ಬ್ರೇಕಿಂಗ್ ನ್ಯೂಸ್
14-01-24 10:46 pm Mangalore Correspondent ಕರಾವಳಿ
ಮಂಗಳೂರು, ಜ.15: ಬೈಕಂಪಾಡಿ ಕೈಗಾರಿಕಾ ಸಂಕೀರ್ಣದಲ್ಲಿ ಕೆಮಿಕಲ್ ಕಾರ್ಖಾನೆಯೊಂದರಲ್ಲಿ ಬೆಂಕಿ ಅನಾಹುತ ಸಂಭವಿಸಿ ವೆಲ್ಡಿಂಗ್ ಕೆಲಸ ಮಾಡುತ್ತಿದ್ದ ವ್ಯಕ್ತಿಯೊಬ್ಬರು ಸುಟ್ಟ ಗಾಯಗಳಿಂದ ಮೃತಪಟ್ಟ ಘಟನೆ ನಡೆದಿದೆ.
ಜೋನ್ಸ್ ಪೆಟ್ರೋ ಕೆಮಿಕಲ್ ಪ್ರೈವೇಟ್ ಲಿಮಿಟೆಡ್ ಎಂಬ ಕಾರ್ಖಾನೆಯಲ್ಲಿ ಶನಿವಾರ ಸಂಜೆ ನಾಲ್ಕು ಗಂಟೆ ವೇಳೆಗೆ ಬೆಂಕಿ ಅನಾಹುತ ಸಂಭವಿಸಿದೆ. ವೆಲ್ಡಿಂಗ್ ಕಾರ್ಮಿಕ ರೊನಾಲ್ಡ್ ಪೌಲ್ ಮೃತ ವ್ಯಕ್ತಿ. ಇವರು ಮತ್ತು ಇತರ ಆರು ಮಂದಿ ಖಾಲಿ ತೈಲ ಟ್ಯಾಂಕ್‌ನ ದುರಸ್ತಿ ಕೆಲಸ ಮಾಡುತ್ತಿದ್ದರು. ರೊನಾಲ್ಡ್ ಅವರು ಟ್ಯಾಂಕ್ ಮೇಲ್ಭಾಗದಲ್ಲಿ ನಿಂತು ವೆಲ್ಡಿಂಗ್ ಕೆಲಸ ಮಾಡುತ್ತಿದ್ದಾಗ ಕೆಳಭಾಗದಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡು ದೊಡ್ಡ ಶಬ್ದದೊಂದಿಗೆ ಬ್ಲಾಸ್ಟ್ ಆಗಿದೆ. ರೊನಾಲ್ಡ್ ಅವರು ಟ್ಯಾಂಕ್ ಮೇಲಿನಿಂದ 20 ಅಡಿ ಕೆಳಕ್ಕೆ ಎಸೆಯಲ್ಪಟ್ಟಿದ್ದು, ತಲೆ ಮತ್ತು ಹೊಟ್ಟೆ, ಎದೆಯ ಭಾಗಕ್ಕೆ ಗಂಭೀರ ಗಾಯಗಳಾಗಿದ್ದವು. ಇತರರಿಗೂ ಸುಟ್ಟ ಗಾಯಗಳಾಗಿದ್ದು ಚಿಕಿತ್ಸೆಗೆ ಎಜೆ ಆಸ್ಪತ್ರೆಗೆ ಸಾಗಿಸಿದರೂ ರಾತ್ರಿ ವೇಳೆ ರೊನಾಲ್ಡ್ ಪೌಲ್ ಸಾವನ್ನಪ್ಪಿದ್ದಾರೆ.
ಸ್ಥಳದಲ್ಲಿ ಕೆಲಸ ಮಾಡುತ್ತಿದ್ದ ಇತರ ಕಾರ್ಮಿಕರು ಅಪಾಯದಿಂದ ಪಾರಾಗಿದ್ದಾರೆ. ಕಾರ್ಖಾನೆಯಲ್ಲಿ ಕಾರ್ಮಿಕರ ಬಗ್ಗೆ ಮುಂಜಾಗ್ರತೆ ವಹಿಸದೆ ನಿರ್ಲಕ್ಷ್ಯ ವಹಿಸಿದ್ದಾರೆಂದು ಪಣಂಬೂರು ಠಾಣೆಯಲ್ಲಿ ಕಲಂ 304ಎ ಮತ್ತು 337 ಐಪಿಸಿ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.
A man, who was working as a welding worker, died of burn injuries after a fire broke out at a chemical factory in Baikampady industrial complex here on Saturday.
13-08-25 07:03 pm
Bangalore Correspondent
ವಜಾ ಹಿಂದೆ ದೊಡ್ಡ ಷಡ್ಯಂತ್ರ ಆಗಿದೆ, ರಾಹುಲ್ ಗಾಂಧಿ...
12-08-25 10:39 pm
Rajendra Swamiji of Kodimath, Dharmasthala: ಧ...
12-08-25 07:43 pm
ಕೆಎನ್ ರಾಜಣ್ಣ ರಾಜಿನಾಮೆ ಅಲ್ಲ, ಸಚಿವ ಸ್ಥಾನದಿಂದ ಕಿ...
11-08-25 11:01 pm
ರಾಜ್ಯಪಾಲರ ವಿರುದ್ಧ ಅವಹೇಳನ ಹೇಳಿಕೆ ; ಐವಾನ್ ಡಿಸೋಜ...
11-08-25 10:26 pm
14-08-25 11:26 am
HK News Desk
ತಾಯಿ ಜೊತೆ ಅಂಡಮಾನ್ ಹೋಗ್ತೀನಿ ಎಂದಿದ್ದ ಮಗಳು ; ಬೇಡ...
13-08-25 11:56 am
ಪುಣ್ಯಕ್ಷೇತ್ರ ಯಾತ್ರೆ ಹೊರಟವರ ಮೇಲೆರಗಿದ ಜವರಾಯ ; ರ...
13-08-25 10:41 am
'ದೇಶ ಸುರಕ್ಷಿತ ಕೈಯಲ್ಲಿದೆ' ; ನರೇಂದ್ರ ಮೋದಿ ಸರ್ಕ...
12-08-25 02:49 pm
ಕಾಶ್ಮೀರಿ ಪಂಡಿತರ ಗುರಿಯಾಗಿಸಿ ಮಾರಣಹೋಮ ; 35 ವರ್ಷಗ...
12-08-25 11:42 am
13-08-25 10:22 pm
Mangalore Correspondent
Dharmasthala News Today, Point No 13: ಕಡೆಗೂ ಪ...
13-08-25 10:01 pm
The Ocean Pearl Brings “Flavors of India” to...
13-08-25 08:23 pm
ಹಠಾತ್ ಕುಸಿದು ಬಿದ್ದು ಕಾಲೇಜು ಬಸ್ ನಿರ್ವಾಹಕ ಸಾವು...
13-08-25 01:49 pm
ಶವ ಹೂತ ಪ್ರಕರಣ ; ಕೊನೆಗೂ ಎಂಟ್ರಿಯಾದ ರಾಷ್ಟ್ರೀಯ ಮಾ...
13-08-25 10:37 am
14-08-25 11:51 am
HK Staff
Fake Stock Market Scam, Fraud: 10 ಲಕ್ಷ ಹೂಡಿಕೆ...
13-08-25 05:40 pm
Fraud, Laxmi Hebbalkar: ಸಚಿವೆ ಲಕ್ಷ್ಮೀ ಹೆಬ್ಬಾಳ...
13-08-25 04:14 pm
ಅನೈತಿಕ ಸಂಬಂಧ ಶಂಕೆ ; ಅತ್ತೆ ಮೇಲಿನ ದ್ವೇಷದಿಂದ ಕೊಲ...
12-08-25 12:36 pm
Mangalore Digital Arrest, Fraud: ಚೀನಾಕ್ಕೆ ಡ್ರ...
11-08-25 12:37 pm