ಬ್ರೇಕಿಂಗ್ ನ್ಯೂಸ್
31-10-23 01:13 pm Udupi Correspondent ಕರಾವಳಿ
ಕಾರ್ಕಳ, ಅ.31: ಹಿರಿಯ ಪತ್ರಕರ್ತ, ಸಾಹಿತ್ಯ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿದ್ದ ಶೇಖರ ಅಜೆಕಾರು (54) ಅವರು ಅ.31ರಂದು ಹೃದಯಾಘಾತಕ್ಕೀಡಾಗಿ ನಿಧನ ಹೊಂದಿದ್ದಾರೆ. ಮಂಗಳವಾರ ಬೆಳಗ್ಗೆ ಕಾರ್ಕಳದ ಅಜೆಕಾರಿನ ತನ್ನ ಮನೆಯಲ್ಲಿ ಕುಸಿದು ಬಿದ್ದ ಶೇಖರ್ ಅವರನ್ನು ತಕ್ಷಣ ಕಾರ್ಕಳ ಸರಕಾರಿ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಅಷ್ಟರಲ್ಲೇ ಅವರು ಸಾವು ಕಂಡಿದ್ದರು.
ಮುಂಬೈನಲ್ಲಿ ಕರ್ನಾಟಕ ಮಲ್ಲ ಪತ್ರಿಕೆಯಲ್ಲಿ ಪತ್ರಿಕಾ ವೃತ್ತಿ ಆರಂಭಿಸಿದ್ದ ಶೇಖರ ಅಜೆಕಾರು ಊರಿಗೆ ಬಂದ ಬಳಿಕ ಹಲವು ಪತ್ರಿಕೆಗಳಲ್ಲಿ ಪತ್ರಕರ್ತರಾಗಿ ಕೆಲಸ ಮಾಡಿದ್ದರು. ಜನವಾಹಿನಿ ಪತ್ರಿಕೆ ಆರಂಭಗೊಂಡಾಗ ಹಲವು ಒಡನಾಡಿಗಳ ಜೊತೆಗೆ ಆ ಪತ್ರಿಕೆಯನ್ನು ಸೇರಿದ್ದರು. ಬಳಿಕ ಕನ್ನಡ ಪ್ರಭ, ವಿಜಯ ಕರ್ನಾಟಕ ಪತ್ರಿಕೆಗಳಿಗೆ ಸುದ್ದಿ ಬರೆಯುತ್ತಿದ್ದರು. ಇತ್ತೀಚಿನ ದಿನಗಳಲ್ಲಿ ಪತ್ರಿಕಾ ವೃತ್ತಿಯ ಜೊತೆಗೆ ಸಾಹಿತ್ಯ ಕಾರ್ಯಕ್ರಮಗಳಲ್ಲಿ ತೊಡಗಿಸಿದ್ದರು. ಬೆಳದಿಂಗಳ ಸಾಹಿತ್ಯ ಸಮ್ಮೇಳನ, ಕವಿಗೋಷ್ಟಿ ರೀತಿಯ ವಿಭಿನ್ನ ಕಾರ್ಯಕ್ರಮಗಳನ್ನು ಸಂಘಟಿಸಿ ಗಮನ ಸೆಳೆದಿದ್ದರು.
ಹಲವಾರು ಪ್ರತಿಭೆಗಳನ್ನು ಗುರುತಿಸಿ ಪ್ರಶಸ್ತಿ ನೀಡುತ್ತಿದ್ದ ಶೇಖರ್ ಅಜೆಕಾರು ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯ ಪತ್ರಕರ್ತರಿಗೆ ಚಿರಪರಿಚಿತ ಹೆಸರು. ಅವರಿಗೆ ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ, ರಾಷ್ಟ್ರೀಯ ಬಸವಶ್ರೀ ಅವಾರ್ಡ್ 2018, ಕೃಷಿ ಬಂಧು 2019, ರಾಷ್ಟ್ರೀಯ ಸಂಗೊಳ್ಳಿ ರಾಯಣ್ಣ ಪ್ರಶಸ್ತಿ, ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪ್ರಶಸ್ತಿ 2019, ವಿಶ್ವ ದರ್ಶನ ಸಾಹಿತ್ಯ ಪ್ರಶಸ್ತಿ 2019, ಶಿಖಾ ಭಾರತ ಪ್ರಶಸ್ತಿ ಸೇರಿದಂತೆ ಹತ್ತಾರು ಪ್ರಶಸ್ತಿಗಳಿಗೆ ಭಾಜನರಾಗಿದ್ದರು. ಮೃತರು ಪತ್ನಿ, ಓರ್ವ ಪುತ್ರ ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ.
Renowned writer, journalist Shekhar Ajekar passes away. Renowned writer, journalist Shekar Ajekar passed away on Tuesday October 31 due to cardiac arrest. Shekar Ajekar was actively involved in various social service oriented organisations and also a known name in the literature fraternity.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm