ಬ್ರೇಕಿಂಗ್ ನ್ಯೂಸ್
02-01-24 06:37 pm Mangalore Correspondent ಕರಾವಳಿ
ಮಂಗಳೂರು, ಜ.2: ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆಗೆ ಮುಹೂರ್ತ ಸನ್ನಿಹಿತವಾಗಿರುವಂತೆಯೇ 1992ರಲ್ಲಿ ರಾಜ್ಯದಿಂದ ಕರಸೇವೆಯಲ್ಲಿ ಪಾಲ್ಗೊಂಡಿದ್ದವರ ಮೇಲಿನ ದುರುದ್ದೇಶಪೂರಿತ ಪ್ರಕರಣಗಳನ್ನು ಮತ್ತೆ ಮುನ್ನಲೆಗೆ ತಂದು ಕಾಂಗ್ರೆಸ್ ಸರ್ಕಾರ ತನ್ನ ಹಿಂದೂ ವಿರೋಧಿ ನೀತಿಯನ್ನು ಹಾಗೂ ಅಲ್ಪಸಂಖ್ಯಾತರ ಓಲೈಕೆ ರಾಜಕಾರಣವನ್ನು ಮುಂದುವರಿಸಿದೆ ಎಂದು ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ್ ಆಕ್ರೋಶ ವ್ಯಕ್ತಪಡಿಸಿದರು.
"ಕೋರ್ಟ್ ನಿರ್ದೇಶನದ ಮೇರೆಗೆ ಈ ಕ್ರಮ ಕೈಗೊಳ್ಳಲಾಗಿದೆ, ಇದರಲ್ಲಿ ಸರ್ಕಾರದ ಯಾವುದೇ ಒತ್ತಡ ಇಲ್ಲ" ಎಂದು ಹುಬ್ಬಳ್ಳಿ ಧಾರವಾಡ ಪೊಲೀಸ್ ಆಯುಕ್ತರು ಹೇಳಿಕೆ ನೀಡಿದರೆ, ಸ್ವತಃ ಗೃಹ ಸಚಿವರೇ "ಹಳೆಯ ಪ್ರಕರಣಗಳನ್ನು ಇತ್ಯರ್ಥಗೊಳಿಸಲು ಸೂಚನೆ ನೀಡಿದ್ದೆ, ಅದರಂತೆ ಈ ಕ್ರಮ ಕೈಗೊಳ್ಳಲಾಗಿದೆ" ಎಂದು ಹೇಳಿಕೆ ನೀಡಿದ್ದಾರೆ. ಇಲ್ಲಿ ಯಾರ ಮಾತು ನಿಜ? ಏನೇ ಇದ್ದರೂ ಕಾಂಗ್ರೆಸ್ ಸರ್ಕಾರ ಈ ಮೂಲಕ ಹಿಂದೂ ವಿರೋಧಿಯಾಗಿ ನಡೆದುಕೊಳ್ಳುತ್ತಿರುವುದಂತೂ ಸ್ಪಷ್ಟ. ಅದರಲ್ಲಿ ಯಾವುದೇ ಸಂಶಯವೂ ಇಲ್ಲ. ರಾಮಭಕ್ತರ ಮೇಲೆ ಇಷ್ಟೊಂದು ಹಗೆ ಸಾಧಿಸುವ ಕಾಂಗ್ರೆಸ್ಸಿನವರು ರಾಮಭಕ್ತರ ಮತವೇ ನಮಗೆ ಬೇಡ ಎಂದು ಹೇಳಲಿ ನೋಡೋಣ ಎಂದು ಸವಾಲು ಹಾಕಿದರು.
ಇಡೀ ದೇಶದ ಜನತೆ ರಾಮ ಮಂದಿರದ ಸಂಭ್ರಮದಲ್ಲಿರುವಾಗ ನಮ್ಮ ರಾಜ್ಯದಲ್ಲಿ ಮಾತ್ರ ಕಾಂಗ್ರೆಸ್ ಸರ್ಕಾರ ರಾಮಭಕ್ತರ ಮೇಲೆ ಆಕ್ರೋಶದಲ್ಲಿದೆ. ಹಾಗಾಗಿಯೇ ಕರಸೇವಕರು ಹಾಗೂ ಹಿಂದೂ ಪರ ಕಾರ್ಯಕರ್ತರಿಗೆ ಉದ್ದೇಶಪೂರ್ವಕವಾಗಿ ಕಿರುಕುಳ ನೀಡಲು ಮುಂದಾಗಿದೆ. 31 ವರ್ಷಗಳ ಹಿಂದಿನ ಪ್ರಕರಣಗಳಿಗೆ ಮರು ಜೀವ ನೀಡಿ ಹಿಂದೂ ಕಾರ್ಯಕರ್ತರನ್ನು ಬೆದರಿಸುವ ತಂತ್ರ ಇದಾಗಿದೆ. ಈಗಾಗಲೇ ಜಿಲ್ಲೆಯಲ್ಲೂ ಹಲವು ಹಿಂದೂ ಕಾರ್ಯಕರ್ತರನ್ನು ಗಡಿಪಾರು ಮಾಡಲಾಗಿದ್ದು ಇನ್ನಷ್ಟು ಹೋರಾಟಗಾರರನ್ನು ಗಡಿಪಾರು ಮಾಡಲು ಸಿದ್ಧತೆ ನಡೆಸಿರುವುದು ಕಾಂಗ್ರೆಸ್ ಹಿಂದೂಗಳನ್ನು ಧಮನಿಸುವ ನೀತಿಗೆ ಸಾಕ್ಷಿ. ಇದಕ್ಕೆ ಹೆದರುವ ಪ್ರಶ್ನೆಯೇ ಇಲ್ಲ ಎಂದು ಶಾಸಕರು ಹೇಳಿದರು.
Mangaluru South MLA Vedavyas said that the Congress government is continuing its anti-Hindu policy and minority appeasement politics by bringing back to the fore the malicious cases against those who participated in kar seva from the state in 1992.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 04:39 pm
HK News Staffer
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm