ಬ್ರೇಕಿಂಗ್ ನ್ಯೂಸ್
02-12-23 03:36 pm Mangalore Correspondent ಕರಾವಳಿ
ಮಂಗಳೂರು, ಡಿ.2: ರಾಜ್ಯಾದ್ಯಂತ ಡಯಾಲಿಸ್ ವ್ಯವಸ್ಥೆಯಲ್ಲಿ ಸಮಸ್ಯೆ ಇದೆ. ಅದನ್ನು ಸರಿಪಡಿಸುವ ಕೆಲಸ ಮಾಡುತ್ತಿದ್ದೇನೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಡಯಾಲಿಸಿಸ್ ವ್ಯವಸ್ಥೆಯಲ್ಲಿ ಗೊಂದಲದ ಬಗ್ಗೆ ಕೇಳಿದ ಪ್ರಶ್ನೆಗೆ, ನಾನು ಆರೋಗ್ಯ ಸಚಿವನಾಗಿ ಬರುವ ಮೊದಲೇ ಈ ಸಮಸ್ಯೆ ಇದೆ. ಹಿಂದಿನ ಸರ್ಕಾರ ಎರಡು ಏಜೆನ್ಸಿಗೆ ಗುತ್ತಿಗೆ ಕೊಟ್ಟಿತ್ತು. ಅದರಲ್ಲಿ ಒಬ್ಬರು ಅರ್ಧದಲ್ಲೇ ಬಿಟ್ಟಿದ್ದರು. ಏಜೆನ್ಸಿ ನಿರ್ವಹಣೆ ಸರಿಯಿರಲಿಲ್ಲ, ಸಿಬ್ಬಂದಿಗೆ ಸಂಬಳ ಸರಿಯಾಗಿ ಕೊಡ್ತಾ ಇರಲಿಲ್ಲ. ಅವರ ಇಎಸ್ ಐ, ಪಿಎಫ್ ಕಟ್ಟಿರಲಿಲ್ಲ, ರಾಜ್ಯ ಸರ್ಕಾರ ಕಟ್ಟಲು ನೋಡ್ತಾ ಇದೆ.
ಆದರೆ ಅದಕ್ಕೆ ಮೊದಲು ಆ ಏಜೆನ್ಸಿಯನ್ನು ಬ್ಲಾಕ್ ಲಿಸ್ಟ್ ಮಾಡೋ ಕೆಲಸ ಆಗ್ತಿದೆ. ಇದರ ಜೊತೆಗೆ ನಾಲ್ಕು ವಿಭಾಗದಲ್ಲಿ ಹೊಸ ಏಜೆನ್ಸಿಗಳಿಗೆ ಟೆಂಡರ್ ಪ್ರಕ್ರಿಯೆ ನಡೀತಾ ಇದೆ. ಡಯಾಲಿಸ್ ಮೆಷಿನ್ ಕೆಟ್ಟು ಹೋದ ಕಡೆ ಅದನ್ನ ಬದಲಾಯಿಸಲು ಆಗ್ತಿಲ್ಲ. ಈಗಿರೋ ಏಜೆನ್ಸಿ ಮಾಡಬೇಕು, ಅಥವಾ ಹೊಸ ಏಜೆನ್ಸಿ ಬಂದ ಬಳಿಕ ಮಾಡಬೇಕು. ಯಾವುದೂ ಆಗದೇ ಇದ್ದಲ್ಲಿ ಸರ್ಕಾರವೇ ನಿರ್ವಹಣೆ ಮಾಡೋ ಬಗ್ಗೆ ಚಿಂತನೆ ಇದೆ. ಸರ್ಕಾರವೇ ಮೆಷಿನ್ ಖರೀದಿಸಿ ನಿರ್ವಹಣೆ ಮಾಡಲು ಚಿಂತಿಸಿದೆ. ಟೆಂಡರ್ ಪ್ರಕ್ರಿಯೆ ಮುಗಿಯಲಿ, ಆ ಬಳಿಕ ನಿರ್ಧಾರ ಮಾಡೋಣ ಎಂದಿದ್ದಾರೆ.
ಡಯಾಲಿಸಸ್ ಸಿಬ್ಬಂದಿಯ ಬಗ್ಗೆ ನಮಗೆ ಕಾಳಜಿ ಇದೆ. ಅವರಿಗೆ ಯಾವುದೇ ಸಮಸ್ಯೆ ಆಗದಂತೆ ನಾವು ನೋಡಿಕೊಳ್ತೇವೆ ಎಂದು ಹೇಳಿದರು. ಮಂಗಳೂರಿನಲ್ಲಿ ಮತ್ತೆ ನೈತಿಕ ಪೊಲೀಸ್ ಗಿರಿ ಪ್ರಕರಣ ನಡೆದಿರುವ ಬಗ್ಗೆ ಕೇಳಿದ ಪ್ರಶ್ನೆಗೆ, ನೈತಿಕ ಪೊಲೀಸ್ ಗಿರಿ ಬಗ್ಗೆ ಕಟ್ಟುನಿಟ್ಟಿನ ಕ್ರಮಕ್ಕೆ ಸೂಚಿಸಿದ್ದೇವೆ. ಯಾರೇ ಕಾನೂನು ಕೈಗೆತ್ತಿಕೊಳ್ಳದಂತೆ ತಡೆಯಲು ಹೇಳಿದ್ದೇವೆ. ಕೋಮುವಾದ, ನೈತಿಕ ಪೊಲೀಸ್ ಗಿರಿ ನಮಗೆ ಅಗತ್ಯ ಇಲ್ಲ. ಜನರಿಗೆ ಜೀವನ ನಡೆಸಲು ಅಭಿವೃದ್ಧಿ ಬೇಕು, ಅದಷ್ಟೇ ಈಗಿನ ಅಗತ್ಯ. ಪ್ರಜಾಪ್ರಭುತ್ವದಲ್ಲಿ ಬೇರೆ ಏನೂ ಮಾಡಲು ಅವಕಾಶ ಇಲ್ಲ ಎಂದು ಹೇಳಿದರು.
Health minister Dinesh Gundu Rao on Saturday December 2, clarified on the chaos prevailing over the dialysis system in Karnataka and said, “The chaos over dialysis was existing even before I took charge as health minister. The earlier government had given the contract to two agencies.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm