ಬ್ರೇಕಿಂಗ್ ನ್ಯೂಸ್
23-11-23 11:08 pm Mangalore Correspondent ಕರಾವಳಿ
ಮಂಗಳೂರು, ನ.23: ರಸ್ತೆ ಅಪಘಾತದಲ್ಲಿ ಕಾಲಿಗೆ ಗಾಯಗೊಂಡಿದ್ದ 16 ವರ್ಷದ ಬಾಲಕ ಕುಳಾಯಿ ನಿವಾಸಿ ಅರ್ಫಾನ್ ಎಂಬಾತ ಸುರತ್ಕಲ್ ಬಳಿಯ ಖಾಸಗಿ ಆಸ್ಪತ್ರೆ ಅಥರ್ವದಲ್ಲಿ ಮೃತಪಟ್ಟ ಘಟನೆ ಸಾರ್ವಜನಿಕರ ಆಕ್ರೋಶಕ್ಕೆ ತುತ್ತಾಗಿದೆ. ಇದೇ ವೇಳೆ, ಡಿವೈಎಫ್ಐ ಸಂಘಟನೆ ಸದಸ್ಯರು, ಬಾಲಕನಿಗೆ ವೈದ್ಯರು ನೀಡಿದ್ದ ಅತಿಯಾದ ಅನಸ್ತೇಶಿಯಾ ಇಂಜೆಕ್ಷನ್ ಕಾರಣದಿಂದಲೇ ಸಾವಾಗಿದೆ ಎಂದು ಆರೋಪಿಸಿದ್ದಾರೆ.
ವೈದ್ಯರ ನಿರ್ಲಕ್ಷ್ಯದಿಂದ ಬಾಲಕ ಮೃತಪಟ್ಟಿದ್ದಾನೆ ಎಂದು ಕುಟುಂಬಸ್ಥರು ಹಾಗು ಗ್ರಾಮಸ್ಥರು ಬುಧವಾರ ಸಂಜೆ ಆಸ್ಪತ್ರೆ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದ್ದರು. ಸ್ಥಳದಲ್ಲಿ ಉದ್ವಿಗ್ನ ಸ್ಥಿತಿ ನಿರ್ಮಾಣಗೊಂಡಿದ್ದರಿಂದ ಪೊಲೀಸರು ಭದ್ರತೆ ಕೈಗೊಂಡಿದ್ದರು. ಸ್ಥಳಕ್ಕೆ ಡಿವೈಎಫ್ಐ ಮುಖಂಡ ಮುನೀರ್ ಕಾಟಿಪಳ್ಳ,ಕಾಂಗ್ರೆಸ್ ಮುಖಂಡ ಇನಾಯತ್ ಅಲಿ, ಡಿವೈಎಫ್ಐ ಮುಖಂಡರಾದ ಬಿ.ಕೆ ಇಮ್ತಿಯಾಜ್, ಶ್ರೀನಾಥ್ ಕುಲಾಲ್, ಕಾಂಗ್ರೆಸ್ ಮುಖಂಡ ಪುರುಷೋತ್ತಮ ಚಿತ್ರಾಪುರ ಆಗಮಿಸಿ ಆಸ್ಪತ್ರೆ ಸಿಬಂದಿಯನ್ನು ತರಾಟೆಗೆ ತೆಗೆದುಕೊಂಡಿದ್ದರು.
ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಸೂಚನೆಯಂತೆ ಜಿಲ್ಲಾ ವೈದ್ಯಾಧಿಕಾರಿ ಡಾ. ತಿಮ್ಮಯ್ಯ ಸ್ಥಳಕ್ಕೆ ಆಗಮಿಸಿ ಕುಟುಂಬಸ್ಥರು ಮತ್ತು ಆಸ್ಪತ್ರೆ ಅಧಿಕಾರಿಗಳೊಂದಿಗೆ ಸಮಾಲೋಚಿಸಿದರು. ಮುಖಂಡರ ಬೇಡಿಕೆಯಂತೆ ಪ್ರಕರಣದ ತನಿಖೆಗಾಗಿ ಖಾಸಗಿ ವೈದ್ಯರನ್ನು ಒಳಗೊಂಡ ಎಂಟು ಜನ ತಜ್ಞ ವೈದ್ಯರ ತಂಡವನ್ನು ರಚಿಸುವುದಾಗಿ ತಿಳಿಸಿದರು. ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.
