ಬ್ರೇಕಿಂಗ್ ನ್ಯೂಸ್
30-09-23 09:46 pm Mangalore Correspondent ಕರಾವಳಿ
ಪುತ್ತೂರು, ಸೆ.30: ಮೂರನೇ ತರಗತಿ ಓದುವ ಪುಟಾಣಿ ಬಾಲಕಿಯೊಬ್ಬಳು ಬರೆದ ಪತ್ರಕ್ಕೆ ಮುಖ್ಯಮಂತ್ರಿ ಕಚೇರಿಯಿಂದ ತುರ್ತು ಸ್ಪಂದನೆ ಸಿಕ್ಕಿದೆ. ಪತ್ರದಲ್ಲಿ ಶಾಲೆಯ ಬಳಿ ತಂಬಾಕು ಮಾರಾಟ ಮಾಡುತ್ತಿದ್ದಾರೆಂಬ ದೂರನ್ನು ಪರಿಗಣಿಸಿ ಕಡಬ ಪೊಲೀಸರು ಅಂಗಡಿಗೆ ದಾಳಿ ನಡೆಸಿದ್ದಾರೆ.
ಕುಕ್ಕೆ ಸುಬ್ರಹ್ಮಣ್ಯ ಬಳಿಯ ಕೈಕಂಬ ಪಿಲಿಕಜೆ ನಿವಾಸಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ 3ನೇ ತರಗತಿ ವಿದ್ಯಾರ್ಥಿನಿಯೊಬ್ಬಳು ಪತ್ರಿಕೆಯೊಂದಕ್ಕೆ ಪತ್ರದ ಮೂಲಕ ದೂರು ಹೇಳಿಕೊಂಡಿದ್ದಳು. ಶಾಲೆ ಬಳಿಯಿರುವ ಅಂಗಡಿಯಲ್ಲಿ ತಂಬಾಕು ಮಾರಾಟ ಮಾಡುತ್ತಿದ್ದಾರೆ ಮತ್ತು ಅದರ ಪೊಟ್ಟಣ ಶಾಲೆ ಆವರಣದಲ್ಲಿ ಬಿದ್ದಿರುತ್ತದೆ. ನಿಷೇಧ ಇದ್ದರೂ ನಿಯಮ ಪಾಲನೆ ಆಗುತ್ತಿಲ್ಲ ಎಂದು ದೂರಿನಲ್ಲಿ ಬರೆದಿದ್ದಳು. ಸೆ.15ರಂದು ಬರೆದಿದ್ದ ಬಾಲಕಿಯ ಪತ್ರವನ್ನು ಪತ್ರಿಕೆಯ ಸಂಪಾದಕೀಯ ಮಂಡಳಿ ಗಂಭೀರ ಪರಿಗಣಿಸಿ, ಮುಖ್ಯಮಂತ್ರಿ ಕಚೇರಿಯ ಕುಂದುಕೊರತೆ ವಿಭಾಗದ ವಿಶೇಷಾಧಿಕಾರಿ ಡಾ.ವೈಷ್ಣವಿ ಅವರಿಗೆ ರವಾನಿಸಿತ್ತು.
ಪತ್ರವನ್ನು ಗಮನಿಸಿ ಸಿಎಂ ಕಚೇರಿಯಿಂದ ಬಾಲಕಿಯ ಮನೆಗೆ ಕರೆ ಬಂದಿದ್ದು, ಸಮಸ್ಯೆ ಬಗ್ಗೆ ವಿಚಾರಿಸಿದ್ದಾರೆ. ಆನಂತರ, ಸಿಎಂ ಕಚೇರಿಯಿಂದ ಸ್ಥಳೀಯ ಕಡಬ ಪೊಲೀಸ್ ಠಾಣೆಗೆ ದೂರನ್ನು ರವಾನಿಸಲಾಗಿತ್ತು. ಇದರಂತೆ, ಕಡಬ ಎಸ್ಐ ಅಭಿನಂದನ್ ನೇತೃತ್ವದಲ್ಲಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದು ತಂಬಾಕು ಸಾಮಗ್ರಿಗಳನ್ನು ವಶಕ್ಕೆ ಪಡೆದಿದ್ದಾರೆ. ತಂಬಾಕು ನಿಷೇಧ ಕಾಯ್ದೆಯಡಿ ಅಂಗಡಿ ಹೊಂದಿದ್ದ ವ್ಯಕ್ತಿಗೂ ದಂಡ ವಿಧಿಸಿದ್ದಾರೆ.
A letter written by a minor girl studying in Class 30 has received an urgent response from the Chief Minister's Office. The Kadaba police raided the shop after considering a complaint that tobacco was being sold near the school in the letter.
20-08-25 10:54 pm
Bangalore Correspondent
Congress MP Sasikanth Senthil, Janardhana Red...
20-08-25 09:54 pm
Heart Attack, Mangalore, Bangalore: 3 ವರ್ಷದಲ್...
20-08-25 12:33 pm
'Shakti' Scheme, Golden Book of World Records...
20-08-25 12:11 pm
ರಾಜ್ಯದಲ್ಲಿ ಸಹಕಾರ ವ್ಯವಸ್ಥೆಗೆ ಬಿಗ್ ಸರ್ಜರಿ ; ಸಹಕ...
19-08-25 11:13 am
20-08-25 10:56 pm
HK News Desk
30 ದಿನ ಜೈಲು ಪಾಲಾದರೆ ಪ್ರಧಾನಿ, ಸಿಎಂ, ಸಚಿವರನ್ನು...
20-08-25 06:40 pm
ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಆಗಂತುಕನಿಂದ ಹಲ್ಲೆ...
20-08-25 11:01 am
ಭಾರತ ಟಿ20 ತಂಡಕ್ಕೆ ಮರಳಿದ ಶುಭಮನ್ ಗಿಲ್ ; ಏಷ್ಯಾ...
19-08-25 06:59 pm
ಇಂಡಿಯಾ ಬಣದಿಂದ ಉಪ ರಾಷ್ಟ್ರಪತಿ ಅಭ್ಯರ್ಥಿ ಬಿ.ಸುದರ್...
19-08-25 06:41 pm
20-08-25 10:19 pm
Mangalore Correspondent
Ananya–Sujatha Bhatt Case, Lawyer Manjunath:...
20-08-25 04:28 pm
ಕಡಬ ಪಟ್ಟಣ ಪಂಚಾಯತ್ ಚುನಾವಣೆ ; 13ರಲ್ಲಿ 8 ಗೆದ್ದ ಕ...
20-08-25 03:01 pm
SIT, Exhumation, Dharmasthala: ಶವ ಶೋಧ ಬಳಿಕ ಎಸ...
20-08-25 02:38 pm
Wild Elephant, Belthangady, Eshwar Khandre: ಬ...
20-08-25 01:36 pm
20-08-25 08:10 pm
Mangalore Correspondent
Mangalore Lucky Scheme Scam Fraud, Wahab Kula...
19-08-25 10:52 pm
ಕಸ್ಟಮ್ಸ್ ಅಧಿಕಾರಿಗಳ ಸೋಗಿನಲ್ಲಿ ಚಿನ್ನದ ವ್ಯಾಪಾರಿಯ...
19-08-25 10:30 pm
ಡಾಕ್ಟರ್ ಮನೆ ದೋಚಿದ್ದ ಮನೆ ಕೆಲಸದವಳು ; ಚಿನ್ನ, ವಜ್...
19-08-25 09:27 pm
Gold Chain robbery, Puttur: ಮೈಸೂರಿನಲ್ಲಿ ಕದ್ದ...
19-08-25 12:54 pm