ಬ್ರೇಕಿಂಗ್ ನ್ಯೂಸ್
07-12-23 03:29 pm Mangalore Correspondent ಕರಾವಳಿ
ಮಂಗಳೂರು, ಡಿ.7; ನವರಾತ್ರಿ ಸಂದರ್ಭದಲ್ಲಿ ಮಂಗಳಾದೇವಿ ದೇವಸ್ಥಾನದಲ್ಲಿ ಮುಸ್ಲಿಂ ವ್ಯಾಪಾರಸ್ಥರನ್ನು ದೂರ ಇರಿಸಿದ್ದ ನಡೆ ಈಗ ಬೇರೆ ಕಡೆಯೂ ಮರುಕಳಿಸಿದೆ. ಕುಡುಪು ಶ್ರೀ ಅನಂತ ಪದ್ಮನಾಭ ದೇವಸ್ಥಾನದಲ್ಲಿ ಷಷ್ಟಿ ಮಹೋತ್ಸವದ ಜಾತ್ರೆ ವ್ಯಾಪಾರದಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ಅವಕಾಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಈ ಮಧ್ಯೆ ವ್ಯಾಪಾರಿಗಳು ಡಿವೈಎಫ್ಐ ನೇತೃತ್ವದಲ್ಲಿ ದ.ಕ.ಜಿಲ್ಲಾಧಿಕಾರಿಗೆ ದೂರು ನೀಡಿದ್ದಾರೆ.
ಡಿ.14ರಿಂದ 19ರ ವರೆಗೆ ದೇವಸ್ಥಾನದಲ್ಲಿ ಷಷ್ಠಿ ಉತ್ಸವ ನಡೆಯಲಿದೆ. ಆದರೆ, ಉತ್ಸವದಲ್ಲಿ ವ್ಯಾಪಾರ ಮಾಡಲು ಮುಸ್ಲಿಮ್ ವ್ಯಾಪಾರಸ್ಥರು ಪೂರಕ ಪ್ರಕ್ರಿಯೆ ನಡೆಸಲು ಮುಂದಾಗಿರುವಾಗಲೇ, ಮುಸ್ಲಮರಿಗೆ ಅವಕಾಶ ನೀಡಬಾರದೆಂದು ಕೆಲವು ಸಂಘಟನೆಯವರು ಹೇಳಿದ್ದಾರೆ. ಹಾಗಾಗಿ, ನಿಮಗೆ ರಕ್ಷಣೆ ನೀಡಲು ನಮಗೆ ಸಾಧ್ಯವಿಲ್ಲ" ಎಂದು ದೇವಸ್ಥಾನ ಸಂಬಂಧಪಟ್ಟವರು ಹೇಳಿ ವ್ಯಾಪಾರ ಮಾಡದಂತೆ ಪರೋಕ್ಷ ತಡೆ ನೀಡಿದ್ದಾರೆ ಎನ್ನಲಾಗುತ್ತಿದೆ.
ರಾಜ್ಯ ಸರಕಾರದ ಧಾರ್ಮಿಕ ದತ್ತಿ ಇಲಾಖೆಗೆ ಸೇರಿದ ಈ ದೇವಸ್ಥಾನದ ಪ್ರಾಂಗಣದ ಹೊರಗಡೆ ನಡೆಯುವ ಸಂತೆ ವ್ಯಾಪಾರದಲ್ಲಿ ಧಾರ್ಮಿಕ ತಾರತಮ್ಯ ನಡೆಯುತ್ತಿರುವುದು ಖಂಡನೀಯ. ಜಾತ್ರೆಗಳನ್ನೇ ನಂಬಿ ಬದುಕುವ ಬಡ ಸಂತೆ ವ್ಯಾಪಾರಿಗಳ ಬದುಕುವ ಹಕ್ಕನ್ನು ರಕ್ಷಿಸಲು ಮತ್ತೆ ಜಿಲ್ಲಾಡಳಿತ ವಿಫಲವಾಗಿದೆ ಎಂದು ಡಿವೈಎಫ್ಐ ದ.ಕ.ಜಿಲ್ಲಾಧ್ಯಕ್ಷ ಬಿ.ಕೆ. ಇಮ್ತಿಯಾಝ್ ಆರೋಪಿಸಿದ್ದಾರೆ.
ಜಿಲ್ಲೆಯಲ್ಲಿ ಕಾಂಗ್ರೆಸ್ ಸರಕಾರ ಕೋಮುವಾದಿಗಳ ಕಪಿಮುಷ್ಟಿಯಲ್ಲಿ ನಲುಗುತ್ತಿದೆ. ಬಡ ಸಂತೆ ವ್ಯಾಪಾರಿಗಳ ಜೊತೆ ಸರಕಾರದ ನಿಂತಿಲ್ಲ. ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದರೂ ಕಠಿಣ ಕ್ರಮ ಕೈಗೊಳ್ಳದೆ, ಸಾಮರಸ್ಯ ಕೆಡಿಸಲು ಪರೋಕ್ಷ ಬೆಂಬಲ ನೀಡಿದೆ. ಈ ಬಗ್ಗೆ ಕ್ರಮ ಕೈಗೊಳ್ಳಲು ವಿಫಲವಾದ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರನ್ನು ಇಲ್ಲಿನ ಜವಾಬ್ದಾರಿಯಿಂದ ಮುಕ್ತಗೊಳಿಸಬೇಕು ಎಂದವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
Mangalore Mudipu temple, Muslim vendors not allowed for business, DYFI complaints.
17-10-26 07:30 pm
HK News Staffer
Davanagere Accident: ದಾವಣಗೆರೆ ; ಸಿಎನ್ಜಿ ಲಾರಿ...
16-10-26 09:49 pm
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
17-10-26 11:04 pm
Mangaluru Staffer
ಎಂಆರ್ ಪಿಎಲ್ ದುರಂತ ; ಮೃತ ರಾಜೇಶ್ ಡಿಸಿಲ್ವ ಕುಟುಂಬ...
17-10-26 07:34 pm
ಸೆ.30ರ ಸ್ಫೋಟ ಘಟನೆಯಲ್ಲಿ 118.76 ಕೋಟಿ ನಷ್ಟ ; ಎಂಆ...
17-10-26 12:25 pm
ಪದ್ಮಶ್ರೀ ಹಾಜಬ್ಬರಿಗೆ ಚುನಾವಣಾ ಆಯೋಗವು ನೋಟೀಸು ನೀಡ...
16-10-26 10:28 pm
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
17-10-26 11:09 am
HK News Staffer
LanchuLal, Astra Fraud, Mangalore: ‘ಅಕ್ಷಯ ಪಾತ...
16-10-26 03:37 pm
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am