ಬ್ರೇಕಿಂಗ್ ನ್ಯೂಸ್
17-10-23 10:13 pm Mangalore Correspondent ಕರಾವಳಿ
ಮಂಗಳೂರು, ಅ.17: ಕಾಂಗ್ರೆಸ್ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದೆ ಎಂದು ಆರೋಪಿಸಿ ನಗರದ ಕಾವೂರಿನಲ್ಲಿ ಬಿಜೆಪಿ ನಾಯಕರು ಪ್ರತಿಭಟನೆ ನಡೆಸಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಮತ್ತು ಶಾಸಕ ಭರತ್ ಶೆಟ್ಟಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ್ದು ಕಾಂಗ್ರೆಸ್ ಸರ್ಕಾರ ಎಟಿಎಂ ಸರ್ಕಾರ ಎಂದು ಘೋಷಣೆ ಕೂಗಿದ್ದಾರೆ.
ಪ್ರತಿಭಟನಾ ಸಭೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮಾತನಾಡಿದ್ದು ಗುತ್ತಿಗೆದಾರರ ಮನೆಯಲ್ಲಿ ರಾಶಿ ರಾಶಿ ಹಣ ಸಿಕ್ಕಿದ್ದು ಸರ್ಕಾರದ ಖಜಾನೆಯ ಹಣ ನೇರವಾಗಿ ಸಿದ್ದರಾಮಯ್ಯ ಮತ್ತು ಡಿಕೆಶಿ ಮನೆಗೆ ಹೋಗಿದೆ. ಇದು ಖಜಾನೆ ಖಾಲಿ ಮಾಡಿದ ಲೂಟಿಕೋರ ಸರ್ಕಾರ. ಡಿಕೆ ಶಿವಕುಮಾರ್ ಅವರು ತಿಹಾರ್ ಜೈಲಿಗೆ ಹೋಗಿ ಬಂದಿದ್ದರು. ಇದೀಗ ಎರಡನೇ ಸಲ ತಿಹಾರ್ ಜೈಲಿಗೆ ಹೋಗಲು ಸಿದ್ದರಾಗುತ್ತಿದ್ದಾರೆ. ನಿನ್ನೆ ಸಿಕ್ಕ ಹಣ ಡಿಕೆಶಿಯದ್ದು ಅಂತ ಪತ್ರಿಕೆಗಳು, ಟಿವಿಗಳು ಹೇಳ್ತಾ ಇದೆ. ಪಂಚರಾಜ್ಯ ಚುನಾವಣೆಗಾಗಿ ಕಾಂಗ್ರೆಸ್ ಪಕ್ಷಕ್ಕೆ ಕರ್ನಾಟಕ ಎಟಿಎಂ ಆಗ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.



ಹೊಟೇಲ್ ಗಳಲ್ಲಿ ತಿಂಡಿಗೆ ಬೆಲೆ ಇದ್ದಂತೆ ಸರ್ಕಾರಿ ಕಚೇರಿಗಳಲ್ಲಿ ರೇಟ್ ಫಿಕ್ಸ್ ಆಗಿದೆ. ವರ್ಗಾವಣೆ ಸೇರಿದಂತೆ ಯಾವುದೇ ಕೆಲಸ ಆಗಬೇಕಿದ್ದರೂ ಇಂತಿಷ್ಟು ರೇಟ್ ಕೊಡಬೇಕು. ಹೀಗಾಗಿ ಸಿದ್ದರಾಮಯ್ಯರ ಸರ್ಕಾರ 80% ಪರ್ಸಂಟೇಜ್ ಸರ್ಕಾರ ಎನ್ನುವಂತಾಗಿದೆ. ತಾಲೂಕು ಕಚೇರಿಗಳಲ್ಲಿ ತಹಶಿಲ್ದಾರ್ ರು ಲಂಚ ಕೇಳ್ತಾರೆ. ಗ್ರಾಮಗಳಲ್ಲಿ ವಿಎಗಳು ಲಂಚ ಕೇಳ್ತಾರೆ, ಪಿಡಿಓಗಳು ಲಂಚ ಕೇಳ್ತಾ ಇದಾರೆ. ಭ್ರಷ್ಟಾಚಾರದಲ್ಲಿ ಇಡೀ ಸರ್ಕಾರ ಮುಳುಗಿದೆ ಎಂದು ನಳಿನ್ ಕುಮಾರ್ ಹೇಳಿದರು.
Bjp leaders staged a protest at Kavoor in mangaluru alleging that the Congress government was indulging in corruption. The protest, led by BJP state president Nalin Kumar and MLA Bharat Shetty, raised slogans that the Congress government is an ATM government.
29-08-26 10:49 pm
HK News Staffer
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
ನಾಗೇಂದ್ರ ರಾಜಿನಾಮೆ ನೀಡಿದ್ರೂ ಬಿಜೆಪಿ ಪಾದಯಾತ್ರೆ ಮ...
29-08-26 10:38 pm
ಸಿನಿಮಾಗಳಲ್ಲಿ ಮಹಿಳೆಯನ್ನು ಭೋಗದ ವಸ್ತುವನ್ನಾಗಿ ತೋರ...
28-08-26 09:35 pm
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
29-08-26 10:25 pm
HK News Staffer
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm