ಬ್ರೇಕಿಂಗ್ ನ್ಯೂಸ್
23-11-23 10:14 pm Mangalore Correspondent ಕರಾವಳಿ
ಮಂಗಳೂರು, ನ.23: ಪರಿಶಿಷ್ಟ ಜಾತಿಯ ಗುತ್ತಿಗೆದಾರ ಮಹಿಳೆಯೊಬ್ಬರನ್ನು ಬಿಜೆಪಿ ಕಾರ್ಪೊರೇಟರ್ ರೂಪಶ್ರೀ ಜಾತಿ ಹೆಸರೆತ್ತಿ ನಿಂದಿಸಿದ್ದಾರೆಂದು ಕಂಕನಾಡಿ ನಗರ ಠಾಣೆಯಲ್ಲಿ ದೂರು ದಾಖಲಾಗಿದ್ದು, ಎಸ್ಸಿ ಎಸ್ಟಿ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.
ಮಂಗಳೂರು ನಗರದ ಸರಿಪಲ್ಲ- ಕನ್ನಗುಡ್ಡೆ ಎಂಬಲ್ಲಿ ಪಿಡಬ್ಲ್ಯುಡಿ ಇಲಾಖೆಯಿಂದ ಕಾಮಗಾರಿ ನಿರ್ವಹಿಸಲು ಅಮಲಾ ಜ್ಯೋತಿ ಎಂಬ ಪರಿಶಿಷ್ಟ ಜಾತಿಯ ಮಹಿಳಾ ಗುತ್ತಿಗೆದಾರರು ಟೆಂಡರ್ ಪಡೆದಿದ್ದರು. ಜುಲೈ 28ರಂದು ಟೆಂಡರ್ ಆಗಿದ್ದು, ಇದರಂತೆ ನ.23ರಂದು ಕನ್ನಗುಡ್ಡದ ನೂಜಿ ಎಂಬಲ್ಲಿ ಕೆಲಸ ನಿರ್ವಹಿಸಲು ಗುತ್ತಿಗೆದಾರರು ತೆರಳಿದ್ದರು. ಈ ಸಂದರ್ಭದಲ್ಲಿ ಸ್ಥಳೀಯ ಕಾರ್ಪೊರೇಟರ್ ಆಗಿರುವ ರೂಪಶ್ರೀ ಸ್ಥಳಕ್ಕೆ ಬಂದಿದ್ದು ನನ್ನ ಏರಿಯಾದಲ್ಲಿ ಯಾಕೆ ಟೆಂಡರ್ ಹಾಕಿದ್ದೀಯಾ.. ನಿನ್ನ ಜಾತಿಯವರಿಗೆ ಟೆಂಡರ್ ಹಾಕಲು ಬಿಡುವುದಿಲ್ಲ ಎಂದು ಹೀಯಾಳಿಸಿ ಬೈದಿದ್ದಾರೆಂದು ಗುತ್ತಿಗೆದಾರ ಮಹಿಳೆ ದೂರಿನಲ್ಲಿ ತಿಳಿಸಿದ್ದಾರೆ.
ಸಾರ್ವಜನಿಕರ ಮಧ್ಯೆ ನನ್ನನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದು, ಅಲ್ಲದೆ ಈ ಏರಿಯಾದಲ್ಲಿ ಕೆಲಸ ಆರಂಭಿಸಿದರೆ ಸುಮ್ಮನೆ ಬಿಡುವುದಿಲ್ಲ ಎಂದು ಕಾರ್ಪೊರೇಟರ್ ರೂಪಶ್ರೀ ಜೀವ ಬೆದರಿಕೆ ಹಾಕಿದ್ದಾರೆ. ಪರಿಶಿಷ್ಟ ಜಾತಿಗೆ ಸೇರಿದ ಮಹಿಳೆಯೆಂದು ತಿಳಿದಿದ್ದರೂ ಪಿಡಬ್ಲ್ಯುಡಿ ಇಂಜಿನಿಯರ್ ಎದುರಲ್ಲಿ ನಿಂದನೆ ಮಾಡಿದ್ದಾರೆಂದು ದೂರು ನೀಡಿದ್ದಾರೆ.
Mangalore Atrocity case booked against Corporator Roopashree in Mangalore over dispute with SC Contractor at Saripalla.
10-11-25 07:17 pm
Bangalore Correspondent
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
11-11-25 10:56 pm
HK News Desk
Mangaluru Kasaragod Highway: ಮಂಗಳೂರು- ಕಾಸರಗೋಡ...
11-11-25 10:20 pm
ಕೆಂಪುಕೋಟೆ ಕಾರು ಬ್ಲಾಸ್ಟ್ ಪ್ರಕರಣ ; ಜೈಶ್ ಉಗ್ರರ ಲ...
11-11-25 03:28 pm
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
ದೆಹಲಿಯಲ್ಲಿ ಭಾರೀ ಬಾಂಬ್ ಸ್ಫೋಟ ; ಛಿದ್ರಗೊಂಡು ಚದುರ...
10-11-25 09:08 pm
11-11-25 10:42 pm
Mangalore Correspondent
Bomb blast in New Delhi, High Alert in Dakshi...
11-11-25 10:15 pm
Bhagvati Prem Ship, Mangalore: ಸುರತ್ಕಲ್ ; ಮರಳ...
08-11-25 08:31 pm
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
11-11-25 06:33 pm
Mangalore Correspondent
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm