ಬ್ರೇಕಿಂಗ್ ನ್ಯೂಸ್
22-10-23 10:22 pm Mangaluru Correspondent ಕರಾವಳಿ
ಮಂಗಳೂರು, ಅ.22: ವಾಮಂಜೂರಿನ ಪಿಲಿಕುಳದ ಬಳಿ 2019ರಿಂದ ಕಾರ್ಯ ನಿರ್ವಹಿಸುತ್ತಿರುವ ವೈಟ್ ಗ್ರೋವ್ ಹೆಸರಿನ ಅಣಬೆ ಉತ್ಪಾದನೆ ಕೇಂದ್ರದ ಬಗ್ಗೆ ರಾಜಕೀಯ ಪ್ರೇರಿತವಾಗಿ ಸುಳ್ಳು ಸುದ್ದಿ ಹಬ್ಬಿಸುತ್ತಿದ್ದಾರೆಂದು ಅದರ ಮಾಲಕರು ಸೈಬರ್ ಠಾಣೆಯಲ್ಲಿ ದೂರು ನೀಡಿದ್ದಾರೆ.
ಮಾಜಿ ಶಾಸಕ ಜೆ.ಆರ್ ಲೋಬೊ ವೈಟ್ ಗ್ರೋವ್ ಸಂಸ್ಥೆಯಲ್ಲಿ ಪಾಲುದಾರಿಕೆ ಹೊಂದಿದ್ದು ಸಾರ್ವಜನಿಕವಾಗಿ ಗುರುತಿಸಿಕೊಂಡಿದ್ದಾರೆ. 2019ರಲ್ಲಿ ಕೇಂದ್ರ ಸರ್ಕಾರದ ಸಣ್ಣ ಕೈಗಾರಿಕಾ ಸಚಿವಾಲಯದಲ್ಲಿ ಮೈಕ್ರೋ ಯೂನಿಟ್ ಎಂದು ನೋಂದಣಿ ಮಾಡಿ ಆರಂಭಿಸಲಾಗಿತ್ತು. ಕೇಂದ್ರದಲ್ಲಿ ಅಣಬೆ ಕೃಷಿ ಜೊತೆಗೆ ತೋಟಗಾರಿಕೆ ಕೆಲಸವನ್ನೂ ಎರಡು ವರ್ಷಗಳಿಂದ ಮಾಡಿಕೊಂಡಿದ್ದಾರೆ.


ಇದಕ್ಕಾಗಿ ಮಂಗಳೂರು ಮಹಾನಗರ ಪಾಲಿಕೆ ಮತ್ತು ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ ನಿರಾಕ್ಷೇಪಣಾ ಪತ್ರವನ್ನು ಪಡೆದಿದ್ದಾರೆ. ಆರಂಭದ ಎರಡು ವರ್ಷ ಕಾಲ ಯಾವುದೇ ಆಕ್ಷೇಪ ಇಲ್ಲದೆ ಅಣಬೆ ಕೃಷಿ ನಡೆದು ಬಂದಿದ್ದು 2023ರ ಫೆಬ್ರವರಿ ತಿಂಗಳಲ್ಲಿ ದಿಢೀರ್ ಆಗಿ ರಾಜಕೀಯ ಪ್ರೇರಿತವಾಗಿ ಕೆಲವರು ದುರ್ವಾಸನೆ ಬರುತ್ತಿರುವ ಬಗ್ಗೆ ಸುಳ್ಳು ಆರೋಪ ಮಾಡಿದ್ದಾರೆ. ರಾಸಾಯನಿಕ ಬಳಸುತ್ತಿದ್ದಾರೆ ಎಂದು ಗುಲ್ಲು ಎಬ್ಬಿಸಿದ್ದಾರೆ. ಈ ಬಗ್ಗೆ ತಜ್ಞರ ಸಮಿತಿಯಿಂದ ವರದಿ ಪಡೆದ ಜಿಲ್ಲಾಧಿಕಾರಿಯವರು ಗೊಬ್ಬರ ಮುಚ್ಚುವ ಆದೇಶ ಹಿಂಪಡೆದು ಕಾಂಪೋಸ್ಟ್ ಮಾಡುವಂತೆ ಸೂಚಿಸಿದ್ದರು.
ಅದರಂತೆ ಅಣಬೆ ಕೃಷಿ ಮತ್ತೆ ಆರಂಭಿಸಿದ್ದರೂ, ಒಂದು ಗುಂಪು ಸುಳ್ಳು ಮತ್ತು ಮಾನಹಾನಿಕರ ಸುದ್ದಿಗಳನ್ನು ಜಾಲತಾಣದಲ್ಲಿ ಹರಿಯ ಬಿಡುತ್ತಿದ್ದಾರೆ. ವಾಟ್ಸಾಪ್, ಫೇಸ್ಬುಕ್, ಯೂಟ್ಯೂಬ್, ಇನ್ಸ್ ಟಾ ಗ್ರಾಮ್ ಗಳಲ್ಲಿ ಸಂದೇಶ ಹರಡುತ್ತಿದ್ದಾರೆ. ನಮ್ಮ ಅಣಬೆ ಘಟಕದ ಚಟುವಟಿಕೆಗಳಿಂದ ಯಾವುದೇ ಕೆಟ್ಟ ವಾಸನೆ ಉತ್ಪತ್ತಿಯಾಗುವುದಿಲ್ಲ. ಉದ್ದೇಶಪೂರ್ವಕ ಸುಳ್ಳು ಸುದ್ದಿಗಳನ್ನು ಹರಿಯಬಿಡುತ್ತಿದ್ದು ಮುಗ್ಧ ಜನರು ಅದನ್ನು ನಂಬಿ ಉದ್ರಿಕ್ತ ಪರಿಸ್ಥಿತಿ ತಲೆದೋರುವಂತೆ ಮಾಡಿದ್ದಾರೆ. ಈ ಬಗ್ಗೆ ಕ್ರಮ ಕೈಗೊಳ್ಳುವಂತೆ ದೂರಿನಲ್ಲಿ ತಿಳಿಸಿದ್ದಾರೆ.
The foul smell from the White Grove Agri mushroom factory at Vamanjoor is false, says MD and former MLA JR Lobo in Mangalore, who now has filed a police complaint. Residents of Vamanjoor raised a complaint against Whitegrove Agri LLP over the foul smell and how children have been affected and hospitalized.
29-08-26 10:49 pm
HK News Staffer
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
ನಾಗೇಂದ್ರ ರಾಜಿನಾಮೆ ನೀಡಿದ್ರೂ ಬಿಜೆಪಿ ಪಾದಯಾತ್ರೆ ಮ...
29-08-26 10:38 pm
ಸಿನಿಮಾಗಳಲ್ಲಿ ಮಹಿಳೆಯನ್ನು ಭೋಗದ ವಸ್ತುವನ್ನಾಗಿ ತೋರ...
28-08-26 09:35 pm
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
29-08-26 10:25 pm
HK News Staffer
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm