ಬ್ರೇಕಿಂಗ್ ನ್ಯೂಸ್
20-12-23 08:13 pm Mangalore Correspondent ಕರಾವಳಿ
ಮಂಗಳೂರು, ಡಿ.20: ಕರ್ನಾಟಕ ರಾಜ್ಯದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಫುಡ್ ಇನ್ನಿತರ ಡೆಲಿವರಿ ಕಾರ್ಮಿಕರಿಗೆ ದೇಶದಲ್ಲಿಯೇ ಮೊದಲ ಬಾರಿಗೆ ಉಚಿತ ವಿಮಾ ಯೋಜನೆ ಜಾರಿಗೊಳಿಸಲಾಗಿದೆ. ಎಲ್ಲಾ ಅರ್ಹ ಗಿಗ್ ಕಾರ್ಮಿಕರು ಸೇವಾ ಸಿಂಧು ಪೋರ್ಟಲ್ ನಲ್ಲಿ ಇದಕ್ಕಾಗಿ ನೋಂದಾಯಿಸಬಹುದು. ವಿಮಾ ಸೌಲಭ್ಯವು ಕರ್ತವ್ಯದಲ್ಲಿ ಅಥವಾ ಇಲ್ಲದಿರುವಾಗ ಸಂಭವಿಸುವ ಅಪಘಾತಗಳಿಗೂ ಅನ್ವಯವಾಗಲಿದೆ.
ಈ ಯೋಜನೆ ಸಂಪೂರ್ಣ ಉಚಿತವಾಗಿದ್ದು ಯಾವುದೇ ರೀತಿಯ ಪ್ರೀಮಿಯಂ ಪಾವತಿಸುವ ಅಗತ್ಯತೆ ಇರುವುದಿಲ್ಲ. ಸ್ವಿಗ್ಗಿ, ಜೊಮಾಟೋ ಮಾದರಿಯ ಸಂಸ್ಥೆಗಳಲ್ಲಿ ಫುಡ್ ಡೆಲಿವರಿ ಮಾಡುವ ಹಾಗೂ ಇ-ಕಾಮರ್ಸ್ ಸಂಸ್ಥೆಗಳಾದ ಅಮೆಜಾನ್, ಪ್ಲಿಫ್‍ಕಾರ್ಟ್, ಪೋರ್ಟರ್, ಫಾರ್ಮಸಿ, ಬ್ಲಿಂಕಿಟ್, ಜೆಪ್ಪೋ, ಬಿಗ್ ಬಾಸ್ಕೆಟ್, ಡಾಮಿನೋಜ್ ಮುಂತಾದ ಸಂಸ್ಥೆಗಳಲ್ಲಿ ಡೆಲಿವರಿ ವೃತ್ತಿಯಲ್ಲಿ ತೊಡಗಿಸಿಕೊಂಡ ಎಲ್ಲಾ ಅಸಂಘಟಿತ ಗಿಗ್ ಕಾರ್ಮಿಕರಿಗೆ ಈ ಯೋಜನೆ ಲಭ್ಯವಿದೆ.
ಯೋಜನೆ ಸೌಲಭ್ಯಗಳು
18ರಿಂದ 60 ವರ್ಷದೊಳಗಿನ ಗಿಗ್ ಕಾರ್ಮಿಕರು ಸೇವಾ ಸಿಂಧು ಪೋರ್ಟಲ್ ಮೂಲಕ ತಮ್ಮ ಹೆಸರು ನೋಂದಾಯಿಸಬೇಕು. ಆದರೆ ಆದಾಯ ತೆರಿಗೆ ಪಾವತಿದಾರರಾಗಿರಬಾರದು. ಭವಿಷ್ಯನಿಧಿ ಹಾಗೂ ಇ.ಎಸ್.ಐ ಫಲಾನುಭವಿಯಾಗಿರಬಾರದು ಹಾಗೂ ಕರ್ನಾಟಕದಲ್ಲಿ ಡೆಲಿವರಿ ಕಾರ್ಯ ಮಾಡುತ್ತಿರುವವರಿಗೆ ಮಾತ್ರ ಅನ್ವಯಿಸುತ್ತದೆ. ಆಧಾರ್ ಸಂಖ್ಯೆ, ವೃತ್ತಿ ನಿರ್ವಹಿಸುತ್ತಿರುವ ಸಂಸ್ಥೆಗಳು ವಿತರಿಸಿದ ಗುರುತಿನ ಚೀಟಿ, ವೇತನ ಚೀಟಿ, ವೇತನ ಪಡೆದ ಬ್ಯಾಂಕ್ ಪಾಸ್ ಬುಕ್ ಹಾಗೂ ಇ-ಶ್ರಮ್ ಕಾರ್ಡ್ ಈ ಎಲ್ಲಾ ದಾಖಲೆಗಳನ್ನು ಹೊಂದಿರಬೇಕು.
ಹೆಚ್ಚಿನ ಮಾಹಿತಿಗೆ ಕಾರ್ಮಿಕ ಅಧಿಕಾರಿಯವರ ಕಚೇರಿ, ಕಾರ್ಮಿಕ ನಿರೀಕ್ಷಕರ ಕಚೇರಿ ಅಥವಾ ದೂ.ಸಂಖ್ಯೆ: 0824-2435343, 0824-2433132 ಸಂಪರ್ಕಿಸುವಂತೆ ಕಾರ್ಮಿಕ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
For the first time in the country, a free insurance scheme has been launched for food and other delivery workers working in Karnataka. All eligible gig workers can register for the same on the Seva Sindhu portal. The insurance facility will also be applicable for accidents occurring while on duty or not.
17-10-26 07:30 pm
HK News Staffer
Davanagere Accident: ದಾವಣಗೆರೆ ; ಸಿಎನ್ಜಿ ಲಾರಿ...
16-10-26 09:49 pm
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
17-10-26 11:04 pm
Mangaluru Staffer
ಎಂಆರ್ ಪಿಎಲ್ ದುರಂತ ; ಮೃತ ರಾಜೇಶ್ ಡಿಸಿಲ್ವ ಕುಟುಂಬ...
17-10-26 07:34 pm
ಸೆ.30ರ ಸ್ಫೋಟ ಘಟನೆಯಲ್ಲಿ 118.76 ಕೋಟಿ ನಷ್ಟ ; ಎಂಆ...
17-10-26 12:25 pm
ಪದ್ಮಶ್ರೀ ಹಾಜಬ್ಬರಿಗೆ ಚುನಾವಣಾ ಆಯೋಗವು ನೋಟೀಸು ನೀಡ...
16-10-26 10:28 pm
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
17-10-26 11:09 am
HK News Staffer
LanchuLal, Astra Fraud, Mangalore: ‘ಅಕ್ಷಯ ಪಾತ...
16-10-26 03:37 pm
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am