ಬ್ರೇಕಿಂಗ್ ನ್ಯೂಸ್
09-12-23 07:07 pm Mangaluru Correspondent ಕರಾವಳಿ
ಮಂಗಳೂರು, ಡಿ.9: ದಕ್ಷಿಣ ಕನ್ನಡ ಜಿಲ್ಲೆಯ ಸಿಆರ್‌ಝಡ್ ವ್ಯಾಪ್ತಿಯಲ್ಲಿ ಸಾಂಪ್ರದಾಯಿಕ ಮರಳುಗಾರಿಕೆ ಆರಂಭಿಸುವ ವಿಚಾರದಲ್ಲಿ ರಾಜ್ಯ ಸರ್ಕಾರದ ಅನಗತ್ಯ ವಿಳಂಬ ನೀತಿಯ ಕುರಿತು ಬೆಳಗಾವಿ ಅಧಿವೇಶನದಲ್ಲಿ ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ಡಿ.ವೇದವ್ಯಾಸ್ ಕಾಮತ್ ವಿಶೇಷ ಗಮನ ಸೆಳೆದರು.
ಈಗಾಗಲೇ ದುಬಾರಿ ದರದಿಂದಾಗಿ ಜನಸಾಮಾನ್ಯರಿಗೆ ಮರಳು ಕೈಗೆಟುಕದಿದ್ದು, ಇನ್ನೂ ಸಿಆರ್‌ಝಡ್ ವಲಯದಲ್ಲಿ ಮರಳುಗಾರಿಕೆ ಆರಂಭಗೊಳ್ಳದಿದ್ದರೆ ಕಟ್ಟಡ ನಿರ್ಮಾಣ ಚಟುವಟಿಕೆಗಳು ಸ್ಥಗಿತಗೊಳ್ಳುವ ಆತಂಕವಿದೆ. ಇದನ್ನೇ ನಂಬಿ ಬದುಕು ನಡೆಸುವ ಕಾರ್ಮಿಕ ಕುಟುಂಬಗಳು ತೀವ್ರ ಸಂಕಷ್ಟಕ್ಕೀಡಾಗಲಿರುವ ಬಗ್ಗೆ, ಆರ್ಥಿಕವಾಗಿ ಜಿಲ್ಲೆಗೆ ನಷ್ಟ ಉಂಟಾಗುವ ಬಗ್ಗೆ ಹಾಗೂ ಒಟ್ಟಾರೆಯಾಗಿ ಜಿಲ್ಲೆಯಲ್ಲಿ ಉಂಟಾಗಿರುವ ತೀವ್ರ ಮರಳಿನ ಸಮಸ್ಯೆ ಕುರಿತು ಶಾಸಕ ಕಾಮತ್ ಸದನದ ಗಮನ ಸೆಳೆದರು.
ಜಿಲ್ಲೆಯಲ್ಲಿ ಮರಳುಗಾರಿಕೆ ಸ್ಥಗಿತಗೊಂಡು ಹಲವು ತಿಂಗಳುಗಳೇ ಕಳೆದಿದ್ದು ಅದನ್ನು ಮರಳಿ ಆರಂಭಿಸುವ ನಿಟ್ಟಿನಲ್ಲಿ ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ಏಳು ಜನ ಸದಸ್ಯರನ್ನೊಳಗೊಂಡ ಸಮಿತಿ, ಪರಿಶೀಲನೆ ನಡೆಸಿ ಅಗತ್ಯ ಕ್ರಮಗಳ ಸಂಪೂರ್ಣ ವರದಿಯನ್ನು ಬೆಂಗಳೂರಿಗೆ ಕಳುಹಿಸಿಕೊಡಲಾಗಿದೆ. ಆದರೆ ಇಲ್ಲಿಯವರೆಗೆ ಅನುಮತಿ ದೊರೆತಿಲ್ಲ.
