ಬ್ರೇಕಿಂಗ್ ನ್ಯೂಸ್
14-01-24 08:58 pm Mangalore Correspondent ಕರಾವಳಿ
ಮಂಗಳೂರು, ಜ.14: ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅವರು ರಸ್ತೆ ದಾಟುತ್ತಿದ್ದಾಗ ಅಪರಿಚಿತ ಕಾರೊಂದು ಡಿಕ್ಕಿಯಾಗಿ ಪರಾರಿಯಾದ ಘಟನೆ ಬಜ್ಪೆ ಠಾಣೆ ವ್ಯಾಪ್ತಿಯ ತೆಂಕ ಎಡಪದವಿನಲ್ಲಿ ನಡೆದಿದೆ.
ಶಾಸಕ ರಾಜೇಶ್ ನಾಯ್ಕ್ ಅವರು ಮಕರ ಸಂಕ್ರಾಂತಿ ಹಿನ್ನೆಲೆಯಲ್ಲಿ ಮಧ್ಯಾಹ್ನ ತೆಂಕ ಎಡಪದವು ಗೋಪಾಲಕೃಷ್ಣ ದೇವಸ್ಥಾನದಲ್ಲಿ ಪೂಜೆಗೆ ತೆರಳಿದ್ದು ಮಧ್ಯಾಹ್ನ 1.30ರ ಸುಮಾರಿಗೆ ಪೂಜೆ ಮುಗಿಸಿ ರಸ್ತೆ ದಾಟಲು ನಿಂತಿದ್ದಾಗ ಎದುರಿನಿಂದ ಬಂದ ಸ್ವಿಫ್ಟ್ ಕಾರು ಡಿಕ್ಕಿ ಹೊಡೆದು ಪರಾರಿಯಾಗಿದೆ.

ಮೂಡುಬಿದ್ರೆಯಿಂದ ಮಂಗಳೂರು ಸಾಗುತ್ತಿದ್ದ ಸ್ವಿಫ್ಟ್ ಕಾರು ಚಾಲಕ ಶಾಸಕರಿಗೆ ಡಿಕ್ಕಿಯಾದರೂ ನಿಲ್ಲಿಸದೆ ಎಸ್ಕೇಪ್ ಆಗಿದ್ದಾನೆ. ಸ್ಥಳೀಯರು ಕೂಡಲೇ ಗಾಡಿ ನಂಬರ್ ನೋಟ್ ಮಾಡಿ ಬಜ್ಪೆ ಪೊಲೀಸರಿಗೆ ತಿಳಿಸಿದ್ದರು. ನಿಲ್ಲಿಸದೆ ಪರಾರಿಯಾದ ಕಾರನ್ನು ಬಳಿಕ ಗುರುಪುರದಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಹಿಟ್ ಅಂಡ್ ರನ್ ಮಾಡಿದ ಆರೋಪಿ ಮೊಹಮ್ಮದ್ ಸುಫೈಲನ್ನು ಪೊಲೀಸರು ಬಂಧಿಸಿದ್ದಾರೆ.
ಶಾಸಕ ರಾಜೇಶ್ ನಾಯ್ಕ್ ಅವರ ಎರಡೂ ಕಾಲಿಗೆ ಗಾಯಗೊಂಡಿದ್ದು, ಮಂಗಳೂರಿನ ಎಜೆ ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆದು ಮನೆಗೆ ಹಿಂತಿರುಗಿದ್ದಾರೆ. ಘಟನೆ ಬಗ್ಗೆ ಬಜ್ಪೆ ಠಾಣೆಯಲ್ಲಿ ಶಾಸಕರ ಪಿಎ ಪವನ್ ಕುಮಾರ್ ಶೆಟ್ಟಿ ದೂರು ನೀಡಿದ್ದು ಪ್ರಕರಣ ದಾಖಲಾಗಿದೆ. ಕಾರು ಚಾಲಕ ರೈಲ್ವೇ ನಿಲ್ದಾಣಕ್ಕೆಂದು ವೇಗವಾಗಿ ಬರುತ್ತಿದ್ದ. ತೆಂಕ ಎಡಪದವಿನಲ್ಲಿ ಒಂದು ಕಡೆ ಲಾರಿ ಇದ್ದುದರಿಂದ ಅದನ್ನು ಓವರ್ ಟೇಕ್ ಮಾಡಿ ಬರುವಾಗ ಶಾಸಕರ ಮೇಲೆ ಡಿಕ್ಕಿಯಾಗಿದ್ದಾನೆ. ಸ್ಥಳದಲ್ಲಿ ಜನರು ಇದ್ದುದರಿಂದ ನಿಲ್ಲಿಸದೆ ಪರಾರಿಯಾಗಿದ್ದ. ಲುಂಗಿ ಉಟ್ಟಿದ್ದ ಶಾಸಕರು ಕಾರಿನ ಹೊಡೆತಕ್ಕೆ ಸಿಲುಕಿದ್ದರು. ಆದರೆ ಅದೃಷ್ಟದಿಂದ ಯಾವುದೇ ಅಪಾಯ ಇಲ್ಲದೆ ಪಾರಾಗಿದ್ದಾರೆ ಎಂದು ಪವನ್ ಕುಮಾರ್ ತಿಳಿಸಿದ್ದಾರೆ.
Bantwal MLA Rajesh Naik has escaped a near fatal road accident in Bajpe police station limits on Sunday, January 14, in the afternoon. The legislator has suffered injuries in both of his knees and is undergoing treatment.
17-10-26 07:30 pm
HK News Staffer
Davanagere Accident: ದಾವಣಗೆರೆ ; ಸಿಎನ್ಜಿ ಲಾರಿ...
16-10-26 09:49 pm
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
17-10-26 11:04 pm
Mangaluru Staffer
ಎಂಆರ್ ಪಿಎಲ್ ದುರಂತ ; ಮೃತ ರಾಜೇಶ್ ಡಿಸಿಲ್ವ ಕುಟುಂಬ...
17-10-26 07:34 pm
ಸೆ.30ರ ಸ್ಫೋಟ ಘಟನೆಯಲ್ಲಿ 118.76 ಕೋಟಿ ನಷ್ಟ ; ಎಂಆ...
17-10-26 12:25 pm
ಪದ್ಮಶ್ರೀ ಹಾಜಬ್ಬರಿಗೆ ಚುನಾವಣಾ ಆಯೋಗವು ನೋಟೀಸು ನೀಡ...
16-10-26 10:28 pm
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
18-10-26 10:36 am
Mangaluru Staffer
ಎಂಆರ್ ಪಿಎಲ್ ಘಟಕದಲ್ಲಿ ಸ್ಫೋಟ ಘಟನೆ ; ತೀವ್ರ ಗಾಯಗೊ...
17-10-26 11:09 am
LanchuLal, Astra Fraud, Mangalore: ‘ಅಕ್ಷಯ ಪಾತ...
16-10-26 03:37 pm
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am