ಬ್ರೇಕಿಂಗ್ ನ್ಯೂಸ್
18-11-20 03:57 pm Mangalore Correspondent ಕರಾವಳಿ
ಮಂಗಳೂರು, ನ.18: ಬಂಟ್ವಾಳ ಮತ್ತು ಮಂಗಳೂರು ತಾಲೂಕಿನ 25 ಹಳ್ಳಿಗಳಿಗೆ ನೇತ್ರಾವತಿ ನದಿಯಿಂದ ಶುದ್ಧ ಕುಡಿಯುವ ನೀರು ಸರಬರಾಜು ಮಾಡಲು ಕೈರಂಗಳದ ಬಳಿ 72 ಎಂ.ಎಲ್.ಡಿ ಸಾಮರ್ಥ್ಯ ದ ನೀರು ಶುದ್ಧೀಕರಣ ಘಟಕ ಸ್ಥಾಪಿಸಲಾಗುತ್ತಿದ್ದು ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯಡಿ.280 ಕೋಟಿ ರೂ. ವೆಚ್ಚದಲ್ಲಿ ಯೋಜನೆ ಅನುಷ್ಠಾನ ಮಾಡಲಾಗುತ್ತಿದೆ ಎಂದು ಶಾಸಕ ಯು.ಟಿ.ಖಾದರ್ ತಿಳಿಸಿದ್ದಾರೆ.
ಯೋಜನೆಯಿಂದ ಉಳ್ಳಾಲ ನಗರ ಸಭೆ, ಕೋಟೆಕಾರ್ ಪಟ್ಟಣ ಪಂಚಾಯತ್ ಸೇರಿದಂತೆ 25 ಹಳ್ಳಿಗಳಿಗೆ ಕುಡಿಯುವ ನೀರು ಸರಬರಾಜು ಆಗಲಿದೆ. ಅಲ್ಲದೆ ಸುಮಾರು 30 ವರ್ಷಗಳ ವರೆಗೆ ಈ ಪ್ರದೇಶಗಳ ಕುಡಿಯುವ ನೀರಿನ ಸಮಸ್ಯೆಗೆ ಪರಿಹಾರ ದೊರೆಯಲಿದೆ. ಇದರೊಂದಿಗೆ ಜಗಜ್ಜೀವನ್ ರಾಮ್ ಮಿಶನ್ ಮೂಲಕ ಮಂಗಳೂರು ತಾಲೂಕಿನ ಗ್ರಾಮಗಳಿಗೆ ಸಮುದಾಯದ ಸಹಭಾಗಿತ್ವದಡಿ ನೀರಿನ ವ್ಯವಸ್ಥೆ ಕಲ್ಪಿಸಲು 25.2 ಕೋಟಿ ರೂ ಮಂಜೂರಾಗಿದೆ ಎಂದು ಯು.ಟಿ.ಖಾದರ್ ತಿಳಿಸಿದ್ದಾರೆ.
ಹರೇಕಳದಲ್ಲಿ 200 ಕೋಟಿ ರೂ. ವೆಚ್ಚದ ಬ್ಯಾರೇಜ್
ಹರೇಕಳದಲ್ಲಿ 200 ಕೋಟಿ ರೂ. ವೆಚ್ಚದಲ್ಲಿ ನೇತ್ರಾವತಿ ನದಿಗೆ ಅಡ್ಡಲಾಗಿ ಬ್ಯಾರೇಜ್ ನಿರ್ಮಿಸಲಾಗುತ್ತಿದ್ದು ಈ ಮೂಲಕ ಆಸುಪಾಸಿನ ಗ್ರಾಮಗಳು ಹಾಗೂ ಮಂಗಳೂರು ಮಹಾನಗರ ಪಾಲಿಕೆಯ ವ್ಯಾಪ್ತಿಗೂ ಕುಡಿಯುವ ನೀರಿನ ಸಮಸ್ಯೆಗೆ ಶ್ವಾಶ್ವತ ಪರಿಹಾರ ದೊರೆಯಲಿದೆ ಎಂದು ಯು.ಟಿ.ಖಾದರ್ ತಿಳಿಸಿದ್ದಾರೆ.
ಬಿಜೆಪಿಯಿಂದ ಓಲೈಕೆ ರಾಜಕಾರಣ
ರಾಜ್ಯದ ಉಪ ಚುನಾವಣೆಯ ಸಂದರ್ಭದಲ್ಲಿ ಜನರಿಂದ ಮತ ಪಡೆಯಲು ಬಿಜೆಪಿ ಒಲೈಕೆ ರಾಜಕೀಯದಲ್ಲಿ ತೊಡಗಿದೆ. ಈ ಹಿನ್ನೆಲೆಯಲ್ಲಿ ಶಿರಾ ವಿಧಾನ ಸಭಾ ಕ್ಷೇತ್ರದಲ್ಲಿ ಗೊಲ್ಲ ಸಮುದಾಯದಕ್ಕೆ ನಿಗಮ ನೀಡುವ ಭರವಸೆ ನೀಡಲಾಯಿತು. ಇದೀಗ ಬಸವ ಕಲ್ಯಾಣದಲ್ಲಿ ಮರಾಠರ ಮತ್ತು ವೀರಶೈವ ಲಿಂಗಾಯತರ ಮತ ಪಡೆಯಲು ಮರಾಠ ಅಭಿವೃದ್ಧಿ ನಿಗಮ, ಲಿಂಗಾಯತ ಅಭಿವೃದ್ಧಿ ನಿಗಮ ರಚಿಸಲು ಮುಖ್ಯ ಮಂತ್ರಿ ಮುಂದಾಗಿದ್ದಾರೆ. ಈ ರೀತಿ ಒಲೈಕೆ ರಾಜಕಾರಣದಲ್ಲಿ ತೊಡಗಿರುವ ರಾಜ್ಯದ ಮುಖ್ಯಮಂತ್ರಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಜಾತಿಯವರಿಗೂ ಅಭಿವೃದ್ಧಿ ನಿಗಮವನ್ನು ರಚಿಸಲು ಮುಂದಾಗಲಿ ಎಂದರು.
ದಕ್ಷಿಣ ಕನ್ನಡ ಜಿಲ್ಲೆಯ ಪೊಲೀಸರನ್ನು ವಿನಾಕಾರಣ ವರ್ಗಾವಣೆ ಮಾಡಲಾಗುತ್ತದೆ. ಪೊಲೀಸರ ನೈತಿಕ ಬಲ ಹೆಚ್ಚಿಸಲು ಕಾಲ ಕಾಲಕ್ಕೆ ಜಿಲ್ಲಾ ಉಸ್ತುವಾರಿ ಸಚಿವರಿಂದ ಪೊಲೀಸ್ ಇಲಾಖೆಯ ಪ್ರಗತಿ ಪರಿಶೀಲನೆ ನಡೆಸಿ ಕುಂದು ಕೊರತೆಗಳನ್ನು ನಿವಾರಿಸ ಬೇಕಾಗಿದೆ ಎಂದು ಶಾಸಕ ಯು.ಟಿ.ಖಾದರ್ ತಿಳಿಸಿದ್ದಾರೆ.
ಸುದ್ದಿಗೋಷ್ಟಿಯಲ್ಲಿ ಉಳ್ಳಾಲ ನಗರ ಸಭೆಯ ನೂತನ ಅಧ್ಯಕ್ಷೆ ಚಿತ್ರಕಲಾ, ಉಪಾಧ್ಯಕ್ಷ ಅಯೂಬ್, ಮಂಗಳೂರು ತಾಲೂಕು ಪಂಚಾಯತ್ ಅಧ್ಯಕ್ಷ ಮುಹಮ್ಮದ್ ಮೋನು , ಕಾಂಗ್ರೆಸ್ ಮುಖಂಡರಾದ ಈಶ್ವರ ಉಳ್ಳಾಲ್, ಎ.ಸಿ.ಜಯರಾಜ್, ಸದಾಶಿವ ಉಳ್ಳಾಲ್, ಎನ್.ಎಸ್.ಕರೀಂ ಮೊದಲಾದವರು ಉಪಸ್ಥಿತರಿದ್ದರು.
Video:
21-08-25 02:03 pm
HK News Desk
Mangalore Electric Auto, High Court: ಮಂಗಳೂರಿನ...
21-08-25 12:58 pm
Dharmasthala Case: ಧರ್ಮಸ್ಥಳ ಪ್ರಕರಣ ; ಎಫ್ಎಸ್ಎಲ...
20-08-25 10:54 pm
Congress MP Sasikanth Senthil, Janardhana Red...
20-08-25 09:54 pm
Heart Attack, Mangalore, Bangalore: 3 ವರ್ಷದಲ್...
20-08-25 12:33 pm
21-08-25 12:54 pm
HK News Desk
ಹೆದ್ದಾರಿಯಲ್ಲಿ ಗುಂಡಿಗಳು ಬಿದ್ದಿದ್ದರೆ, ಟ್ರಾಫಿಕ್...
20-08-25 10:56 pm
30 ದಿನ ಜೈಲು ಪಾಲಾದರೆ ಪ್ರಧಾನಿ, ಸಿಎಂ, ಸಚಿವರನ್ನು...
20-08-25 06:40 pm
ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಆಗಂತುಕನಿಂದ ಹಲ್ಲೆ...
20-08-25 11:01 am
ಭಾರತ ಟಿ20 ತಂಡಕ್ಕೆ ಮರಳಿದ ಶುಭಮನ್ ಗಿಲ್ ; ಏಷ್ಯಾ...
19-08-25 06:59 pm
21-08-25 03:44 pm
Mangalore Correspondent
MRPL Accident, Mangalore: ಕಾಟಿಪಳ್ಳ ; ಟಿಪ್ಪರ್...
21-08-25 02:05 pm
Mahesh Shetty Timarodi, Udupi Police, BL Sant...
21-08-25 11:57 am
MLA Vedavyas Kamath: ಶ್ರೀಕೃಷ್ಣ ಜನ್ಮಾಷ್ಟಮಿಯ ಸಂ...
20-08-25 10:19 pm
Ananya–Sujatha Bhatt Case, Lawyer Manjunath:...
20-08-25 04:28 pm
20-08-25 08:10 pm
Mangalore Correspondent
Mangalore Lucky Scheme Scam Fraud, Wahab Kula...
19-08-25 10:52 pm
ಕಸ್ಟಮ್ಸ್ ಅಧಿಕಾರಿಗಳ ಸೋಗಿನಲ್ಲಿ ಚಿನ್ನದ ವ್ಯಾಪಾರಿಯ...
19-08-25 10:30 pm
ಡಾಕ್ಟರ್ ಮನೆ ದೋಚಿದ್ದ ಮನೆ ಕೆಲಸದವಳು ; ಚಿನ್ನ, ವಜ್...
19-08-25 09:27 pm
Gold Chain robbery, Puttur: ಮೈಸೂರಿನಲ್ಲಿ ಕದ್ದ...
19-08-25 12:54 pm