ಬ್ರೇಕಿಂಗ್ ನ್ಯೂಸ್
17-10-23 06:04 pm Mangalore Correspondent ಕರಾವಳಿ
ಮಂಗಳೂರು, ಅ.17: ಇತಿಹಾಸ ಪ್ರಸಿದ್ಧ ಮಂಗಳಾದೇವಿ ದೇವಸ್ಥಾನ ಆಡಳಿತ ಮಂಡಳಿ ನವರಾತ್ರಿ ಉತ್ಸವ ಸಂದರ್ಭದಲ್ಲಿ ಹಿಂದೂ ವ್ಯಾಪಾರಸ್ಥರಿಗೆ ಸಂತೆಯಲ್ಲಿ ವ್ಯಾಪಾರಕ್ಕೆ ಅವಕಾಶ ನೀಡಿದಕ್ಕೆ ಅಭಿನಂದನೆಗಳು. ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲ ದೇವಸ್ಥಾನಗಳಲ್ಲಿ ದತ್ತಿ ಇಲಾಖೆಯ ಕಾನೂನಿನ ಅನ್ವಯ ಇದೇ ರೀತಿಯಲ್ಲಿ ಜಾತ್ರೆ ಸಂದರ್ಭದಲ್ಲಿ ಹಿಂದೂ ವ್ಯಾಪಾರಸ್ಥರಿಗೆ ಮಾತ್ರ ಸಂತೆಯಲ್ಲಿ ವ್ಯಾಪಾರಕ್ಕೆ ಅವಕಾಶ ನೀಡಬೇಕಾಗಿ ವಿನಂತಿಸುತ್ತೇವೆ ಎಂದು ವಿಶ್ವ ಹಿಂದು ಪರಿಷದ್ ಜಿಲ್ಲಾಧ್ಯಕ್ಷ ಎಚ್.ಕೆ. ಪುರುಷೋತ್ತಮ ದತ್ತನಗರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜಿಲ್ಲಾಡಳಿತ ಮಂಗಳಾದೇವಿ ದೇವಸ್ಥಾನದಲ್ಲಿ ಎರಡನೇ ಬಾರಿ ಏಲಂ ಕರೆದು ಹಿಂದುಯೇತರರಿಗೆ ವ್ಯಾಪಾರಕ್ಕೆ ಅವಕಾಶ ಕೊಟ್ಟಿದ್ದು ಸರಿಯಲ್ಲ, ದತ್ತಿ ಇಲಾಖೆಯ ಕಾನೂನಿನ ಅನ್ವಯ ರಥ ಬೀದಿಯಲ್ಲಿ ಹಿಂದುಯೇತರರಿಗೆ ವ್ಯಾಪಾರಕ್ಕೆ ಅವಕಾಶ ಇಲ್ಲ. ಬಡ ಹಿಂದೂ ವ್ಯಾಪಾರಸ್ಥರು ಈ ಜಾತ್ರೆ ವ್ಯಾಪಾರ ನಂಬಿ ತಮ್ಮ ಜೀವನ ಸಾಗಿಸುತ್ತಿದ್ದಾರೆ. ಹಾಗಾಗಿ ತಾವೆಲ್ಲರೂ ಕೇಸರಿ ಧ್ವಜ ಹಾಕಿರುವ ಬಳಿ ವ್ಯಾಪಾರ ಮಾಡುವಂತೆ ಮಂಗಳಾದೇವಿ ದೇವಸ್ಥಾನಕ್ಕೆ ಬರುವ ಲಕ್ಷಾಂತರ ಭಕ್ತರಲ್ಲಿ ವಿನಂತಿಸುತ್ತೇವೆ ಎಂದು ಪುರುಷೋತ್ತಮ್ ವಿನಂತಿ ಮಾಡಿದ್ದಾರೆ.
ಬಡ ಮುಸ್ಲಿಂ ವ್ಯಾಪಾರಿಗಳಿಗೆ ನಮ್ಮ ವಿರೋಧ ಇಲ್ಲ. ಧಾರ್ಮಿಕ ಕ್ಷೇತ್ರ ನಮ್ಮ ಹಕ್ಕು. ಹಾಗಾಗಿ ದತ್ತಿ ಇಲಾಖೆ ಕಾನೂನು ಅನ್ವಯ ರಥಬೀದಿಯಲ್ಲಿ ಹಿಂದುಯೇತರರಿಗೆ ವ್ಯಾಪಾರಕ್ಕೆ ಅವಕಾಶವಿಲ್ಲ. ತಾವುಗಳು ರಥಬೀದಿ ಬಿಟ್ಟು ಬೇರೆ ಕಡೆ ವ್ಯಾಪಾರ ಮಾಡಿ ನಮ್ಮ ಅಭ್ಯಂತರವಿಲ್ಲ ಎಂದು ವಿಶ್ವ ಹಿಂದೂ ಪರಿಷದ್ ಜಿಲ್ಲಾಧ್ಯಕ್ಷ ಪುರುಷೋತ್ತಮ್ ತಿಳಿಸಿದ್ದಾರೆ.
Congratulations to the management of the historic Mangaladevi Temple for allowing Hindu traders to trade in the market during the Navratri festival.
10-11-25 07:17 pm
Bangalore Correspondent
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
11-11-25 10:56 pm
HK News Desk
Mangaluru Kasaragod Highway: ಮಂಗಳೂರು- ಕಾಸರಗೋಡ...
11-11-25 10:20 pm
ಕೆಂಪುಕೋಟೆ ಕಾರು ಬ್ಲಾಸ್ಟ್ ಪ್ರಕರಣ ; ಜೈಶ್ ಉಗ್ರರ ಲ...
11-11-25 03:28 pm
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
ದೆಹಲಿಯಲ್ಲಿ ಭಾರೀ ಬಾಂಬ್ ಸ್ಫೋಟ ; ಛಿದ್ರಗೊಂಡು ಚದುರ...
10-11-25 09:08 pm
11-11-25 10:42 pm
Mangalore Correspondent
Bomb blast in New Delhi, High Alert in Dakshi...
11-11-25 10:15 pm
Bhagvati Prem Ship, Mangalore: ಸುರತ್ಕಲ್ ; ಮರಳ...
08-11-25 08:31 pm
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
11-11-25 06:33 pm
Mangalore Correspondent
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm