ಬ್ರೇಕಿಂಗ್ ನ್ಯೂಸ್
30-12-23 08:42 pm Mangalore Correspondent ಕರಾವಳಿ
ಮಂಗಳೂರು, ಡಿ.30: ಹೊಸ ವರ್ಷಾಚರಣೆಗೆ ಕರಾವಳಿ ನಗರಿ ಮಂಗಳೂರಿನಲ್ಲಿ ಟಫ್ ರೂಲ್ಸ್ ಮಾಡಲಾಗಿದೆ. ಒಳಾಂಗಣ ಮತ್ತು ಹೊರಾಂಗಣಕ್ಕೆ ಪ್ರತ್ಯೇಕ ನಿಯಮಗಳನ್ನು ಮಾಡಿದ್ದು ಆಯೋಜಕರಿಗೆ ಸ್ಪಷ್ಟ ಸೂಚನೆ ನೀಡಲಾಗಿದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಮಾಧ್ಯಮಕ್ಕೆ ಮಾಹಿತಿ ನೀಡಿದ್ದಾರೆ.
ಮಂಗಳೂರು ನಗರದಲ್ಲಿ ಒಳಾಂಗಣದಲ್ಲಿ ತುಂಬಾ ಕಡೆ ಕಾರ್ಯಕ್ರಮಗಳು ನಡೆಯುತ್ತಿವೆ. ಮೂವತ್ತಾರು ಕಡೆಗಳಲ್ಲಿ ಒಳಾಂಗಣದಲ್ಲಿ ಹೊಸ ವರ್ಷಾಚರಣೆಗೆ ಅನುಮತಿ ಕೇಳಿದ್ದಾರೆ. ಬೀಚ್ ಸೇರಿದಂತೆ ಕೆಲವು ಹೊರಾಂಗಣದಲ್ಲೂ ಹೊಸ ವರ್ಷಾಚರಣೆಗೆ ಅನುಮತಿ ಕೇಳಿದ್ದಾರೆ. ಒಳಾಂಗಣ ಆಚರಣೆಗೆ ರಾತ್ರಿ ಹನ್ನೆರೆಡುವರೆ ಗಂಟೆ ತನಕ ಅನುಮತಿ ನೀಡಲಾಗಿದೆ.
ಹೊರಾಂಗಣದಲ್ಲಿ ರಾತ್ರಿ ಹತ್ತು ಗಂಟೆ ತನಕ ಮಾತ್ರ ಅವಕಾಶ ನೀಡಲಾಗಿದೆ. ಈ ಬಗ್ಗೆ ಈಗಾಗಲೇ ಆಯೋಜಕರಿಗೂ ಸೂಚನೆ ನೀಡಲಾಗಿದೆ. ನಿಗಾ ಇಡುವುದಕ್ಕಾಗಿ 850 ಹೆಚ್ಚುವರಿ ಪೊಲೀಸರನ್ನು ನಿಯೋಜನೆ ಮಾಡುತ್ತೇವೆ. ಸಿಎಆರ್ ನಿಂದ ಎಂಟು ತಂಡಗಳನ್ನು ಭದ್ರತೆಗೆ ನಿಯೋಜನೆ ಮಾಡಲಾಗಿದೆ.
ಕೆಎಸ್ ಆರ್ ಪಿಯಿಂದ ಮೂರು ತುಕಡಿಗಳನ್ನು ನಿಯೋಜನೆ ಮಾಡಲಾಗುತ್ತದೆ. ಸೂಕ್ಷ್ಮ ಪ್ರದೇಶದಲ್ಲಿ ಹೆಚ್ಚಿನ ಪೊಲೀಸ್ ಭದ್ರತೆ ಮಾಡಲಾಗುತ್ತದೆ. ಭದ್ರತೆಗೆ 66 ತಂಡಗಳನ್ನು ರಚನೆ ಮಾಡಿದ್ದೇವೆ. 108 ಪ್ರದೇಶದಲ್ಲಿ ನಾಕಾಬಂದಿ ಮಾಡಲಿದ್ದೇವೆ. ಬೀಚ್ ನಲ್ಲಿ ರಾತ್ರಿ ಹತ್ತು ಗಂಟೆ ತನಕ ಮಾತ್ರ ಅವಕಾಶ ನೀಡಲಾಗಿದೆ. ಹತ್ತು ಗಂಟೆಗೆ ಎಲ್ಲರೂ ಜಾಗ ಖಾಲಿ ಮಾಡಬೇಕು ಎಂದು ಕಮಿಷನರ್ ಎಚ್ಚರಿಕೆ ನೀಡಿದ್ದಾರೆ.
ನೈತಿಕ ಪೊಲೀಸ್ ಗಿರಿಯಂತಹ ಘಟನೆಗಳನ್ನು ತಡೆಯಲು ಕಾರ್ಯಕ್ರಮ ನಡೆಯುವಲ್ಲಿ ಪೊಲೀಸ್ ಅಧಿಕಾರಿಗಳ ನಂಬರ್ ಬ್ಯಾನರ್ ಹಾಕಲಿದ್ದೇವೆ. ಏನಾದರೂ ತೊಂದರೆಯಾದರೆ ಜನರು ಆ ನಂಬರ್ ಗೆ ಕರೆ ಮಾಡಬಹುದು. ಡ್ರಗ್ಸ್ ಪಾರ್ಟಿ ಬಗ್ಗೆಯೂ ಕ್ರಮ ಕೈಗೊಂಡಿದ್ದೇವೆ. ಯಾವುದೇ ಕಡೆ ಅಂತಹ ಪ್ರಸಂಗ ಕಂಡುಬಂದಲ್ಲಿ ಪೊಲೀಸರಿಗೆ ಮಾಹಿತಿ ನೀಡಬಹುದು.
ಬೀಚ್ ಗಳಲ್ಲಿ ರಾತ್ರಿ ಹತ್ತು ಗಂಟೆ ನಂತರ ರಿಸ್ಕ್ ಜಾಸ್ತಿ ಇರುತ್ತದೆ. ಹೀಗಾಗಿ ಹತ್ತು ಗಂಟೆ ನಂತರ ಅಲ್ಲಿನ ಕಾರ್ಯಕ್ರಮಗಳಿಗೆ ಅವಕಾಶ ನೀಡುವುದಿಲ್ಲ. ರಾಜ್ಯವ್ಯಾಪಿ ವಿಧಿಸಿರುವ ನಿಯಾಮಗಳ ಜೊತೆಗೆ ಸ್ಥಳೀಯವಾಗಿ ನಮ್ಮ ನಿಯಮಗಳನ್ನು ಸೇರಿಸಿದ್ದೇವೆ. ಯಾವುದೇ ಅಹಿತಕರ ಘಟನೆಗಳಾಗದಂತೆ ತಡೆಯುವುದೇ ನಮ್ಮ ಉದ್ದೇಶ ಎಂದು ಪೊಲೀಸ್ ಕಮೀಷನರ್ ಅನುಪಮ್ ಅಗರ್ವಾಲ್ ಹೇಳಿದ್ದಾರೆ.
Mangalore New Year 2024 guidelines issued by Mangalore Police. Beaches to close at 10pm. Special force to monitor Moral Policing said Ips Anupam Agarwal.
13-08-25 07:03 pm
Bangalore Correspondent
ವಜಾ ಹಿಂದೆ ದೊಡ್ಡ ಷಡ್ಯಂತ್ರ ಆಗಿದೆ, ರಾಹುಲ್ ಗಾಂಧಿ...
12-08-25 10:39 pm
Rajendra Swamiji of Kodimath, Dharmasthala: ಧ...
12-08-25 07:43 pm
ಕೆಎನ್ ರಾಜಣ್ಣ ರಾಜಿನಾಮೆ ಅಲ್ಲ, ಸಚಿವ ಸ್ಥಾನದಿಂದ ಕಿ...
11-08-25 11:01 pm
ರಾಜ್ಯಪಾಲರ ವಿರುದ್ಧ ಅವಹೇಳನ ಹೇಳಿಕೆ ; ಐವಾನ್ ಡಿಸೋಜ...
11-08-25 10:26 pm
13-08-25 11:56 am
HK News Desk
ಪುಣ್ಯಕ್ಷೇತ್ರ ಯಾತ್ರೆ ಹೊರಟವರ ಮೇಲೆರಗಿದ ಜವರಾಯ ; ರ...
13-08-25 10:41 am
'ದೇಶ ಸುರಕ್ಷಿತ ಕೈಯಲ್ಲಿದೆ' ; ನರೇಂದ್ರ ಮೋದಿ ಸರ್ಕ...
12-08-25 02:49 pm
ಕಾಶ್ಮೀರಿ ಪಂಡಿತರ ಗುರಿಯಾಗಿಸಿ ಮಾರಣಹೋಮ ; 35 ವರ್ಷಗ...
12-08-25 11:42 am
ಕರ್ನಾಟಕ ಸರ್ಕಾರದಿಂದ ಹಿರಿಯ ನಾಗರಿಕರಿಗೆ ಸಾರ್ವತ್ರಿ...
12-08-25 11:35 am
13-08-25 10:22 pm
Mangalore Correspondent
Dharmasthala News Today, Point No 13: ಕಡೆಗೂ ಪ...
13-08-25 10:01 pm
The Ocean Pearl Brings “Flavors of India” to...
13-08-25 08:23 pm
ಹಠಾತ್ ಕುಸಿದು ಬಿದ್ದು ಕಾಲೇಜು ಬಸ್ ನಿರ್ವಾಹಕ ಸಾವು...
13-08-25 01:49 pm
ಶವ ಹೂತ ಪ್ರಕರಣ ; ಕೊನೆಗೂ ಎಂಟ್ರಿಯಾದ ರಾಷ್ಟ್ರೀಯ ಮಾ...
13-08-25 10:37 am
13-08-25 05:40 pm
Udupi Correspondent
Fraud, Laxmi Hebbalkar: ಸಚಿವೆ ಲಕ್ಷ್ಮೀ ಹೆಬ್ಬಾಳ...
13-08-25 04:14 pm
ಅನೈತಿಕ ಸಂಬಂಧ ಶಂಕೆ ; ಅತ್ತೆ ಮೇಲಿನ ದ್ವೇಷದಿಂದ ಕೊಲ...
12-08-25 12:36 pm
Mangalore Digital Arrest, Fraud: ಚೀನಾಕ್ಕೆ ಡ್ರ...
11-08-25 12:37 pm
ಸ್ನೇಹಿತನಿಗೆ ಬೆತ್ತಲೆ ವೀಡಿಯೋ ಶೇರ್ ಮಾಡಿದ್ಲು ಯುವತ...
08-08-25 10:07 pm