಹಿರಂಗ ಆಗಬೇಕು, ಸಮಗ್ರ ತನಿಖೆ ಆಗಬೇಕು. ಯಾರದ್ದೋ ಹೆಸರು ಕೇಳಿ ಬರ್ತಾ ಇದೆ ಅನ್ನೋದು ಬೇರೆ, ಸಮಗ್ರ ತನಿಖೆ ಆಗಲಿ. ಈ ಮೂಲಕ ಮೋಸ ಹೋದವರಿಗೂ ಇದೊಂದು ಪಾಠವಾಗಬೇಕು ಎಂದಿದ್ದಾರೆ.
ನಾವು ಪರಿಷತ್ ಚುನಾವಣೆಗೆ ಸಿದ್ದತೆ ಮಾಡಿಕೊಳ್ತಾ ಇದೀವಿ. ಬಿಜೆಪಿ- ಜೆಡಿಎಸ್ ಮೈತ್ರಿ ಬಗ್ಗೆ ಚರ್ಚೆ ಆಗ್ತಾ ಇದೆ, ಅಂತಿಮ ಆಗಿಲ್ಲ. ಅದು ವರಿಷ್ಠರ ತೀರ್ಮಾನ, ನಾವು ಯಾವುದೇ ಚುನಾವಣೆಗೆ ನಮ್ಮ ಹಂತದಲ್ಲಿ ಸಿದ್ದವಾಗ್ತೀವಿ ಅಷ್ಟೇ. ಬಿಜೆಪಿಯ ಕೆಲವು ಮಾಜಿ ಕಾರ್ಪೋರೆಟರ್ ಗಳು, ಸದಸ್ಯರು ಕಾಂಗ್ರೆಸ್ ಸೇರಿದ್ದಾರೆ. ಬೆಲ್ಲ ಇದ್ದ ಕಡೆ ಇರುವೆ ಹೋಗೋದು ಸ್ವಾಭಾವಿಕ. ಕೆಲವರು ಅಧಿಕಾರದ ಕಾರಣಕ್ಕೆ ಇಲ್ಲಿಂದ ಅಲ್ಲಿಗೆ ಹೋಗಿದ್ದಾರೆ. ನಾವು ಸಚಿವರು, ಶಾಸಕರನ್ನೇ ಕರೆದುಕೊಂಡು ಹೋದ್ರೂ ಅಧಿಕಾರ ಉಳಿಸಿಕೊಳ್ಳಲು ಆಗಿಲ್ಲ. ಈಗ ಅವರು ಕಾರ್ಪೋರೆಟರ್ ಗಳನ್ನು ಕರೆದುಕೊಂಡರೆ ಏನಾಗುತ್ತೆ. ಈಗ ಅವರು ಆಪರೇಷನ್ ಹಸ್ತ ಮಾಡಲಿ, ಮುಂದೆ ಜನರೇ ಹಸ್ತವನ್ನು ಅಪರೇಷನ್ ಮಾಡುತ್ತಾರೆ. ಅಧಿಕಾರದ ಆಸೆಗೆ ಯಾರು ಎಲ್ಲೇ ಹೋದರೂ ಅಧಿಕಾರ ಉಳಿಸಿಕೊಳ್ಳಲು ಆಗಲ್ಲ ಎಂದು ಪರೋಕ್ಷವಾಗಿ ಕಾಂಗ್ರೆಸ್ ಸೇರಿದವರನ್ನು ಟೀಕಿಸಿದರು.
ಭೋಜೇಗೌಡ ಕಾಂಗ್ರೆಸ್ ಪರ ಪ್ರಚಾರ ನಡೆಸಿದ್ದಾರೆ !
ವಿಧಾನ ಪರಿಷತ್ ಚುನಾವಣೆಯಲ್ಲಿ ಜೆಡಿಎಸ್ ಮೈತ್ರಿಯಾದರೆ, ಭೋಜೇಗೌಡರನ್ನು ಬೆಂಬಲಿಸುತ್ತೀರಾ ಎಂಬ ಪ್ರಶ್ನೆಗೆ, ಮೈತ್ರಿ, ಯಾರು ಸ್ಪರ್ಧೆ ಎನ್ನೋದನ್ನು ಪಕ್ಷ ನಿರ್ಧರಿಸುತ್ತದೆ. ಪಕ್ಷದ ನಿರ್ಧಾರ ಪಾಲಿಸುತ್ತೇವೆ. ಭೋಜೇಗೌಡರು ಬಹಿರಂಗವಾಗಿಯೇ ಕಾಂಗ್ರೆಸ್ ಪರ ಪ್ರಚಾರ ನಡೆಸಿದ್ದಾರೆ. ಆದರೆ ಶಿಕ್ಷಕರ ಕ್ಷೇತ್ರದಲ್ಲಿ ನಾಲ್ಕು ಬಾರಿ ಬಿಜೆಪಿ ಗೆದ್ದಿದೆ, ಎರಡು ಬಾರಿ ಕಾಂಗ್ರೆಸ್ ಗೆದ್ದಿದೆ. ಗಣೇಶ್ ಕಾರ್ಣಿಕ್ ಕಳೆದ ಬಾರಿ ಅಲ್ಪ ಮತಕ್ಕೆ ಸೋತಿದ್ದರು ಎಂದರು. ನಿಮ್ಮ ಸೋಲಿಗೆ ಭೋಜೇಗೌಡ ಕಾರಣವೇ ಎಂಬ ಪ್ರಶ್ನೆಗೆ, ನನ್ನ ಸೋಲಿಗೆ ನಾನೇ ಕಾರಣ, ಬೇರೆ ಯಾರಿಗೂ ದೂರಲ್ಲ. ನಾನು ದುರ್ಬಲನಾಗಿದ್ದೇ ಕಾರಣ, ಇತಿಹಾಸದಲ್ಲಿ ಮೊದಲ ಬಾರಿಗೆ ಈ ಸಲ ಅತೀ ಹೆಚ್ಚು ವೋಟ್ ಪಡೆದರೂ ಸೋತಿದ್ದೇನೆ. ಸೋಲಿಗೆ ಯಾರನ್ನೂ ದೂರುವುದಿಲ್ಲ ಎಂದರು.
Amidst the recent controversy surrounding the arrest of Hindutva activist Chaithra Kundapura for allegedly defrauding an Udupi businessman of Rs 5 crore by promising him a BJP ticket for the last Assembly election, senior BJP leader CT Ravi clarified in a press conference that the party does not engage in the practice of selling tickets for monetary gain.
21-08-25 12:58 pm
Bangalore Correspondent
Dharmasthala Case: ಧರ್ಮಸ್ಥಳ ಪ್ರಕರಣ ; ಎಫ್ಎಸ್ಎಲ...
20-08-25 10:54 pm
Congress MP Sasikanth Senthil, Janardhana Red...
20-08-25 09:54 pm
Heart Attack, Mangalore, Bangalore: 3 ವರ್ಷದಲ್...
20-08-25 12:33 pm
'Shakti' Scheme, Golden Book of World Records...
20-08-25 12:11 pm
21-08-25 12:54 pm
HK News Desk
ಹೆದ್ದಾರಿಯಲ್ಲಿ ಗುಂಡಿಗಳು ಬಿದ್ದಿದ್ದರೆ, ಟ್ರಾಫಿಕ್...
20-08-25 10:56 pm
30 ದಿನ ಜೈಲು ಪಾಲಾದರೆ ಪ್ರಧಾನಿ, ಸಿಎಂ, ಸಚಿವರನ್ನು...
20-08-25 06:40 pm
ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಆಗಂತುಕನಿಂದ ಹಲ್ಲೆ...
20-08-25 11:01 am
ಭಾರತ ಟಿ20 ತಂಡಕ್ಕೆ ಮರಳಿದ ಶುಭಮನ್ ಗಿಲ್ ; ಏಷ್ಯಾ...
19-08-25 06:59 pm
21-08-25 11:57 am
Mangalore Correspondent
MLA Vedavyas Kamath: ಶ್ರೀಕೃಷ್ಣ ಜನ್ಮಾಷ್ಟಮಿಯ ಸಂ...
20-08-25 10:19 pm
Ananya–Sujatha Bhatt Case, Lawyer Manjunath:...
20-08-25 04:28 pm
ಕಡಬ ಪಟ್ಟಣ ಪಂಚಾಯತ್ ಚುನಾವಣೆ ; 13ರಲ್ಲಿ 8 ಗೆದ್ದ ಕ...
20-08-25 03:01 pm
SIT, Exhumation, Dharmasthala: ಶವ ಶೋಧ ಬಳಿಕ ಎಸ...
20-08-25 02:38 pm
20-08-25 08:10 pm
Mangalore Correspondent
Mangalore Lucky Scheme Scam Fraud, Wahab Kula...
19-08-25 10:52 pm
ಕಸ್ಟಮ್ಸ್ ಅಧಿಕಾರಿಗಳ ಸೋಗಿನಲ್ಲಿ ಚಿನ್ನದ ವ್ಯಾಪಾರಿಯ...
19-08-25 10:30 pm
ಡಾಕ್ಟರ್ ಮನೆ ದೋಚಿದ್ದ ಮನೆ ಕೆಲಸದವಳು ; ಚಿನ್ನ, ವಜ್...
19-08-25 09:27 pm
Gold Chain robbery, Puttur: ಮೈಸೂರಿನಲ್ಲಿ ಕದ್ದ...
19-08-25 12:54 pm