ಇದೇ ವೇಳೆ, ಡಿವೈಎಫ್ಐ ಪ್ರಮುಖ ಬಿಕೆ ಇಮ್ತಿಯಾಜ್ ಹೇಳಿಕೆ ನೀಡಿದ್ದು ಕಾಲಿನ ಗಾಯಕ್ಕೆ ಅನಸ್ತೇಶಿಯಾ ಇಂಜೆಕ್ಷನ್ ನೀಡಿದ್ದು ಅದು ಅತಿಯಾಗಿದ್ದರಿಂದಲೇ ಮತ್ತೆ ಪ್ರಜ್ಞೆ ಬಂದಿರಲಿಲ್ಲ. ಇದಕ್ಕೆ ವೈದ್ಯರ ನಿರ್ಲಕ್ಷ್ಯವೇ ಕಾರಣ. ಬಳಿಕ ಬಾಲಕನನ್ನು ಮಂಗಳೂರಿನ ಬೇರೆ ಆಸ್ಪತ್ರೆಗೆ ಒಯ್ಯಲು ಸೂಚಿಸಿದ್ದರು. ಕರೆದೊಯ್ಯುವ ವೇಳೆಗೆ ಬಾಲಕ ಮೃತಪಟ್ಟಿದ್ದ. ಇದಕ್ಕೆ ಕಾರಣವಾದ ಅಥರ್ವ ಆಸ್ಪತ್ರೆ ಲೈಸೆನ್ಸ್ ಕ್ಯಾನ್ಸಲ್ ಮಾಡಿ ಬಂದ್ ಮಾಡಬೇಕು ಎಂದು ಆಗ್ರಹಿಸಿದ್ದಾರೆ.
Death of boy after surgery in Mangalore, over dose of Anesthesia reason says DYFI. The death of a 16 year old boy who had sustained minor injuries in a road mishap, at a private hospital in Mukka where he was being treated, has sparked outrage among his family members and locals who staged a protest in front of the hospital on November 22, Wednesday blaming medical negligence for the death.
16-08-25 10:03 pm
Bangalore Correspondent
ಸೆ.9ರಂದು ಉಪ ರಾಷ್ಟ್ರಪತಿ ಚುನಾವಣೆ ; ಬಿಹಾರ ರಾಜ್ಯಪ...
16-08-25 09:58 pm
Dharmasthala, Eshwar kandre: ಧರ್ಮಸ್ಥಳ ತಲೆಬುರು...
16-08-25 09:15 pm
BJP, Dharmasthala, DK Shivakumar, SIT Probe:...
16-08-25 08:05 pm
ಧರ್ಮಸ್ಥಳ ಪ್ರಕರಣದಲ್ಲಿ ಸುಳ್ಳು ಹೇಳಿ, ಅಪಪ್ರಚಾರ ಮಾ...
15-08-25 10:29 pm
17-08-25 03:02 pm
HK News Desk
ಭಾರತಕ್ಕೆ ಮರಳಿದ ಗಗನಯಾತ್ರಿ ಶುಭಾಂಶು ಶುಕ್ಲಾ ; ದೆಹ...
17-08-25 12:54 pm
Dharmasthala, Dk Shivakumar, Pralhad Joshi: ಧ...
16-08-25 03:34 pm
ಕೆಂಪುಕೋಟೆಯಲ್ಲಿ ಸತತ 12ನೇ ಬಾರಿಗೆ ಸ್ವಾತಂತ್ರ್ಯೋತ್...
15-08-25 08:46 pm
ಜಮ್ಮು -ಕಾಶ್ಮೀರದಲ್ಲಿ ಭೀಕರ ಮೇಘಸ್ಫೋಟ: 46 ಜನ ಮೃತ್...
15-08-25 01:32 pm
16-08-25 11:11 pm
Mangalore Correspondent
Dharmasthala, BJP MLA S.R. Vishwanath: ಸೌಜನ್ಯ...
16-08-25 09:19 pm
ಕಾವೂರು ಮೊಸರು ಕುಡಿಕೆ ಉತ್ಸವದಲ್ಲಿ ಡಿಜೆ ಬಳಕೆ ; ಸೌ...
16-08-25 08:26 pm
Dharmasthala Panchayat, RTI: 38 ವರ್ಷಗಳಲ್ಲಿ 27...
16-08-25 04:45 pm
Expert PU College Announces ‘Xcelerate 2025’...
15-08-25 09:04 pm
16-08-25 10:49 pm
Mangalore Correspondent
Bengaluru Woman Hurls Abuses at Traffic Cops:...
16-08-25 07:06 pm
ಉತ್ತರ ಪ್ರದೇಶದಲ್ಲಿ ಮತ್ತೊಂದು ಮತಾಂತರ ಜಾಲ ; ಹಿಂದು...
16-08-25 11:25 am
Gold Robbery, Mangalore, Kerala: ಕೇರಳದ ಚಿನ್ನದ...
16-08-25 10:20 am
Headline karnataka Impact, Lucky Scheme, Frau...
15-08-25 09:22 pm