ಬ್ರೇಕಿಂಗ್ ನ್ಯೂಸ್

Forensic Expert Dr Mahabala Shetty, Dharmasthala case: ಧರ್ಮಸ್ಥಳ ಸ್ನಾನಘಟ್ಟ ಬಳಿ 20ಕ್ಕೂ ಹೆಚ್ಚು ಕೊಳೆತ ಶವಗಳನ್ನು ಪೋಸ್ಟ್ ಮಾರ್ಟಂ ಮಾಡಿದ್ದೆ, ಅವನ್ನು ಅಲ್ಲಿಯೇ ಹೂಳಲಾಗಿತ್ತು ; ಪ್ರಕರಣಕ್ಕೆ ಸ್ಫೋಟಕ ತಿರುವು ಕೊಟ್ಟ ಫಾರೆನ್ಸಿಕ್ ತಜ್ಞ ಡಾ.ಮಹಾಬಲ ಶೆಟ್ಟಿ    |    ಕನಸು ಕಮರಿಸಿದ ಅಪಘಾತ ; ವೈದ್ಯರ ಎಡವಟ್ಟು, ಸಕಾಲದಲ್ಲಿ ಚಿಕಿತ್ಸೆ ಸಿಗದೆ ಕೈಕಾಲಿನ ಶಕ್ತಿಯೇ ಊನ, ಕಂಗೆಟ್ಟ ವಿಶ್ವಕರ್ಮ ಕುಟುಂಬಕ್ಕೆ ಕ್ರಿಶ್ಚಿಯನ್ ಗೆಳೆಯರ ಆಸರೆ ! ಅರ್ಧಕ್ಕೆ ಉಳಿದುಬಿಟ್ಟ ಮನೆಗೆ ದಿಕ್ಕಿಲ್ಲದ ಸ್ಥಿತಿ, ಬೆಳಕು ಹರಿಸೀತೆ ಸಹೃದಯರ ಹಾರೈಕೆ ?!    |    Kannada Producer Ganesh, Film Dharmasthala File, Movie: 'ಧರ್ಮಸ್ಥಳ ಫೈಲ್ಸ್' ಸಿನಿಮಾ ಘೋಷಿಸಿದ ಕನ್ನಡದ ನಿರ್ಮಾಪಕ ಎ. ಗಣೇಶ್ ; ಸಮಸ್ಯೆ ಆದ್ರೆ ಚಿತ್ರತಂಡವೇ ಹೊಣೆ ಎಂಬ ಕಂಡೀಷನ್! ಕತೆ ಇನ್ನಷ್ಟೇ ಬರೆಸಬೇಕೆಂದ ಚಿತ್ರತಂಡ     |   

ತುರ್ತು ಪರಿಸ್ಥಿತಿಯಲ್ಲಿ ಮಿಂಚಿನ ಕಾರ್ಯಾಚರಣೆ ; ಬಾವಿಗೆ ಬಿದ್ದ ಅಜ್ಜಿಯನ್ನು ರಕ್ಷಿಸಿದ ಉಡುಪಿ ಎಸ್.ಐ

06-08-20 10:31 am       Udupi Reporter   ಕರಾವಳಿ

ಬಾವಿಗೆ ಬಿದ್ದ ವೃದ್ಧೆಯನ್ನು ನಗರ ಠಾಣೆಯ ಎಸ್‍ಐ ರಕ್ಷಿಸಿರುವ ಘಟನೆ ಉಡುಪಿಯಲ್ಲಿ ನಡೆದಿದೆ. ಉಡುಪಿ ನಗರದ ಹೊರ ವಲಯದ ಮಾರ್ಪಳ್ಳಿ ಎಂಬಲ್ಲಿ ರಕ್ಷಣಾ ಕಾರ್ಯ ನಡೆದಿದೆ.

ಉಡುಪಿ, ಆಗಸ್ಟ್ 06: ಆಕಸ್ಮಿಕವಾಗಿ ಕಾಲು ಜಾರಿ ಬಾವಿಗೆ ಬಿದ್ದಿದ್ದ ವೃದ್ಧೆಯನ್ನು ಪೊಲೀಸ್ ಅಧಿಕಾರಿ ಸೇರಿದಂತೆ ಅಗ್ನಿಶಾಮಕ ದಳದ ಸಿಬ್ಬಂದಿ ಹಾಗು ಸ್ಥಳೀಯ ಆಟೋ ಚಾಲಕರು ಜೀವದ ಹಂಗು ತೊರೆದು ರಕ್ಷಿಸಿದ ಘಟನೆ ಉಡುಪಿಯಲ್ಲಿ ಬೆಳಕಿಗೆ ಬಂದಿದೆ. ನಗರದ ಹೊರ ವಲಯದ ಕುಕ್ಕಿಕಟ್ಟೆ ಮಾರ್ಪಳ್ಳಿಯಲ್ಲಿ ಈ ಘಟನೆ ನಡೆದಿದೆ.  

ಕುಕ್ಕಿಕಟ್ಟೆಯ ವೃದ್ಧೆಯೊರ್ವರು ಮನೆಯ ಬಾವಿಗೆ ಕಾಲು ಜಾರಿ ಆಕಸ್ಮಿಕವಾಗಿ ಬಿದ್ದಿದ್ದರು. ಜೀವನ್ಮರಣದ ಸ್ಥಿತಿಯಲ್ಲಿದ್ದ ಅವರ ರಕ್ಷಣೆಗೆ ಯಾರು ಮುಂದಾಗದ ಕಾರಣ ತಕ್ಷಣ ಪೊಲೀಸ್ ಠಾಣೆಗೆ ಮಾಹಿತಿ ನೀಡಲಾಗಿದೆ. ಗಸ್ತಿನಲ್ಲಿದ್ದ ಎಸ್ ಐ ಸದಾಶಿವ ರಾ. ಗವರೋಜಿ ಅವರಿಗೆ ವಾಕಿ ಮೂಲಕ ಸಂದೇಶ ಸಿಕ್ಕಿದೆ. ಈ ಹಿನ್ನೆಲೆಯಲ್ಲಿ ಕೂಡಲೇ ಸ್ಥಳಕ್ಕಾಗಲಿಸಿದ್ದಾರೆ.

ಎಸ್‍ಐ, ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಸ್ಥಳೀಯ ಆಟೋ ಚಾಲಕರೊಬ್ಬರು ತಮ್ಮ ಜೀವದ ಹಂಗು ತೊರೆದು ಕೂಡಲೇ ಬಾವಿಗಿಳಿದು ವೃದ್ದೆಯನ್ನು ರಕ್ಷಿಸಿದ್ದಾರೆ.

ತುರ್ತು ಸಂದರ್ಭದಲ್ಲಿ ತಮ್ಮ ಜೀವದ ಹಂಗು ತೊರೆದು ಬಾವಿಗಿಳಿದು ವೃದ್ದೆಯನ್ನು ರಕ್ಷಿಸಿದ ಈ ಮೂವರ ಕಾರ್ಯಕ್ಕೆ ಸ್ಥಳೀಯರು ಮೆಚ್ಚುಗೆ ವ್ಯಕ್ತಪಡಿಸಿದ್ದು ಉಡುಪಿ ಜಿಲ್ಲಾ ನಾಗರಿಕ ಸಮಿತಿಯ ಸಂಚಾಲಕರಾದ ನಿತ್ಯಾನಂದ ಒಳಕಾಡು, ತಾರಾನಾಥ್ ಮೇಸ್ತ ಶಿರೂರು ಅವರು ಅಭಿನಂದಿಸಿದ್ದಾರೆ.