ಬ್ರೇಕಿಂಗ್ ನ್ಯೂಸ್
13-12-23 12:12 pm Udupi Correspondent ಕರಾವಳಿ
ಉಡುಪಿ, ಡಿ.13: ಹೆಸರಾಂತ ರಂಗಕರ್ಮಿ, ನಟ ನಿರ್ದೇಶಕ, ಸಮಾಜ ಸೇವಕರಾಗಿ ಗುರುತಿಸಿದ್ದ, ಕಾಪು ರಂಗತರಂಗ ನಾಟಕ ಸಂಸ್ಥೆಯ ಸ್ಥಾಪಕ ಕೆ.ಲೀಲಾಧರ ಶೆಟ್ಟಿ(68) ಹಾಗೂ ಅವರ ಪತ್ನಿ ವಸುಂಧರಾ ಶೆಟ್ಟಿ(58) ದಂಪತಿ ತಮ್ಮ ಮನೆಯಲ್ಲೇ ಒಂದೇ ಕುಣಿಕೆಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳವಾರ ಮಧ್ಯರಾತ್ರಿ ನಡೆದಿದೆ.
ಮಂಗಳವಾರ ಮಧ್ಯರಾತ್ರಿ ಕಾಪುವಿನ ತಮ್ಮ ಮನೆಯ ಪಕ್ಕಾಸಿಗೆ ಒಂದೇ ಸೀರೆಯನ್ನು ಬಿಗಿದು, ಅದರ ಎರಡೂ ತುದಿಗೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸರಳ ಸಜ್ಜನ ವ್ಯಕ್ತಿತ್ವದ ಲೀಲಾಧರ ಶೆಟ್ಟಿ 90ರ ದಶಕದಲ್ಲಿ ಕಾಪು ಕ್ಷೇತ್ರದಿಂದ ಜನತಾದಳ ಪಕ್ಷದಿಂದ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಿದ್ದರು. ರಂಗತರಂಗ ನಾಟಕ ತಂಡದ ಮೂಲಕ ನೂರಾರು ಕಲಾವಿದರನ್ನು ಹುಟ್ಟು ಹಾಕಿದ್ದರು. ಕಾಪು ಬಂಟರ ಸಂಘದಲ್ಲಿಯೂ ಸಕ್ರಿಯರಾಗಿದ್ದರು. ಮಜೂರು ಗ್ರಾಮ ಪಂಚಾಯತ್ ನಲ್ಲಿ ಈ ಹಿಂದೆ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು.

ಕಾಪು ತಾಲೂಕು ರಚನೆಯಾಗಬೇಕು ಎಂದು ಹೋರಾಟ ಸಮಿತಿ ರಚಿಸಿ, ಅದರ ಅಧ್ಯಕ್ಷರಾಗಿ ಹೆಜಮಾಡಿಯಿಂದ ಉದ್ಯಾವರದ ವರೆಗೆ ಪಾದಯಾತ್ರೆ ನಡೆಸಿ ಗಮನ ಸೆಳೆದಿದ್ದರು. ಸಾಮಾಜಿಕ, ಸಾಂಸ್ಕೃತಿಕ ನೆಲೆಯಲ್ಲಿ ಸದಾ ಮುಂಚೂಣಿಯಲ್ಲಿದ್ದ ಅವರು ಕಾಪು ಭಾಗದಲ್ಲಿ ಚಿರಪರಿಚಿತ ಮತ್ತು ಜನಾನುರಾಗಿ ವ್ಯಕ್ತಿಯಾಗಿದ್ದರು. ಇತ್ತೀಚೆಗೆ ಹೊಸ ನಾಟಕ ರಚನೆಯನ್ನು ಮಾಡಿದ್ದರು. ಇದರ ನಡುವಲ್ಲೇ ದಿಢೀರ್ ಸಾವಿಗೆ ಶರಣಾಗಿರುವುದು ಅಭಿಮಾನಿಗಳಲ್ಲಿ ಆಘಾತ ಮೂಡಿಸಿದೆ. ಕೌಟುಂಬಿಕ ಕಾರಣದಿಂದ ದಂಪತಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆಯಿದ್ದು ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ. ಕಾಪು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು ತನಿಖೆ ನಡೆಸುತ್ತಿದ್ದಾರೆ.
Udupi Kaup Renowned community leader Leeladhar Shetty, wife Vasundara commits suicide. In a heart-breaking incident, Kaup Leeladhar Shetty and his wife Vasundara Shetty reportedly took their own lives late at night on Tuesday, December 12.
17-10-26 07:30 pm
HK News Staffer
Davanagere Accident: ದಾವಣಗೆರೆ ; ಸಿಎನ್ಜಿ ಲಾರಿ...
16-10-26 09:49 pm
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
17-10-26 11:04 pm
Mangaluru Staffer
ಎಂಆರ್ ಪಿಎಲ್ ದುರಂತ ; ಮೃತ ರಾಜೇಶ್ ಡಿಸಿಲ್ವ ಕುಟುಂಬ...
17-10-26 07:34 pm
ಸೆ.30ರ ಸ್ಫೋಟ ಘಟನೆಯಲ್ಲಿ 118.76 ಕೋಟಿ ನಷ್ಟ ; ಎಂಆ...
17-10-26 12:25 pm
ಪದ್ಮಶ್ರೀ ಹಾಜಬ್ಬರಿಗೆ ಚುನಾವಣಾ ಆಯೋಗವು ನೋಟೀಸು ನೀಡ...
16-10-26 10:28 pm
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
17-10-26 11:09 am
HK News Staffer
LanchuLal, Astra Fraud, Mangalore: ‘ಅಕ್ಷಯ ಪಾತ...
16-10-26 03:37 pm
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am