ಬ್ರೇಕಿಂಗ್ ನ್ಯೂಸ್
10-10-23 08:13 pm Mangalore Correspondent ಕರಾವಳಿ
ಉಳ್ಳಾಲ, ಅ.10: ಕೆಎಸ್ ಆರ್ ಟಿಸಿ ಬಸ್ ಮತ್ತು ದ್ವಿಚಕ್ರ ವಾಹನಗಳ ನಡುವೆ ಕೋಟೆಕಾರು, ಬೀರಿ ಜಂಕ್ಷನ್ನಲ್ಲಿ ಇಂದು ಸಂಜೆ ಅಪಘಾತ ನಡೆದಿದ್ದು ಸ್ಕೂಟರ್ ಚಲಾಯಿಸುತ್ತಿದ್ದ ಕೃಷ್ಣ ಶೆಟ್ಟಿ ತಾಮಾರ್(65) ಗಂಭೀರ ಗಾಯಗೊಂಡು ಚಿಂತಾಜನಕ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಕೋಟೆಕಾರು ಗ್ರಾಮದ ಕಾರಣೀಕ ಸ್ಥಳ ಕೊಂಡಾಣ ಪಿಲಿಚಾಮುಂಡಿ, ಬಂಟ, ಮುಂಡತ್ತಾಯ ಕ್ಷೇತ್ರದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರು, ಕೋಟೆಕಾರು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ಕೃಷ್ಣ ಶೆಟ್ಟಿ ತಾಮಾರ್ ಅವರು ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದು ಅವರನ್ನ ನಗರದ ಎ.ಜೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಇಂದು ಸಂಜೆ ತಾಮಾರ್ ಅವರು ಅಡ್ಕದ ತನ್ನ ಮನೆಯಿಂದ ಸ್ಕೂಟರಲ್ಲಿ ಬೀರಿಗೆ ತೆರಳುತ್ತಿದ್ದ ವೇಳೆ ಹಿಂದಿನಿಂದ ಬಂದ ಬೈಕೊಂದು ಸ್ಕೂಟರಿಗೆ ಢಿಕ್ಕಿ ಹೊಡೆದಿದ್ದು ಇಬ್ಬರೂ ದ್ವಿಚಕ್ರ ವಾಹನ ಸವಾರರು ರಸ್ತೆಗೆ ಬಿದ್ದಿದ್ದಾರೆ.
ಇದೇ ವೇಳೆ, ಹಿಂದಿನಿಂದ ವೇಗವಾಗಿ ಕಾಸರಗೋಡಿಗೆ ಧಾವಿಸುತ್ತಿದ್ದ ಕೆಎಸ್ ಆರ್ ಟಿಸಿ ಬಸ್ಸು ರಭಸದಿಂದ ಢಿಕ್ಕಿ ಹೊಡೆದ ಪರಿಣಾಮ ಕೃಷ್ಣ ಶೆಟ್ಟಿ ದೂರಕ್ಕೆ ಎಸೆಯಲ್ಪಟ್ಟಿದ್ದಾರೆ. ಗಂಭೀರ ಗಾಯಗೊಂಡು ಪ್ರಜ್ಞೆ ಕಳಕೊಂಡಿದ್ದ ಅವರನ್ನ ಸಾರ್ವಜನಿಕರು ಆಸ್ಪತ್ರೆಗೆ ಸೇರಿಸಿದ್ದಾರೆ. ಮತ್ತೋರ್ವ ಬೈಕ್ ಸವಾರ ಸಣ್ಣ , ಪುಟ್ಟ ಗಾಯಗಳಿಂದ ಪಾರಾಗಿದ್ದು, ಮಂಗಳೂರು ದಕ್ಷಿಣ ಸಂಚಾರಿ ಠಾಣೆ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.
Mangalore Kotekar junction accident between KSRTC bus and two wheeler, one injured.
08-09-25 08:07 pm
HK News Desk
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
ತುಳು ರಾಜ್ಯ ಭಾಷೆ ಘೋಷಣೆ ಬಗ್ಗೆ ಸಂಪುಟದಲ್ಲಿ ಚರ್ಚೆ...
08-09-25 02:41 pm
Prajwal Revanna: ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರ...
07-09-25 07:43 pm
08-09-25 11:06 pm
HK News Desk
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
ಏಳು ವರ್ಷ ಶಿಕ್ಷೆ ಪೂರ್ತಿಗೊಳಿಸಿದ ಬಳಿಕವೂ ಹೆಚ್ಚುವರ...
08-09-25 06:07 pm
ಮಲ್ಲಿಗೆ ಮುಡಿದಿದ್ದ ನಟಿ ನವ್ಯಾ ನಾಯರ್ಗೆ ಒಂದು ಲಕ್...
08-09-25 02:02 pm
ಸಾವಿರಾರು ಕೋಟಿ ವಂಚಿಸಿದ ವಿಜಯ್ ಮಲ್ಯ, ನೀರವ್ ಮೋದಿ...
07-09-25 08:33 pm
09-09-25 11:48 am
Mangalore Correspondent
Gopadi Beach Drowning, Kundapura: ಕುಂದಾಪುರ ;...
08-09-25 12:08 pm
Mangalore, Bantwal Mosque Speaker: ಬಂಟ್ವಾಳದಲ್...
07-09-25 11:24 pm
ಬಂಗ್ಲೆಗುಡ್ಡೆ ಕಾಡಿಗೆ ಮತ್ತೆ ಭದ್ರತೆ ; ಸ್ಥಳ ಮಹಜರು...
07-09-25 10:59 pm
ಅಪ್ರಾಪ್ತ ಬಾಲಕನ ತ್ರಿಬಲ್ ರೈಡ್ ; ಸ್ಕೂಟರ್ ಕೊಟ್ಟ ಹ...
07-09-25 10:04 pm
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm