ಬ್ರೇಕಿಂಗ್ ನ್ಯೂಸ್
10-12-23 12:06 pm Mangalore Correspondent ಕರಾವಳಿ
ಉಳ್ಳಾಲ, ಡಿ.10: ಸೋಮೇಶ್ವರದಲ್ಲಿ ನಿನ್ನೆ ಮಧ್ಯಾಹ್ನ ಸಮುದ್ರ ಪಾಲಾಗಿದ್ದ ಇಬ್ಬರು ಪಿಯು ವಿದ್ಯಾರ್ಥಿಗಳ ಮೃತದೇಹಗಳು ಇಂದು ಬೆಳಗ್ಗೆ ಅದೇ ಸ್ಥಳದಲ್ಲಿ ಪತ್ತೆಯಾಗಿದೆ. ಸೋಮೇಶ್ವರದ ಪರಿಜ್ಞಾನ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯು ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಾದ ಮಂಜೇಶ್ವರ, ಕುಂಜತ್ತೂರು ಅಡ್ಕ ನಿವಾಸಿ ಯಶ್ವಿತ್ (17) ಮತ್ತು ಕುಂಜತ್ತೂರು ಮಜಲ್ ನಿವಾಸಿ ಯುವರಾಜ್(17) ಮೃತರು.
ನಿನ್ನೆ ಮಧ್ಯಾಹ್ನದ ಬಳಿಕ ಕಾಲೇಜಿಗೆ ರಜೆ ಇದ್ದ ಕಾರಣ ಯಶ್ವಿತ್ ಮತ್ತು ಯುವರಾಜ್ ಸೇರಿ ಒಟ್ಟು ಆರು ವಿದ್ಯಾರ್ಥಿಗಳು ಸೋಮೇಶ್ವರದ ಸೋಮನಾಥ ದೇವಸ್ಥಾನದಲ್ಲಿ ಅನ್ನ ಪ್ರಸಾದ ಸ್ವೀಕರಿಸಿ ಪಕ್ಕದ ಸಮುದ್ರ ತೀರಕ್ಕೆ ತೆರಳಿದ್ದರು. ಈ ವೇಳೆ ಯಶ್ವಿತ್ ಮತ್ತು ಯುವರಾಜ್ ನೀರಾಟಕ್ಕಿಳಿದಿದ್ದು ದೈತ್ಯ ಅಲೆಗಳು ಅವರಿಬ್ಬರನ್ನು ಕೊಚ್ಚಿಕೊಂಡು ಹೋಗಿದೆ. ಸ್ಥಳಕ್ಕೆ ಬಂದಿದ್ದ ಅಗ್ನಿಶಾಮಕ ದಳದ ಸಿಬ್ಬಂದಿಗಳು ಮತ್ತು ಪರಿಣಿತ ಈಜುಗಾರರು ರಾತ್ರಿ ವರೆಗೂ ಶೋಧ ನಡೆಸಿದರೂ ನೀರುಪಾಲಾದ ಯುವರಾಜ್, ಯಶ್ವಿತ್ ಸಿಕ್ಕಿರಲಿಲ್ಲ. ಇಂದು ಬೆಳಗ್ಗೆ ಘಟನೆ ನಡೆದ ಸ್ಥಳದಲ್ಲೇ ವಿದ್ಯಾರ್ಥಿಗಳ ಮೃತದೇಹಗಳು ದೊರೆತಿದ್ದು ಉಳ್ಳಾಲ ಪೊಲೀಸರು ದೇರಳಕಟ್ಟೆ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.



ಮೃತ ಇಬ್ಬರು ವಿದ್ಯಾರ್ಥಿಗಳು ಬಡ ಕುಟುಂಬದವರಾಗಿದ್ದು ತಂದೆ, ತಾಯಿ ಏಕೈಕ ಸಹೋದರಿಯರನ್ನ ಅಗಲಿದ್ದಾರೆ. ಸೋಮೇಶ್ವರ ಕಡಲ ಕಿನಾರೆಯಲ್ಲಿ ಪದೇ ಪದೇ ಅವಘಡಗಳು ನಡೆಯುತ್ತಿದ್ದರೂ ಪ್ರವಾಸೋದ್ಯಮ ಇಲಾಖೆ ಇಲ್ಲಿ ಖಾಯಂ ಜೀವ ರಕ್ಷಕ ಸಿಬ್ಬಂದಿಗಳನ್ನ ನೇಮಿಸಿಲ್ಲ. ಕಡಲ ತೀರಕ್ಕೆ ಭೇಟಿ ಕೊಡುವ ಜನರು ಜಾಗರೂಕರಾಗಿರಬೇಕೆಂದು ಉಳ್ಳಾಲ ಪೊಲೀಸ್ ಠಾಣಾ ನಿರೀಕ್ಷಕರಾದ ಬಾಲಕೃಷ್ಣ ಎಚ್ಚರಿಸಿದ್ದಾರೆ.
Mangalore Two students drowned at Someshwar Beach, body found. Two students had drowned into the sea while they were playing with their friends. The body had been found now
17-10-26 07:30 pm
HK News Staffer
Davanagere Accident: ದಾವಣಗೆರೆ ; ಸಿಎನ್ಜಿ ಲಾರಿ...
16-10-26 09:49 pm
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
17-10-26 11:04 pm
Mangaluru Staffer
ಎಂಆರ್ ಪಿಎಲ್ ದುರಂತ ; ಮೃತ ರಾಜೇಶ್ ಡಿಸಿಲ್ವ ಕುಟುಂಬ...
17-10-26 07:34 pm
ಸೆ.30ರ ಸ್ಫೋಟ ಘಟನೆಯಲ್ಲಿ 118.76 ಕೋಟಿ ನಷ್ಟ ; ಎಂಆ...
17-10-26 12:25 pm
ಪದ್ಮಶ್ರೀ ಹಾಜಬ್ಬರಿಗೆ ಚುನಾವಣಾ ಆಯೋಗವು ನೋಟೀಸು ನೀಡ...
16-10-26 10:28 pm
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
17-10-26 11:09 am
HK News Staffer
LanchuLal, Astra Fraud, Mangalore: ‘ಅಕ್ಷಯ ಪಾತ...
16-10-26 03:37 pm
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am