ಬ್ರೇಕಿಂಗ್ ನ್ಯೂಸ್
07-10-23 06:29 pm HK News Desk ಕರಾವಳಿ
ಕಾರವಾರ, ಅ.7: ಸಾಮಾನ್ಯವಾಗಿ ಹಿಂದೂ ಧರ್ಮದಲ್ಲಿ ಪಿತೃಕಾರ್ಯ ನೆರವೇರಿಸಲಾಗುತ್ತದೆ. ಆದರೆ ಮುಸ್ಲಿಂ ಕುಟುಂಬವೊಂದು ಗೋಕರ್ಣದಲ್ಲಿ ಪಿತೃಪಕ್ಷದ ಪರ್ವಕಾಲದಲ್ಲಿ ಪಿತೃಕಾರ್ಯ ನೆರವೇರಿಸಿದೆ. ಧಾರವಾಡ ಧಾನೇಶ್ವರಿ ನಗರದ ಶಂಸಾದ್ ಎಂಬುವರು ಜ್ಯೋತಿಷಿಯೊಬ್ಬರ ಸಲಹೆ ಮೇರೆಗೆ ನಾರಾಯಣ ಬಲಿ, ತ್ರಿಪಿಂಡಿ ಶ್ರಾದ್ಧ ಮತ್ತು ತಿಲಹವನವನ್ನು ಇಲ್ಲಿನ ಪಿತೃಶಾಲೆಯಲ್ಲಿ ಪೂರೈಸಿದರು.
ಈ ಬಗ್ಗೆ ಪ್ರತಿಕ್ರಿಯಿಸಿರುವ ಶಂಸಾದ್, ನಾವು ಮೊದಲಿನಿಂದಲೂ ಕುಂಡಲೀ, ಜಾತಕ, ಹಿಂದೂ ಸಂಪ್ರದಾಯದ ಮೇಲೆ ನಂಬಿಕೆ ಉಳ್ಳವರು. ನಮ್ಮ ತಂದೆ ಗದಗಿನ ವೀರನಾರಾಯಣ ದೇವಸ್ಥಾನದ ಹತ್ತಿರ ಬ್ರಾಹ್ಮಣ ಮತ್ತು ಲಿಂಗಾಯತ ಸಮುದಾಯದವರ ಜೊತೆಯಲ್ಲಿಯೇ ಬೆಳೆದವರು. ತಮ್ಮನಿಗೆ ಮದುವೆ ಸಂಬಂಧ ಸರಿಯಾಗಿ ಹೆಣ್ಣು ಸಿಗದೇ ಇದ್ದಾಗ ಜ್ಯೋತಿಷಿಯ ಬಳಿ ಹೋಗಿದ್ದೆವು. ಅವರು ತಿಳಿಸಿದಂತೆ ತಮ್ಮನ ಮದುವೆ, ಮಾನಸಿಕ ಶಾಂತಿ ಹಾಗೂ ಉದ್ಯೋಗದಲ್ಲಿ ಏಳ್ಗೆ ಸಿಗಲಿ ಎಂಬ ಉದ್ದೇಶದಿಂದ ಈ ಪಿತೃ ಕಾರ್ಯ ಮಾಡಿಸಿದ್ದೇವೆ ಎಂದು ತಿಳಿಸಿದ್ದಾರೆ.
ಜ್ಯೋತಿಷಿಗಳ ಮಾರ್ಗದರ್ಶನದಂತೆ ಗೋಕರ್ಣಕ್ಕೆ ಬಂದು ಕ್ಷೇತ್ರ ಪುರೋಹಿತರಾದ ನಾಗರಾಜ ಭಟ್ ಗುರ್ಲಿಂಗ್ ಹಾಗೂ ಸುಬ್ರಹಣ್ಯ ಚಿತ್ರಿಗೆಮಠ ಇವರ ನೇತೃತ್ವದಲ್ಲಿ ಎಲ್ಲಾ ಪೂಜಾ ಕಾರ್ಯ ನೆರವೇರಿಸಿದ್ದಾರೆ. ಗೋಕರ್ಣದಲ್ಲಿ ಕ್ರಿಶ್ಚಿಯನ್ ಸಮುದಾಯದವರು, ವಿದೇಶಿಗರು ಇಂತಹ ಪಿತೃ ಕಾರ್ಯ ನೆರವೇರಿಸಿದ ಅನೇಕ ಉದಾಹರಣೆಗಳಿವೆ. ಆದರೆ ಮುಸ್ಲಿಂ ಕುಟುಂಬವೊಂದು ಪಿತೃಕಾರ್ಯ ನೆರವೇರಿಸಿದ್ದು, ಇದೇ ಮೊದಲು ಎಂದು ಹೇಳಲಾಗಿದೆ.
Muslim family in Gokarna perform Pitrakarya at temple, first time ever.Pitrakarya is usually performed in Hinduism. But a Muslim family has recently performed the patrimony in Gokarna during the festival of the patriarch. Shamsad of Dhaneshwari Nagar, Dharwad, performed Narayana Bali, Tripindi Shraddha and Thilahavana at the Pitrushala here on the advice of an astrologer.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
14-07-26 01:37 pm
HK News Staffer
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
14-07-26 02:43 pm
HK News Staffer
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm