ಬ್ರೇಕಿಂಗ್ ನ್ಯೂಸ್
28-12-23 09:47 pm Mangalore Correspondent ಕರಾವಳಿ
ಮಂಗಳೂರು, ಡಿ.28: ಮುಸ್ಲಿಂ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆಂದು ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ದಾಖಲಾಗಿದ್ದ ಎಫ್ಐಆರ್ ರದ್ದು ಕೋರಿ ಹೈಕೋರ್ಟಿನಲ್ಲಿ ಸಲ್ಲಿಸಲಾಗಿದ್ದ ರಿಟ್ ಅರ್ಜಿಗೆ ರಿಲೀಫ್ ಸಿಕ್ಕಿದ್ದರೆ, ಶ್ರೀರಂಗಪಟ್ಟಣ ಸ್ಥಳೀಯ ಕೋರ್ಟ್ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.
ಎರಡೂ ಕಡೆಯಲ್ಲಿ ಹೈಕೋರ್ಟ್ ವಕೀಲ ಅರುಣ್ ಶ್ಯಾಮ್ ಅರ್ಜಿ ಸಲ್ಲಿಸಿದ್ದರು. ಪೊಲೀಸರು ಸುಳ್ಳು ಕೇಸು ದಾಖಲಿಸಿದ್ದು ಅದನ್ನು ರದ್ದು ಮಾಡಬೇಕು ಎಂದು ಹೈಕೋರ್ಟಿನಲ್ಲಿ ಅರ್ಜಿ ಹಾಕಲಾಗಿತ್ತು. ಅದನ್ನು ವಿಚಾರಣೆ ನಡೆಸಿದ ರಜಾಕಾಲದ ಪೀಠವು, ಸದ್ಯಕ್ಕೆ ಪೊಲೀಸರು ವಿಚಾರಣೆ ನೆಪದಲ್ಲಿ ಬಲಪ್ರಯೋಗ ಮಾಡುವಂತಿಲ್ಲ ಮತ್ತು ಅರೆಸ್ಟ್ ಮಾಡುವಂತಿಲ್ಲ ಎಂದು ಮಧ್ಯಂತರ ಆದೇಶ ನೀಡಿದೆ.
ಶ್ರೀರಂಗಪಟ್ಟಣ ಠಾಣೆಯ ಪೊಲೀಸರು ಎಫ್ಐಆರ್ ದಾಖಲಿಸಿದ್ದರಿಂದ, ಅದೇ ವ್ಯಾಪ್ತಿಯ ಸ್ಥಳೀಯ ಕೋರ್ಟಿನಲ್ಲಿ ಬಂಧನದ ವಿರುದ್ಧ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಕೆಯಾಗಿತ್ತು. ಅಲ್ಲಿನ ಕೋರ್ಟ್ ಪ್ರಭಾಕರ ಭಟ್ ಅವರಿಗೆ ನಿರೀಕ್ಷಣಾ ಜಾಮೀನು ನೀಡಿದೆ ಎಂದು ವಕೀಲ ಅರುಣ್ ಶ್ಯಾಮ್ ತಿಳಿಸಿದ್ದಾರೆ. ಡಿ.25ರಂದು ಮಂಡ್ಯದಲ್ಲಿ ನಡೆದ ಹನುಮ ಸಂಕೀರ್ತನಾ ಯಾತ್ರೆ ಕಾರ್ಯಕ್ರಮದಲ್ಲಿ ಭಾಷಣ ಮಾಡಿದ್ದ ಪ್ರಭಾಕರ ಭಟ್, ಮುಸ್ಲಿಮ್ ಮಹಿಳೆಯರನ್ನು ತಲಾಖ್ ತಲಾಖ್ ಹೇಳಿ ಗಂಡಂದಿರು ನಡುಬೀದಿಯಲ್ಲಿ ಬಿಟ್ಟು ಹೋಗುತ್ತಿದ್ದರು. ಅವರನ್ನು ಕಾಪಾಡಿದ್ದು ಮೋದಿ ಸರ್ಕಾರ. ತಲಾಖ್ ನಿಷೇಧ ಮೂಲಕ ಅವರಿಗೆ ಪರ್ಮನೆಂಟ್ ಗಂಡ ಸಿಗುವಂತಾಗಿತ್ತು ಎಂದು ಹೇಳಿಕೆ ನೀಡಿದ್ದರು. ಭಟ್ಟರ ಈ ರೀತಿಯ ಮಾತುಗಳಿಗೆ ವಿರೋಧ ಪಕ್ಷಗಳು ಭಾರೀ ವಿರೋಧ ವ್ಯಕ್ತಪಡಿಸಿದ್ದಲ್ಲದೆ, ಬಂಧನಕ್ಕೂ ಆಗ್ರಹ ಮಾಡಿದ್ದವು.
Insulting Muslim women Kalladka Prabhakar Bhat gets high court order not to be arrested by Police. The joint forum of secular parties in Dakshina Kannada district on Thursday urged the government to immediately arrest RSS leader Kalladka Prabhakar Bhat for allegedly insulting Muslim women in a recent speech in Mandya district and initiate appropriate legal action.
17-10-26 07:30 pm
HK News Staffer
Davanagere Accident: ದಾವಣಗೆರೆ ; ಸಿಎನ್ಜಿ ಲಾರಿ...
16-10-26 09:49 pm
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
17-10-26 11:04 pm
Mangaluru Staffer
ಎಂಆರ್ ಪಿಎಲ್ ದುರಂತ ; ಮೃತ ರಾಜೇಶ್ ಡಿಸಿಲ್ವ ಕುಟುಂಬ...
17-10-26 07:34 pm
ಸೆ.30ರ ಸ್ಫೋಟ ಘಟನೆಯಲ್ಲಿ 118.76 ಕೋಟಿ ನಷ್ಟ ; ಎಂಆ...
17-10-26 12:25 pm
ಪದ್ಮಶ್ರೀ ಹಾಜಬ್ಬರಿಗೆ ಚುನಾವಣಾ ಆಯೋಗವು ನೋಟೀಸು ನೀಡ...
16-10-26 10:28 pm
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
17-10-26 11:09 am
HK News Staffer
LanchuLal, Astra Fraud, Mangalore: ‘ಅಕ್ಷಯ ಪಾತ...
16-10-26 03:37 pm
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am