ಬ್ರೇಕಿಂಗ್ ನ್ಯೂಸ್
10-11-20 01:03 pm Udupi Correspondent ಕರಾವಳಿ
ಉಡುಪಿ, ನ.9 : ಸಮುದ್ರದ ಅಲೆಗಳಿಂದ ವಿದ್ಯುತ್ ಉತ್ಪಾದಿಸುವ ಸುಸಿ ಗ್ಲೋಬಲ್ ರಿಸರ್ಚ್ ಸೆಂಟರಿನ ಯೋಜನೆಗೆ ಸಂಬಂಧಿಸಿ ಪೂರ್ಣ ಪ್ರಮಾಣದ ವಿದ್ಯುತ್ ಉತ್ಪಾದನಾ ಮತ್ತು ಸಂಶೋಧನಾ ಘಟಕವನ್ನು ಕೆಮ್ಮಣ್ಣು ಗ್ರಾಪಂ ವ್ಯಾಪ್ತಿಯ ಕದಿಕೆ ಸಮುದ್ರ ಕಿನಾರೆಯಲ್ಲಿ ಸ್ಥಾಪಿಸಲು ಉದ್ದೇಶಿಸಲಾಗಿದೆ ಎಂದು ಸಂಶೋಧಕ ವಿಜಯ ಕುಮಾರ್ ಹೆಗ್ಡೆ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾಹಿತಿ ಅವರು, ಸುಸಿ ಗ್ಲೋಬಲ್ ರಿಸರ್ಚ್ ಸೆಂಟರ್‌ನ ಈ ಯೋಜನೆಗೆ ಬೆಂಗಳೂರಿನ ಈಸ್ಟ್ ವೆಸ್ಟ್ ಗ್ರೂಪ್ ಆಫ್ ಇನ್ಸಿ ಟ್ಯೂಟ್ ಕೈಜೋಡಿಸಿದೆ. 2015ರಲ್ಲಿ ಪ್ರಾಯೋಗಿಕ ಯೋಜನೆ ನಡೆಸಲಾಗಿತ್ತು. ಆ ಬಳಿಕ ತಾಂತ್ರಿಕವಾಗಿ ಮತ್ತಷ್ಟು ಅಭಿವೃದ್ಧಿ ಪಡಿಸಲಾಗಿದ್ದು ಪೂರ್ಣ ಪ್ರಮಾಣದ ವಿದ್ಯುತ್ ಉತ್ಪಾದನಾ ಘಟಕವನ್ನು ಸ್ಥಾಪಿಸಲಾಗುತ್ತಿದೆ ಎಂದರು.
ಈಗಾಗಲೇ ಯೋಜನೆಗೆ 3.5 ಕೋಟಿ ರೂ. ವ್ಯಯ ಮಾಡಲಾಗಿದ್ದು, 100 ಕಿಲೋ ವ್ಯಾಟ್ ವಿದ್ಯುತ್ ಉತ್ಪಾದಿಸುವ ಯೋಜನೆ ಶೀಘ್ರವೇ ಅನುಷ್ಠಾನಗೊಳ್ಳಲಿದೆ. ಜನವರಿಯಲ್ಲಿ ಪೂರ್ಣ ಪ್ರಮಾಣದಲ್ಲಿ ವಿದ್ಯುತ್ ಉತ್ಪಾದಿಸುವ ಕಾರ್ಯ ಆರಂಭಿಸಲಾಗುವುದು ಎಂದು ಅವರು ಹೇಳಿದರು.
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಬೆಂಗಳೂರಿನಲ್ಲಿ ಭೇಟಿ ಮಾಡಿ ಟೈಡಲ್ ಪವರ್ ಬಗ್ಗೆ ತಾಂತ್ರಿಕ ಮಾಹಿತಿಯನ್ನು ನೀಡಲಾಗಿದೆ. ಇದಕ್ಕೆ ಅವರು ಪೂರ್ಣ ಪ್ರಮಾಣದಲ್ಲಿ ಸಹಕಾರ ನೀಡುವುದಾಗಿ ಭರವಸೆ ನೀಡಿದ್ದಾರೆ. ಮುಂದೆ ಈ ವಿದ್ಯುತ್ ಸಂಶೋಧನಾ ಕೇಂದ್ರವು ಜಗತ್ತಿನಲ್ಲಿಯೇ ಅತ್ಯಂತ ದೊಡ್ಡ ಸಮುದ್ರದ ಅಲೆಗಳಿಂದ ವಿದ್ಯುತ್ ಉತ್ಪಾದಿಸುವ ಸಂಶೋಧನಾ ಕೇಂದ್ರ ಆಗಲಿದೆ ಎಂದು ಅವರು ತಿಳಿಸಿದರು.
ಘಟಕ ಸ್ಥಾಪಿಸಲಾಗುವ ಕದಿಕೆ ಸಮುದ್ರ ಕಿನಾರೆಯಲ್ಲಿ ನ.10ರಂದು ಬೆಳಗ್ಗೆ 9:30ಕ್ಕೆ ಸ್ವಚ್ಛ ಭಾರತ ಹಾಗೂ ಪ್ರವಾಸಿ ಕೇಂದ್ರ ಅಭಿವೃದ್ದಿ ಯೋಜನೆಯಡಿ ಸ್ವಚ್ಛತಾ ಅಭಿಯಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಇದು ಈಸ್ಟ್ ವೆಸ್ಟ್ ಗ್ರೂಪ್ ಮತ್ತು ಜಿಪಂ ಸ್ವಚ್ಛ ಭಾರತ್ ಮಿಷನ್ ಸಹಯೋಗದಲ್ಲಿ ನಡೆಯಲಿದೆ ಎಂದು ವಿಜಯ್ ಕುಮಾರ್ ಹೆಗ್ಡೆ ಹೇಳಿದರು.
After several years of hard work, a tidal power plant project is ready to be installed at Kadike seashore, in Bengre, Udupi. This information was provided by Vijaykumar Hegde, scientist and founder of Susi Global Research Center.
01-08-25 11:34 pm
Mangaluru Correspondent
‘Comedy Kiladigalu’, Chandrashekhar Siddi Sui...
01-08-25 10:45 pm
Kannada Producer Ganesh, Film Dharmasthala Fi...
01-08-25 09:09 pm
Rape Case, Prajwal Revanna Verdict : ಮೈಸೂರಿನ...
01-08-25 02:55 pm
ಧರ್ಮ 'ಸ್ಥಳ' ಕೇಸ್ ; ಪಾಯಿಂಟ್ ನಂ.1ರಲ್ಲಿ ಸಿಕ್ಕ...
01-08-25 01:31 pm
01-08-25 10:48 pm
HK News Desk
ಭಾರತ, ರಷ್ಯಾದ್ದು ಸತ್ತ ಆರ್ಥಿಕತೆ, ಒಟ್ಟಿಗೇ ನಾಶವಾಗ...
01-08-25 11:44 am
2008ರ ಮಾಲೆಗಾಂವ್ ಸ್ಫೋಟ ಪ್ರಕರಣ ; ಸಾಧ್ವಿ ಪ್ರಜ್ಞ...
31-07-25 10:08 pm
Trump, Modi, Export Tariff: ಸ್ನೇಹಿತ ಎನ್ನುತ್ತಲ...
31-07-25 09:51 am
ಪಾಕಿಸ್ತಾನದ ಡಿಜಿಎಂಒ ಕರೆ ಮಾಡಿ ದಾಳಿ ನಿಲ್ಲಿಸಲು ಮನ...
30-07-25 09:06 am
02-08-25 03:51 pm
Mangaluru Correspondent
Inspector Manjunath Gowda, SIT, Dharmasthala:...
02-08-25 02:31 pm
Dharmasthala Case, UDR, SIT Police News; ಧರ್ಮ...
02-08-25 01:46 pm
Kerala Comes to Mangalore: Feast at Coral, Th...
02-08-25 01:40 pm
Forensic Expert Dr Mahabala Shetty, Dharmasth...
01-08-25 10:02 pm
01-08-25 05:05 pm
Mangalore Correspondent
13 ವರ್ಷದ ಬಾಲಕನ ಕಿಡ್ನಾಪ್ ; 5 ಲಕ್ಷ ರೂ. ಹಣ ತರುವಷ...
01-08-25 04:27 pm
Tumakuru Crime, Principal Arrest: ತುಮಕೂರು ; ಹ...
01-08-25 02:31 pm
Mangalore Crime, Police: ಅಪ್ರಾಪ್ತ ಬಾಲಕಿಯನ್ನು...
31-07-25 06:04 pm
Bangalore Cyber Fraud: ಉದ್ಯೋಗಿಯನ್ನ ನಂಬಿ ಲ್ಯಾಪ...
30-07-25 10:42 pm