ಬ್ರೇಕಿಂಗ್ ನ್ಯೂಸ್
06-08-20 01:52 pm Mangalore Reporter ಕರಾವಳಿ
ಮಂಗಳೂರು, ಆ. 6: ಕೋವಿಡ್ ನಿರ್ವಹಣೆಗೆ ಖಾಸಗೀ ಆಸ್ಪತ್ರೆಗಳು ಹಾಗೂ ಮೆಡಿಕಲ್ ಕಾಲೇಜುಗಳು ತಮ್ಮ ಹಾಸಿಗೆ ಸಾಮಥ್ಯ೯ದ ಶೇಕಡಾ 50 ರಷ್ಟನ್ನು ಸರಕಾರಕ್ಕೆ ಬಿಟ್ಟು ಕೊಡಲೇಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.
ಅವರು ಇಂದು ಕೋವಿಡ್ ನಿರ್ವಹಣೆ ಸಂಬಂಧ ಮಂಗಳೂರು ಉತ್ತರ ಶಾಸಕ ಡಾ. ಭರತ್ ಶೆಟ್ಟಿ ಅವರ ಮನವಿ ಮೇರೆಗೆ ಎ.ಜೆ ಆಸ್ಪತ್ರೆ ಹಾಗೂ ಶ್ರೀನಿವಾಸ ವೈದ್ಯಕೀಯ ಕಾಲೇಜುಗಳಿಗೆ ಭೇಟಿ ನೀಡಿ ಪರಿಶೀಲಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು ಸಾರ್ವಜನಿಕ ಆರೋಗ್ಯ ರಕ್ಷಣೆ ಸರಕಾರದ ಆದ್ಯತೆಯಾಗಿದೆ. ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಕೋರೋನಾ ಸೋಂಕಿತರ ಚಿಕಿತ್ಸೆಗೆ ಖಾಸಗೀ ಆಸ್ಪತ್ರೆಗಳು ಸರಕಾರದೊಂದಿಗೆ ಸಹಕರಿಸಬೇಕು. ರಾಜ್ಯ ಸರಕಾರವು ಆಯುಷ್ಮಾನ್ ಯೋಜನೆಯಡಿ ಕೋವಿಡ್ ರೋಗಿಗಳಿಗೆ ಉಚಿತ ಚಿಕಿತ್ಸೆ ನೀಡಲು ಉದ್ದೇಶಿಸಿದೆ. ಅಲ್ಲದೆ ಖಾಸಗಿಯಾಗಿ ಚಿಕಿತ್ಸೆ ಪಡೆಯುವ ಸೋಂಕಿತರಿಗೆ ಸರಕಾರ ನಿಗದಿಪಡಿಸಿದ ದರದಲ್ಲಿ ಚಿಕಿತ್ಸೆ ನೀಡಬೇಕು ಎಂದು ಅವರು ಸೂಚಿಸಿದರು.
ಖಾಸಗೀ ಆಸ್ಪತ್ರೆಗಳಿಗೆ ಸರಕಾರದಿಂದ ರಾಪಿಡ್ ಕಿಟ್ ಗಳನ್ನು ಸರಬರಾಜು ಮಾಡಲಾಗುತ್ತಿದ್ದು, ಉಚಿತವಾಗಿ ಕೋವಿಡ್ ಪರೀಕ್ಷೆ ನಡೆಸಲು ಸೂಚಿಸಲಾಗಿದೆ. ಸರಕಾರಿ ಆಸ್ಪತ್ರೆಗಳಲ್ಲಿ ಈಗಾಗಲೇ ಈ ಪರೀಕ್ಷೆ ನಡೆಯುತ್ತಿದೆ ಎಂದು ಅವರು ತಿಳಿಸಿದರು. ಜಿಲ್ಲೆಗೆ ರಾಜ್ಯ ಸರಕಾರವು 50 ವೆಂಟಿಲೇಟರ್ ಗಳನ್ನು ಸರಬರಾಜು ಮಾಡಲಿದೆ ಎಂದರು.

ಜಿಲ್ಲಾಧಿಕಾರಿ ಡಾ. ಕೆ.ವಿ. ರಾಜೇಂದ್ರ ಮಾತನಾಡಿ, ಆಸ್ಪತ್ರೆಗಳಲ್ಲಿ ಕೋವಿಡ್ ಚಿಕಿತ್ಸೆ ವಿವರ, ಶುಲ್ಕ ಮಾಹಿತಿ, ಆಯುಷ್ಮಾನ್ ಯೋಜನೆಯ ಸಮರ್ಪಕ ಮಾಹಿತಿಯನ್ನು ರೋಗಿಗಳು ದಾಖಲಾಗುವಾಗಲೇ ನೀಡಬೇಕು. ಆಸ್ಪತ್ರೆಯ ಪ್ರವೇಶ ದ್ವಾರದಲ್ಲಿ ದೊಡ್ಡ ಬೋಡ್೯ ಹಾಕಿ ವಿವರ ನಮೂದಿಸಬೇಕು ಎಂದು ಸೂಚಿಸಿದರು.
ಎಲ್ಲಾ ಮೆಡಿಕಲ್ ಕಾಲೇಜುಗಳು ಪ್ರತೀ ದಿನ 100 ಮಂದಿಯ ರ್ಯಾಪಿಡ್ ಆಂಟಿಜನ್ ಪರೀಕ್ಷೆಯನ್ನು ಉಚಿತವಾಗಿ ನಡೆಸಬೇಕು ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.
ಸಾರ್ವಜನಿಕರಿಗೆ ಆಯುಷ್ಮಾನ್ ಸೌಲಭ್ಯದ ಮಾಹಿತಿ ನೀಡಲು ಆರೋಗ್ಯ ಇಲಾಖೆ ವತಿಯಿಂದ ಪ್ರತೀ ಮೆಡಿಕಲ್ ಕಾಲೇಜು ಆಸ್ಪತ್ರೆಗಳಲ್ಲಿ ಆರೋಗ್ಯ ಮಿತ್ರ ಕಾರ್ಯಕರ್ತರನ್ನು ನೇಮಿಸಲಾಗಿದ್ದು, ಇವರು ಸಕ್ರಿಯವಾಗಿ ಕಾರ್ಯನಿರ್ವಹಿಸಬೇಕು. ನಿರ್ಲಕ್ಷ್ಯ ತೋರುವವರ ವಿರುದ್ಧ ಕ್ರಮ ಜರುಗಿಸುವುದಾಗಿ ಜಿಲ್ಲಾಧಿಕಾರಿಗಳು ಎಚ್ಚರಿಸಿದರು.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
24-08-26 01:13 pm
HK News Staffer
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
24-08-26 01:03 pm
HK News Staffer
ಬ್ರಹ್ಮಾವರದಲ್ಲಿ ಬೆಚ್ಚಿಬೀಳಿಸುವ ಕೃತ್ಯ ; ಹೆತ್ತ ತಂ...
24-08-26 12:06 pm
ಡೇವಿಡ್ ಡಿಸೋಜ ಹತ್ಯೆಗೆ ಶಾರ್ಪ್ ಶೂಟರ್ಗಳನ್ನು ರವಾನ...
24-08-26 11:05 am
ಹೊಳೆನರಸೀಪುರ ; ಟ್ರ್ಯಾಕ್ಟರ್ ಕೀಯನ್ನು ತಿರುಗಿಸಿದ ಮ...
23-08-26 05:20 pm
ಹೆತ್ತವರನ್ನು ಕೊಲ್ತೇನೆಂದು ಹೇಳಿ ಒಂಬತ್ತನೇ ಕ್ಲಾಸ್...
22-08-26 12:43 pm