ಬ್ರೇಕಿಂಗ್ ನ್ಯೂಸ್
28-09-23 12:51 pm Mangalore Correspondent ಕರಾವಳಿ
ಮಂಗಳೂರು, ಸೆ.28: ಕಾವೇರಿ ನೀರಿನ ವಿಚಾರದಲ್ಲಿ ಕನ್ನಡ ಸಂಘಟನೆಗಳು ರಾಜ್ಯ ಬಂದ್ ಗೆ ಕರೆ ನೀಡಿದ್ದರೂ, ಕರಾವಳಿ ಭಾಗದಲ್ಲಿ ಇದರ ಬಿಸಿ ತಟ್ಟುವುದಿಲ್ಲ. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಖಾಸಗಿ ಬಸ್ ಗಳೇ ಹೆಚ್ಚಿದ್ದು ಬಸ್ ಮಾಲಕರ ಸಂಘ ಬಂದ್ ಕರೆಗೆ ಬೆಂಬಲ ನೀಡಿಲ್ಲ.
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ದಕ್ಷಿಣ ಕನ್ನಡ ಜಿಲ್ಲಾ ಬಸ್ ಮಾಲಕರ ಸಂಘದ ಅಧ್ಯಕ್ಷ ಅಜೀಜ್ ಪರ್ತಿಪ್ಪಾಡಿ, ಶಾಲೆಗಳಲ್ಲಿ ಪರೀಕ್ಷೆ ನಡೆಯುತ್ತಿದೆ. ಮತ್ತೊಂದೆಡೆ ಕಾಲೇಜು ವಿದ್ಯಾರ್ಥಿಗಳಿಗೆ ನೀಟ್ ಇನ್ನಿತರ ಪರೀಕ್ಷೆ ಆಗುತ್ತಾ ಇದೆ. ಹಿಂದೆ ಕನ್ನಡ ಪರ ಸಂಘಟನೆಗಳು ನಮ್ಮ ಬಂದ್ ಕರೆಗೆ ಪ್ರತಿಕ್ರಿಯೆ ನೀಡಿರಲಿಲ್ಲ. ಹೀಗಾಗಿ ಕಾವೇರಿ ಬಂದ್ ಕರೆಗೆ ನಾವು ನೈತಿಕ ಬೆಂಬಲ ನೀಡುತ್ತೇವೆ. ಆದರೆ ಬಂದ್ ಅಥವಾ ಪ್ರತಿಭಟನೆಗಿಳಿಯೋದಿಲ್ಲ. ಸಾರ್ವಜನಿಕರಿಗೆ ತೊಂದರೆ ಆಗುವ ರೀತಿ ಮಾಡಲ್ಲ. ಎಂದಿನಂತೆ ಖಾಸಗಿ ಬಸ್ ಗಳು ಓಡಾಟ ನಡೆಸಲಿವೆ ಎಂದು ಹೇಳಿದ್ದಾರೆ.
ಸಿಟಿ ಬಸ್ ಮಾಲಕರ ಸಂಘದ ಮಾಜಿ ಅಧ್ಯಕ್ಷ ದಿಲ್ ರಾಜ್ ಆಳ್ವ ಪ್ರತಿಕ್ರಿಯಿಸಿ, ನಾವು ಈ ಹಿಂದೆ ಕರಾವಳಿ ಭಾಗದಲ್ಲಿ ಎತ್ತಿನಹೊಳೆ ಯೋಜನೆ ವಿರೋಧಿಸಿ ಪ್ರತಿಭಟನೆ ನಡೆಸಿದ್ದೆವು. ನೀರಿನ ವಿಚಾರದಲ್ಲಿ ಕನ್ನಡ ಸಂಘಟನೆಗಳು ನಮಗೆ ಬೆಂಬಲ ನೀಡಿರಲಿಲ್ಲ. ತುಳು ಭಾಷೆಯ ವಿಚಾರದಲ್ಲಿಯೂ ಘಟ್ಟದ ಭಾಗದ ಶಾಸಕರಾಗಲೀ, ಕನ್ನಡ ಸಂಘಟನೆಗಳಾಗಲೀ ನಮಗೆ ಬೆಂಬಲ ನೀಡುತ್ತಿಲ್ಲ. ಇದಕ್ಕಾಗಿ ನಾವೀಗ ಕನ್ನಡ ಸಂಘಟನೆಗಳ ಬಂದ್ ಕರೆಗೆ ಸ್ಪಂದನೆ ನೀಡುವುದಿಲ್ಲ ಎಂದಿದ್ದಾರೆ. ಉಡುಪಿ ಜಿಲ್ಲೆಯಲ್ಲೂ ಖಾಸಗಿ ಬಸ್ ಗಳು ಎಂದಿನಂತೆ ಓಡಾಟ ನಡೆಸಲಿದ್ದು, ಬಂದ್ ಕರೆಗೆ ಪ್ರತಿಕ್ರಿಯಿಸುವುದಿಲ್ಲ ಎಂದು ಅಲ್ಲಿನ ಬಸ್ ಮಾಲಕರು ತಿಳಿಸಿದ್ದಾರೆ.
Karnataka Bandh over Cauvery Row, Mangalore buses to move as normal, no support by Mangaloreans.
17-10-26 07:30 pm
HK News Staffer
Davanagere Accident: ದಾವಣಗೆರೆ ; ಸಿಎನ್ಜಿ ಲಾರಿ...
16-10-26 09:49 pm
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
17-10-26 11:04 pm
Mangaluru Staffer
ಎಂಆರ್ ಪಿಎಲ್ ದುರಂತ ; ಮೃತ ರಾಜೇಶ್ ಡಿಸಿಲ್ವ ಕುಟುಂಬ...
17-10-26 07:34 pm
ಸೆ.30ರ ಸ್ಫೋಟ ಘಟನೆಯಲ್ಲಿ 118.76 ಕೋಟಿ ನಷ್ಟ ; ಎಂಆ...
17-10-26 12:25 pm
ಪದ್ಮಶ್ರೀ ಹಾಜಬ್ಬರಿಗೆ ಚುನಾವಣಾ ಆಯೋಗವು ನೋಟೀಸು ನೀಡ...
16-10-26 10:28 pm
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
17-10-26 11:09 am
HK News Staffer
LanchuLal, Astra Fraud, Mangalore: ‘ಅಕ್ಷಯ ಪಾತ...
16-10-26 03:37 pm
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am