ಸದ್ಯ ಜಿಲ್ಲೆಯಲ್ಲಿ ಯಾವುದೇ ಕಾಮಗಾರಿಗೂ ಸಿಆರ್‌ಝಡ್ ಮರಳು ಲಭ್ಯವಾಗುತ್ತಿಲ್ಲ. ಮುಂದಿನ ದಿನಗಳಲ್ಲಿ ಲೋಕಸಭಾ ಚುನಾವಣೆ ಘೋಷಣೆಯಾದರೆ ಮತ್ತೆ ಹಲವು ತಿಂಗಳ ಕಾಲ ಮರಳು ಸಿಗದೇ ತೀವ್ರ ಸಂಕಷ್ಟ ಅನುಭವಿಸಬೇಕಾಗುವ ಸ್ಥಿತಿ ಎದುರಾಗಲಿದೆ.
ಈಗಾಗಲೇ ಜಿಲ್ಲಾಡಳಿತದ ಹಂತದಲ್ಲಿ ಎಲ್ಲಾ ಅಗತ್ಯ ಕ್ರಮಗಳನ್ನು ಪೂರೈಸಿ ವರದಿಯನ್ನು ಕಳುಹಿಸಲಾಗಿದ್ದರೂ ಇನ್ನೂ ಸಹ ನಿರಾಕ್ಷೇಪಣಾ (EC) ಪತ್ರ ನೀಡದೇ ಅನಗತ್ಯ ವಿಳಂಬ ನೀತಿ ಅನುಸರಿಸಲಾಗುತ್ತಿದೆ. ನಮ್ಮ ಜಿಲ್ಲೆಯಲ್ಲಿ ಎಂ ಸ್ಯಾಂಡನ್ನು ರಸ್ತೆ ಅಥವಾ ಇನ್ನಿತರ ಉಪಯೋಗಗಳಿಗಾಗಿ ಮಾತ್ರ ಬಳಸಲಾಗುತ್ತದೆ, ಹೊರತು ಮನೆಗಳ ಕಟ್ಟಡಕ್ಕೆ ಹೆಚ್ಚು ಉಪಯೋಗಿಸುವುದಿಲ್ಲ. ಇದು ಸಭಾಧ್ಯಕ್ಷರಿಗೂ ತಿಳಿದಿರುವ ವಿಚಾರ. ಹಾಗಾಗಿ ಕೂಡಲೇ ನಿರಾಕ್ಷೇಪಣಾ (EC) ಪತ್ರ ನೀಡಿ ಸಾಂಪ್ರದಾಯಿಕ ಮರಳುಗಾರಿಕೆ ಆರಂಭಕ್ಕೆ ಅನುವು ಮಾಡಿಕೊಡಬೇಕೆಂದು ಮನವಿ ಮಾಡಿದರು.
MLA Vedavyas kamath talks about sand issue of Mangalore in Assembly
17-10-26 07:30 pm
HK News Staffer
Davanagere Accident: ದಾವಣಗೆರೆ ; ಸಿಎನ್ಜಿ ಲಾರಿ...
16-10-26 09:49 pm
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
17-10-26 11:04 pm
Mangaluru Staffer
ಎಂಆರ್ ಪಿಎಲ್ ದುರಂತ ; ಮೃತ ರಾಜೇಶ್ ಡಿಸಿಲ್ವ ಕುಟುಂಬ...
17-10-26 07:34 pm
ಸೆ.30ರ ಸ್ಫೋಟ ಘಟನೆಯಲ್ಲಿ 118.76 ಕೋಟಿ ನಷ್ಟ ; ಎಂಆ...
17-10-26 12:25 pm
ಪದ್ಮಶ್ರೀ ಹಾಜಬ್ಬರಿಗೆ ಚುನಾವಣಾ ಆಯೋಗವು ನೋಟೀಸು ನೀಡ...
16-10-26 10:28 pm
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
17-10-26 11:09 am
HK News Staffer
LanchuLal, Astra Fraud, Mangalore: ‘ಅಕ್ಷಯ ಪಾತ...
16-10-26 03:37 pm
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am