ಬ್ರೇಕಿಂಗ್ ನ್ಯೂಸ್
18-10-23 10:42 pm Mangalore Correspondent ಕರಾವಳಿ
ಮಂಗಳೂರು, ಅ.18: ಮಂಗಳಾದೇವಿ ದೇವಸ್ಥಾನದ ನವರಾತ್ರಿ ಉತ್ಸವದ ನೆಪದಲ್ಲಿ ಸಂತೆ ವ್ಯಾಪಾರಸ್ಥರನ್ನು ವಿಭಜಿಸಿ ಹಿಂದುಗಳ ಅಂಗಡಿಗಳಿಗೆ ಭಗವಾಧ್ವಜ ಕಟ್ಟಿ ಮುಸ್ಲಿಮರ ಜೊತೆ ವ್ಯಾಪಾರ ಮಾಡದಂತೆ ಕರೆ ನೀಡಿದ್ದ ವಿಶ್ವ ಹಿಂದು ಪರಿಷತ್ ಪ್ರಾಂತ ಸಹ ಕಾರ್ಯದರ್ಶಿ ಶರಣ್ ಪಂಪ್ವೆಲ್ ವಿರುದ್ದ ಪಾಂಡೇಶ್ವರ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಮಂಗಳೂರಿನ ಮಂಗಳಾದೇವಿ ದೇವಸ್ಥಾನದಲ್ಲಿ ವಿಎಚ್ ಪಿ ಮುಖಂಡ ಶರಣ್ ಪಂಪ್‌ವೆಲ್ ಹಾಗೂ ಹಿಂದು ಸಂಘಟನೆಯ ಕಾರ್ಯಕರ್ತರು ಹಿಂದೂ ವ್ಯಾಪಾರಿಗಳ ಅಂಗಡಿಗಳ ಮೇಲೆ ಕೇಸರಿ ಧ್ವಜವನ್ನು ನೆಟ್ಟಿದ್ದರು. ಅಲ್ಲದೆ ಮಾಧ್ಯಮಗಳೊಂದಿಗೆ ಮಾತನಾಡುವ ವೇಳೆ ಹಿಂದೂಗಳು ಹಿಂದೂ ವ್ಯಾಪಾರಿಗಳಿಂದಲೇ ವ್ಯಾಪಾರ ಮಾಡುವಂತೆ ಹೇಳಿಕೆ ನೀಡಿದ್ದರು. ಈ ರೀತಿಯ ನಡೆಯನ್ನು ಜಾತ್ಯತೀತ ಪಕ್ಷಗಳ ನಾಯಕರು ಖಂಡಿಸಿ, ಇದರಿಂದ ಕೋಮು ಸಾಮರಸ್ಯಕ್ಕೆ ಧಕ್ಕೆ ಉಂಟಾಗುವ ಸಾಧ್ಯತೆ ಇದೆಯೆಂದು ಆಕ್ರೋಶ ವ್ಯಕ್ತಪಡಿಸಿದ್ದರು. ಅಲ್ಲದೆ, ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರಿಗೆ ದೂರು ಕೊಟ್ಟು ಕ್ರಮಕ್ಕೆ ಆಗ್ರಹಿಸಿದ್ದರು.
ಇದರಂತೆ, ಪಾಂಡೇಶ್ವರ ಠಾಣೆಯ ಕಾನೂನು ಸುವ್ಯವಸ್ಥೆ ವಿಭಾಗದ ಎಸ್ಐ ಮನೋಹರ್ ಪ್ರಸಾದ್ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿದ್ದಾರೆ. ಶರಣ್ ಪಂಪ್‌ವೆಲ್ ಮತ್ತಿತರರ ವಿರುದ್ಧ ಪಾಂಡೇಶ್ವರ ಠಾಣೆಯಲ್ಲಿ ಐಪಿಸಿ 153 ಎ ಅಡಿಯಲ್ಲಿ ಪ್ರಚೋದನೆಗೆ ಯತ್ನಿಸಿದ ಬಗ್ಗೆ ಪ್ರಕರಣ ದಾಖಲಿಸಿದ್ದಾರೆ. ಸಚಿವ ದಿನೇಶ್ ಗುಂಡೂರಾವ್ ಅವರನ್ನು ಬುಧವಾರ ಬೆಳಗ್ಗೆ ಜಾತ್ರಾ ವ್ಯಾಪಾರಸ್ಥರು, ಬೀದಿ ವ್ಯಾಪಾರಿಗಳು ಹಾಗೂ ಡಿವೈಎಫ್ಐ ಸಂಘಟನೆಗಳ ನಿಯೋಗ ಭೇಟಿ ಮಾಡಿ ಮನವಿ ಸಲ್ಲಿಸಿತ್ತು. ಅಲ್ಲದೆ, ಶರಣ್ ಪಂಪ್ವೆಲ್ ವಿರುದ್ದ ಪ್ರಕರಣ ದಾಖಲಿಸಿ ಬಂಧಿಸಲು ಆಗ್ರಹಿಸಿದ್ದರು.
Mangalore Sumoto case registered against VHP Sharan Pumpwell over Mangaladevi temple saffron row.
29-08-26 10:49 pm
HK News Staffer
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
ನಾಗೇಂದ್ರ ರಾಜಿನಾಮೆ ನೀಡಿದ್ರೂ ಬಿಜೆಪಿ ಪಾದಯಾತ್ರೆ ಮ...
29-08-26 10:38 pm
ಸಿನಿಮಾಗಳಲ್ಲಿ ಮಹಿಳೆಯನ್ನು ಭೋಗದ ವಸ್ತುವನ್ನಾಗಿ ತೋರ...
28-08-26 09:35 pm
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
29-08-26 10:25 pm
HK News Staffer
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm