ಬ್ರೇಕಿಂಗ್ ನ್ಯೂಸ್
28-10-23 05:00 pm Mangalore Correspondent ಕರಾವಳಿ
ಮಂಗಳೂರು, ಅ.28: ಕಾಂಗ್ರೆಸ್ ಶಾಸಕರಿಗೆ ಬಿಜೆಪಿಯವರು 50 ಕೋಟಿ ಆಫರ್ ಮಾಡಿದ್ದಾರೆ ಎಂಬ ಆರೋಪದ ಬಗ್ಗೆ ಪ್ರತಿಕ್ರಿಯೆ ನೀಡಿರುವ ಸಿಎಂ ಸಿದ್ದರಾಮಯ್ಯ, 50 ಕೋಟಿ ಆಫರ್ ಬಗ್ಗೆ ನನಗೇನು ಗೊತ್ತಿಲ್ಲ, ಅದನ್ನು ಹೇಳಿರುವ ರವಿ ಹತ್ತಿರನೇ ಕೇಳಿ. ಯಾರು ಹೇಳಿದ್ರೋ ಅವರತ್ರ ಕೇಳಿ, ನನಗೆ ಯಾವುದೇ ಮಾಹಿತಿ ಬಂದಿಲ್ಲ ಎಂದು ಹೇಳಿದ್ದಾರೆ.
ಉಡುಪಿಗೆ ತೆರಳಲು ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದ ಅವರು, ಬಿಜೆಪಿಯವರು ನಮ್ಮ ಸರ್ಕಾರವನ್ನು ಅಸ್ಥಿರ ಮಾಡಲು ಪ್ರಯತ್ನಿಸ್ತಿದಾರೆ ಅನ್ನೋ ಮಾಹಿತಿ ಇದೆ. 50 ಕೋಟಿ ಕೊಟ್ಟು ಅಧಿಕಾರ ಆಫರ್ ಮಾಡ್ತಾ ಇದಾರೆ ಅನ್ನೋ ಮಾಹಿತಿ ಇಲ್ಲ ಎಂದರು. ನಿನ್ನೆ ರಾತ್ರಿ ನೀವು ಪ್ರತ್ಯೇಕ ಮೀಟಿಂಗ್ ಮಾಡಿದ್ದೀರಾ ಎಂಬ ಪ್ರಶ್ನೆಗೆ, ಪರಮೇಶ್ವರ್ ಊಟಕ್ಕೆ ಕರೆದಿದ್ರು, ಹೋಗಿದೀವಿ, ಅದಕ್ಕೆ ಮಸಾಲೆ ಯಾಕೆ ಹಾಕ್ತೀರಾ.. ಅವರು ನನಗೆ, ಮಹಾದೇವಪ್ಪ, ಸತೀಶ್ ಜಾರಕಿಹೊಳಿಗೆ ಊಟಕ್ಕೆ ಕರೆದಿದ್ದರು. ಅಲ್ಲಿ ಯಾವುದೇ ರಾಜಕೀಯ ಇಲ್ಲ, ಅದೆಲ್ಲಾ ಸುಳ್ಳು, ಬಣ್ಣ ಕಟ್ಟಲಾಗ್ತಿದೆ ಎಂದು ಹೇಳಿದರು.
ಶಾಸಕ ಹರೀಶ್ ಪೂಂಜಾ, ಸಿಎಂ ಸಿದ್ದರಾಮಯ್ಯ ಅವರನ್ನು ಕಲೆಕ್ಷನ್ ಮಾಸ್ಟರ್ ಎಂದು ಹೇಳಿರುವ ಕುರಿತು ಕೇಳಿದ್ದಕ್ಕೆ, ಆತ ಶಾಸಕನಾಗಿರೋದು ಮೊನ್ನೆಯಷ್ಟೇ. ನಾನು 83ರಿಂದ ಶಾಸಕನಾಗಿದ್ದೇನೆ, 85ರಲ್ಲೇ ಮಿನಿಸ್ಟರ್ ಆಗಿದ್ದವನು. ಆವತ್ತು ಯಾರು ನನ್ನನ್ನು ಈ ರೀತಿ ಕರೆದಿರಲಿಲ್ಲ. ಇವರು ಪಾಪ ಇನ್ನೂ ರಾಜಕೀಯದಲ್ಲಿ ಬಚ್ಚಾ. ಹಿಂದಿನ ಬಿಜೆಪಿ ಮುಖ್ಯಮಂತ್ರಿಗಳಿಗೆ ಹಾಗೆ ಹೇಳಲಿ ಎಂದು ಹೇಳಿದರು.

ನಿಗಮ ಮಂಡಳಿಗೆ ಯಾವಾಗ ನೇಮಕ ಆಗುತ್ತೆ ಎಂಬ ಪ್ರಶ್ನೆಗೆ, ಮೊದಲ ಹಂತದಲ್ಲಿ ಕೆಲವು ಶಾಸಕರಿಗೆ ನಿಗಮ ಮಂಡಳಿ ಕೊಡ್ತೇವೆ. ಎರಡನೇ ಹಂತದಲ್ಲಿ ಕಾರ್ಯಕರ್ತರು, ನಾಯಕರಿಗೆ ಅವಕಾಶ ಕೊಡುತ್ತೇವೆ. ಶೀಘ್ರವಾಗಿ ಹಂಚಿಕೆ ಆಗಲಿದೆ ಎಂದರು. ಬರ ಪರಿಹಾರದ ಕುರಿತ ಪ್ರಶ್ನೆಗೆ, ನಾವು ಬರ ಪರಿಹಾರ 7900 ಕೋಟಿ ರೂ. ಕೇಳಿದ್ದೇವೆ. ಆದರೆ ಕೇಂದ್ರ ಸರ್ಕಾರ ಒಂದು ರೂಪಾಯಿ ಪರಿಹಾರ ಕೊಟ್ಟಿಲ್ಲ. ಕೇಂದ್ರ ಸರ್ಕಾರ ಕರ್ನಾಟಕದ ಬಗ್ಗೆ ಮಲತಾಯಿ ಧೋರಣೆ ಹೊಂದಿದೆ ಎಂದರು.
ಕಾರ್ಕಳದ ಪರಶುರಾಮ ಮೂರ್ತಿ ನಕಲಿಯೆಂದು ಕಾಂಗ್ರೆಸಿಗರೇ ಪ್ರತಿಭಟನೆ ನಡೆಸುತ್ತಿದ್ದಾರೆ, ನೀವು ಯಾಕೆ ತನಿಖೆ ಮಾಡಿಸುತ್ತಿಲ್ಲ ಎಂಬ ಪ್ರಶ್ನೆಗೆ, ಮೂರ್ತಿ ಅಸಲಿಯಾ, ನಕಲಿಯಾ ಎಂದು ತನಿಖೆ ಮಾಡಿಸಲಾಗುವುದು ಎಂದು ಒಂದು ಗೆರೆಯ ಉತ್ತರ ಹೇಳಿದರು. ಸೌಜನ್ಯಾ ಕೊಲೆ ಪ್ರಕರಣವನ್ನು ಮರು ತನಿಖೆ ಮಾಡಿಸುತ್ತೀರಾ ಎಂಬ ಪ್ರಶ್ನೆಗೆ, ನಾವು ಮರು ತನಿಖೆ ಮಾಡಿಸುವ ಪ್ರಶ್ನೆ ಬರುವುದಿಲ್ಲ. ಪ್ರಕರಣ ಈಗ ಸಿಬಿಐನಲ್ಲಿದ್ದು ಕೇಂದ್ರ ಸರ್ಕಾರದ ಕೈಯಲ್ಲಿದೆ. ಅವರೇ ಮರು ತನಿಖೆ ಮಾಡಿಸಬೇಕು. ಸಿಬಿಐ ಕೋರ್ಟ್ ಏನು ಹೇಳಿದೆಯೋ ಹಾಗೆ ಮಾಡಬೇಕು ಎಂದು ಹೇಳಿ ಜವಾಬ್ದಾರಿಯಿಂದ ಜಾರಿಕೊಂಡರು.
50 crore to Congress MLAs, Siddaramaiah slams BJP in Mangalore. Responding to queries about the BJP allegedly offering ₹50 crore to Congress MLAs to bring down his government, Mr Siddaramaiah said he had heard about attempts by the BJP to destabilise his government; but not about the cash offer.
10-11-25 07:17 pm
Bangalore Correspondent
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
11-11-25 10:56 pm
HK News Desk
Mangaluru Kasaragod Highway: ಮಂಗಳೂರು- ಕಾಸರಗೋಡ...
11-11-25 10:20 pm
ಕೆಂಪುಕೋಟೆ ಕಾರು ಬ್ಲಾಸ್ಟ್ ಪ್ರಕರಣ ; ಜೈಶ್ ಉಗ್ರರ ಲ...
11-11-25 03:28 pm
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
ದೆಹಲಿಯಲ್ಲಿ ಭಾರೀ ಬಾಂಬ್ ಸ್ಫೋಟ ; ಛಿದ್ರಗೊಂಡು ಚದುರ...
10-11-25 09:08 pm
11-11-25 10:42 pm
Mangalore Correspondent
Bomb blast in New Delhi, High Alert in Dakshi...
11-11-25 10:15 pm
Bhagvati Prem Ship, Mangalore: ಸುರತ್ಕಲ್ ; ಮರಳ...
08-11-25 08:31 pm
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
11-11-25 06:33 pm
Mangalore Correspondent
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm