ಬ್ರೇಕಿಂಗ್ ನ್ಯೂಸ್
22-12-23 06:31 pm Mangalore Correspondent ಕರಾವಳಿ
ಮಂಗಳೂರು, ಡಿ.22: ಮೂಲ್ಕಿ ಮತ್ತು ಮೂಡಬಿದ್ರೆ ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಡಯಾಲಿಸಿಸ್ ಕೇಂದ್ರಗಳನ್ನು ಶೀಘ್ರದಲ್ಲೇ ಸ್ಥಾಪಿಸಲಾಗುವುದು ಎಂದು ಆರೋಗ್ಯ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.
ಅವರು ಬುಧವಾರ ಮೂಲ್ಕಿ ಸರಕಾರಿ ಆಸ್ಪತ್ರೆಗೆ ಭೇಟಿ ನೀಡಿ ಮಾತನಾಡಿದರು. ಮೂಲ್ಕಿ ಸಮುದಾಯ ಆಸ್ಪತ್ರೆಗೆ ಈಗಾಗಲೇ ಎಂ.ಆರ್.ಪಿ.ಎಲ್ ಸಂಸ್ಥೆಯು ಒಂದು ಡಯಾಲಿಸಿಸ್ ಯಂತ್ರವನ್ನು ನೀಡಿದೆ. ರಾಜ್ಯ ಸರಕಾರದಿಂದ ಎರಡು ಡಯಾಲಿಸಿಸ್ ಯಂತ್ರಗಳನ್ನು ನೀಡಲಾಗುವುದು. ಇದಕ್ಕಾಗಿ ಎರಡೂ ಆಸ್ಪತ್ರೆಗಳಿಗೆ ಅಗತ್ಯ ವೈದ್ಯರನ್ನು ಮತ್ತು ತಂತ್ರಜ್ಞರನ್ನು ನೇಮಿಸಲಾಗುವುದು ಎಂದು ಸಚಿವರು ಹೇಳಿದರು. ಇದರಿಂದ ಇಲ್ಲಿನ ರೋಗಿಗಳು ಡಯಾಲಿಸಿಸ್ ಗೆ ಮಂಗಳೂರಿಗೆ ಹೋಗಬೇಕಾದ ಅನಿವಾರ್ಯತೆ ತಪ್ಪಲಿದೆ ಎಂದರು.

ಆಸ್ಪತ್ರೆಯಲ್ಲಿ ಡಯಾಬಿಟಿಸ್ ಗೆ ಸಂಬಂಧಿಸಿದ ಎಲ್ಲ ಔಷಧಗಳನ್ನು ಸಂಗ್ರಹಿಸಿಡಬೇಕು. ಆಸ್ಪತ್ರೆಯ ಅಭಿವೃದ್ಧಿಗೆ ಬೇಕಾದ ಅನುದಾನ ನೀಡಲಾಗುವುದು. ಇಲ್ಲಿಗೆ ಮಕ್ಕಳು, ಸ್ತ್ರೀರೋಗ ತಜ್ಞರನ್ನು ನೇಮಿಸಬೇಕೆಂಬ ಬೇಡಿಕೆಯಿದ್ದು, ಈ ಬಗ್ಗೆ ಪರಿಶೀಲಿಸಲಾಗುವುದು. ಆಸ್ಪತ್ರೆಯ ಸಂಪೂರ್ಣ ಬಳಕೆಗೆ ಒತ್ತು ನೀಡಲಾಗುವುದು ಎಂದು ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು.
ಈ ಸಂದರ್ಭದಲ್ಲಿ ಶಾಸಕ ಉಮಾನಾಥ ಕೋಟ್ಯಾನ್, ಮಂಗಳೂರು ಉಪವಿಭಾಗಾಧಿಕಾರಿ ಹರ್ಷವರ್ಧನ್, ತಹಶೀಲ್ದಾರ್ ಪ್ರದೀಪ್ ಕುರ್ಡೇಕರ್ ಮತ್ತಿತರರು ಉಪಸ್ಥಿತರಿದ್ದರು.
ಪ್ರವಾಸಿ ಮಂದಿರ ಕಾಮಗಾರಿ
ಸಚಿವರು ಇದಕ್ಕೂ ಮೊದಲು ಮೂಲ್ಕಿ ರಾಷ್ಟ್ರೀಯ ಹೆದ್ದಾರಿ ಸಮೀಪ ನಿರ್ಮಾಣಗೊಳ್ಳುತ್ತಿರುವ ಪ್ರವಾಸಿ ಮಂದಿರ ನಿವೇಶನಕ್ಕೆ ಭೇಟಿ ನೀಡಿ ಕಾಮಗಾರಿಯನ್ನು ಪರಿಶೀಲಿಸಿದರು. ಬಳಿಕ ಮೂಲ್ಕಿ ಮಿನಿ ವಿಧಾನಸೌಧ ಕಾಮಗಾರಿಯನ್ನು ಪರಿಶೀಲಿಸಿದರು. ಮೂಲ್ಕಿ ನಗರ ಪಂಚಾಯತ್ ನೂತನ ಕಾರ್ಯಾಲಯ ನಿರ್ಮಾಣ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿದರು.
Health and District In-charge Minister Dinesh Gundu Rao has said that dialysis centres will be set up at Mulki and Moodabidri Community Health Centres (CHCs) soon.
17-10-26 07:30 pm
HK News Staffer
Davanagere Accident: ದಾವಣಗೆರೆ ; ಸಿಎನ್ಜಿ ಲಾರಿ...
16-10-26 09:49 pm
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
17-10-26 11:04 pm
Mangaluru Staffer
ಎಂಆರ್ ಪಿಎಲ್ ದುರಂತ ; ಮೃತ ರಾಜೇಶ್ ಡಿಸಿಲ್ವ ಕುಟುಂಬ...
17-10-26 07:34 pm
ಸೆ.30ರ ಸ್ಫೋಟ ಘಟನೆಯಲ್ಲಿ 118.76 ಕೋಟಿ ನಷ್ಟ ; ಎಂಆ...
17-10-26 12:25 pm
ಪದ್ಮಶ್ರೀ ಹಾಜಬ್ಬರಿಗೆ ಚುನಾವಣಾ ಆಯೋಗವು ನೋಟೀಸು ನೀಡ...
16-10-26 10:28 pm
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
17-10-26 11:09 am
HK News Staffer
LanchuLal, Astra Fraud, Mangalore: ‘ಅಕ್ಷಯ ಪಾತ...
16-10-26 03:37 pm
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am