ಬ್ರೇಕಿಂಗ್ ನ್ಯೂಸ್
16-11-20 03:27 pm Mangaluru Correspondent ಕರಾವಳಿ
ಉಳ್ಳಾಲ: ನವೆಂಬರ್, 16: ತೊಕ್ಕೊಟ್ಟು ಸಮೀಪದ ಪಂಡಿತ್ ಹೌಸ್ ನಲ್ಲಿರುವ ಶಿಥಿಲಗೊಂಡಿರುವ ಹಳೆಯ ವಸತಿ ಮತ್ತು ವಾಣಿಜ್ಯ ಕಟ್ಟಡದ ಬಾಡಿಗೆ ಮನೆಯೊಂದರಲ್ಲಿ ಬೆಂಕಿ ಅವಘಡ ನಡೆದಿದ್ದು ಮನೆಯಲ್ಲಿದ್ದ ಒಂಟಿ ವಿಧವೆಯ ನಗ, ನಗದು, ಬಟ್ಟೆಬರೆಗಳು ಸುಟ್ಟು ಕರಕಲಾಗಿವೆ.
ವಿದ್ಯಾ ಶೆಟ್ಟಿ ಎಂಬ ಒಂಟಿ ಮಹಿಳೆ ಕಳೆದ ಎಂಟು ವರ್ಷಗಳಿಂದ ಪಂಡಿತ್ ಹೌಸ್ನ ವಿಜಯಾ ಕಾಂಪ್ಲೆಕ್ಸ್ ನ ಮೊದಲ ಮಹಡಿಯಲ್ಲಿ ಬಾಡಿಗೆ ವಾಸವಿದ್ದರೆನ್ನಲಾಗಿದೆ. ವಿದ್ಯಾ ಅವರು ನಗರದ ಕೆಎಮ್ ಸಿ ಆಸ್ಪತ್ರೆಯಲ್ಲಿ ಸಣ್ಣ ಉದ್ಯೋಗದಲ್ಲಿದ್ದು ಇಂದು ಬೆಳಗ್ಗೆ ಎಂದಿನಂತೆ ಮನೆಗೆ ಬೀಗ ಹಾಕಿ ಕೆಲಸಕ್ಕೆ ತೆರಳಿದ್ದು ಮಧ್ಯಾಹ್ನದ ಹೊತ್ತಿಗೆ ಮನೆಯೊಳಗೆ ಬೆಂಕಿ ಆಕಸ್ಮಿಕ ನಡೆದಿದ್ದು ಶಾರ್ಟ್ ಸರ್ಕ್ಯುಟ್ ನಿಂದ ಅನಾಹುತ ನಡೆದಿರುವುದಾಗಿ ಶಂಕಿಸಲಾಗಿದೆ.




ಅಗ್ನಿ ಶಾಮಕದಳ ಸಿಬ್ಬಂದಿಗಳು ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸಿದ್ದಾರೆ. ವಿದ್ಯಾ ಅವರು ಮನೆಯೊಳಗಿಟ್ಟಿದ್ದ 12,000 ರೂಪಾಯಿ ನಗದು ಸುಟ್ಟು ಹೋಗಿದ್ದು, ಟಿ.ವಿ. ಶೋಕೇಸ್ ಮೇಲಿಟ್ಟಿದ್ದ ಚಿನ್ನದ ಸರ, ಎರಡು ಉಂಗುರಗಳು ನಾಪತ್ತೆಯಾಗಿವೆ. ಮನೆಯೊಳಗಿನ ಕಪಾಟು, ಮಂಚ ಸಂಪೂರ್ಣ ಸುಟ್ಟು ಕರಕಲಾಗಿದೆ. ಉಳ್ಳಾಲ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಶಿಥಿಲ ಕಟ್ಟಡ, ಮಾಲಕನ ಅಮಾನುಷ ವರ್ತನೆ !
ಪಂಡಿತ್ ಹೌಸ್ ನಲ್ಲಿರುವ ವಿಜಯಾ ಕಾಂಪ್ಲೆಕ್ಸ್ ಕಟ್ಟಡ ಹಳೆಯದಾಗಿದ್ದು ಶಿಥಿಲಗೊಂಡಿದೆ. ವಿದ್ಯುತ್ ಸಂಪರ್ಕದ ತಂತಿಗಳು ಹಳೆಯದಾಗಿದ್ದು ನಾದುರಸ್ತಿ ಸ್ಥಿತಿಯಲ್ಲಿದೆ. ಘಟನೆಯಿಂದ ತನ್ನ ಸೊತ್ತನ್ನು ಕಳಕೊಂಡ ವಿದ್ಯಾ ಶೆಟ್ಟಿಯವರು ದುಃಖದಲ್ಲಿದ್ದು ಸ್ಥಳಕ್ಕಾಗಮಿಸಿದ ಕಟ್ಟಡ ಮಾಲಕ ವಿಧವೆಯ ವಿರುದ್ಧವೇ ಹರಿಹಾಯ್ದು ಮನೆ ಖಾಲಿ ಮಾಡುವಂತೆ ಮಾನವೀಯತೆ ಮರೆತು ವರ್ತಿಸಿದ್ದಾನೆಂದು ಸ್ಥಳೀಯರು ತಿಳಿಸಿದ್ದಾರೆ. ತೊಕ್ಕೊಟ್ಟು ಮತ್ತಿತರ ಕಡೆ ಬಾರ್ ಹೊಂದಿರುವ ಕಟ್ಟಡ ಮಾಲಕನ ಅಮಾನವೀಯತೆ ಬಗ್ಗೆ ಸ್ಥಳೀಯರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
Fire breaks out at old building in Thokottu, Mangalore. The Building also had a house in which a widow was residing is said to be completely gutted by the fire accident.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am